‘ಮೋದಿ ಇದ್ದರೆ ಮನು ಇರುತ್ತಾನೆ’; ಖರ್ಗೆಗೆ ಜಿ20 ಔತಣಕೂಟಕ್ಕೆ ಆಹ್ವಾನ ನೀಡದ್ದಕ್ಕೆ ಕಾಂಗ್ರೆಸ್ ಆಕ್ರೋಶ

Date:

ನವದೆಹಲಿಯಲ್ಲಿ ಶನಿವಾರ ನಡೆಯಲಿರುವ ಜಿ20 ಶೃಂಗಸಭೆಯ ಔತಣಕೂಟಕ್ಕೆ ರಾಜ್ಯಸಭೆಯ ವಿಪಕ್ಷ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ತಮಿಳುನಾಡಿನ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕುಮಾರ ಮಂಗಳಂ, “ಅಯೋಧ್ಯೆಯ ರಾಮಮಂದಿರದ ಭೂಮಿಪೂಜೆಗೆ ಅಂದಿನ ರಾಷ್ಟ್ರಪತಿ ಕೋವಿಂದ್‌ಗೆ ಆಹ್ವಾನ ನೀಡಿರಲಿಲ್ಲ. ನೂತನ ಸಂಸತ್ತಿನ ಉದ್ಘಾಟನಾ ಸಮಾರಂಭಕ್ಕೆ ಹಾಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನವಿಲ್ಲ. ಈಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿ20 ಪ್ರತಿನಿಧಿಗಳ ಔತಣಕೂಟಕ್ಕೆ ಆಹ್ವಾನ ನೀಡಿಲ್ಲ. ಮೋದಿ ಇದ್ದರೆ ಮನು ಇರುತ್ತಾನೆ. ಜಾತಿ ಕಾರಣಕ್ಕಾಗಿಯೇ ಇವರಿಗೆಲ್ಲ ಆಹ್ವಾನ ನೀಡಿಲ್ಲ” ಎಂದು ಕಿಡಿಕಾರಿದ್ದಾರೆ.

ದಲಿತ ನಾಯಕ ಖರ್ಗೆ ಅವರನ್ನು ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಆಹ್ವಾನಿಸದಿದ್ದಕ್ಕಾಗಿ ಕುಮಾರ ಮಂಗಳಂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, “ಪ್ರಧಾನಿ ಮೋದಿ ಅವರು ಪ್ರಾಚೀನ ಹಿಂದೂ ಋಷಿ ಮಹರ್ಷಿ ಮನುವಿನ ಪರಂಪರೆಯನ್ನು ಎತ್ತಿಹಿಡಿಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಪ ಚುನಾವಣೆ 2023 ಫಲಿತಾಂಶ: ಇಂಡಿಯಾ 4, ಬಿಜೆಪಿ 3 ಕ್ಷೇತ್ರಗಳಲ್ಲಿ ಜಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಈ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್‌ನಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿ, ‘ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ. ಭಾರತದ ಜನಸಂಖ್ಯೆಯ ಶೇ 60 ಪ್ರತಿಶತದಷ್ಟು ಜನಸಂಖ್ಯೆಯ ನಾಯಕತ್ವ ವಹಿಸಿರುವ ಪ್ರಮುಖ ನಾಯಕರಿಗೆ ಸರಕಾರ ಗೌರವಿಸುವುದಿಲ್ಲ. ಸರಕಾರದ ಕ್ರಮವು ಅದರ ಚಿಂತನೆಯ ಬಗ್ಗೆ ಹೇಳುತ್ತದೆ. ಜನರು ಇದರ ಹಿಂದೆ ಯಾವ ರೀತಿಯ ಆಲೋಚನೆ ಇದೆ ಎಂಬುದರ ಕುರಿತು ಯೋಚಿಸಬೇಕು”ಎಂದರು.

“ರಾಹುಲ್ ಗಾಂಧಿಯವರು ಪ್ರಸ್ತುತ ಬೆಲ್ಜಿಯಂ, ಫ್ರಾನ್ಸ್ ಮತ್ತು ನಾರ್ವೆ ಯುರೋಪಿಯನ್ ತ್ರಿರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಗುರುವಾರ ಬ್ರಸೆಲ್ಸ್‌ನಲ್ಲಿ ಯುರೋಪಿಯನ್ ಪಾರ್ಲಿಮೆಂಟ್ (ಎಂಇಪಿ) ಕೆಲವು ಸದಸ್ಯರೊಂದಿಗೆ ಸಭೆಗಳನ್ನು ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...