ಅದಾನಿ-ಅಂಬಾನಿ ಬಳಿ ಕಪ್ಪು ಹಣ ಇದೆ ಅಂತ ಕೊನೆಗೂ ಮೋದಿ ಒಪ್ಪಿದ್ರು: ಅಶೋಕ್ ಗೆಹ್ಲೋಟ್

Date:

ಅದಾನಿ ಅಂಬಾನಿ ಬಳಿ ಕಪ್ಪು ಹಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ವ್ಯಂಗ್ಯವಾಡಿದರು.

ಚುನಾವಣೆ ಬಂದಾಗ ರಾಹುಲ್ ಗಾಂಧಿ ಅದಾನಿ ಅಂಬಾನಿಗಳ ಹೆಸರು ಹೇಳುವುದಿಲ್ಲ. ಅವರಿಂದ ಹಣ ಬಂದಿರಬಹುದು ಎಂದು ಪ್ರಧಾನಿ ಮೋದಿ ತನ್ನ ಚುನಾವಣಾ ಪ್ರಚಾರದಲ್ಲಿ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಶೋಕ್ ಗೆಹ್ಲೋಟ್, “ತಮ್ಮ ಹೇಳಿಕೆ ಮೂಲಕ ಅದಾನಿ-ಅಂಬಾನಿ ಕಪ್ಪುಹಣ ಸಂಗ್ರಹಿಸಿದ್ದಾರೆ ಎಂದು ಮೋದಿ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಚುನಾವಣೆ ಘೋಷಣೆಯಾದ ಬಳಿಕ ಈ ಜನರು (ಕಾಂಗ್ರೆಸ್ ನಾಯಕರು) ಅದಾನಿ-ಅಂಬಾನಿಯನ್ನು ನಿಂದನೆ ಮಾಡುವುದನ್ನು ನಿಲ್ಲಿಸಿದ್ದಾರೆ. ಶೆಹಜಾದಾ (ರಾಹುಲ್ ಗಾಂಧಿಯ ಬಗ್ಗೆ ಮೋದಿ ವ್ಯಂಗ್ಯ) ಅಂಬಾನಿ ಅದಾನಿಯಿಂದ ಎಷ್ಟು ಹಣ ಪಡೆದಿದ್ದಾರೆ ಎಂದು ಬಹಿರಂಗಪಡಿಸಲಿ. ಕಾಂಗ್ರೆಸ್‌ಗೆ ಟೆಂಪೋಗಳಲ್ಲಿ ನೋಟುಗಳು (ಹಣ) ಬಂದಿದೆಯೇ? ರಾತ್ರೋರಾತ್ರಿ ಅಂಬಾನಿ-ಅದಾನಿ ನಿಂದನೆ ನಿಲ್ಲಬೇಕಾದರೆ ಯಾವ ಡೀಲ್ ನಡೆದಿದೆ” ಎಂದು ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಶೆಹಜಾದಾ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, “ಅದಾನಿ-ಅಂಬಾನಿ ಬಳಿ ಅಪಾರ ಪ್ರಮಾಣದ ಕಪ್ಪುಹಣವಿದೆ ಎಂದು ಪ್ರಧಾನಿ ಕೊನೆಗೂ ಹತ್ತು ವರ್ಷದ ಬಳಿಕ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

“ಈಗ, ಮೋದಿ ಅವರು ಇದಕ್ಕೂ ಮೊದಲು ಯಾರ ಸ್ಥಳದಲ್ಲಿ ಕರೆನ್ಸಿ ನೋಟುಗಳಿಂದ ತುಂಬಿದ ಗೋಣಿಚೀಲಗಳು ಮತ್ತು ಟೆಂಪೋಗಳನ್ನು ಖಾಲಿ ಮಾಡಲಾಯಿತು ಅಂತ ಹೇಳಬೇಕಾಗುತ್ತದೆ” ಎಂದು ಕುಟುಕಿದರು.

ಹಾಗೆಯೇ, “ರಾಹುಲ್ ಗಾಂಧಿ ಬಹಳ ಸಮಯದಿಂದ ಸತ್ಯಕ್ಕಾಗಿ ಹೋರಾಡುತ್ತಿದ್ದಾರೆ. ಅಂತಿಮ ಗೆಲುವು ಸತ್ಯ, ಜೂನ್ 4 ರಂದು ನ್ಯಾಯ ಮತ್ತು ಸತ್ಯಕ್ಕೆ ಜಯ ಸಿಗುತ್ತದೆ” ಎಂದು ಭರವಸೆ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ತಿರುಗೇಟು

ಇನ್ನು ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಮೋದಿ ಅವರೇ ಕೊಂಚ ಭಯಪಟ್ಟಿದ್ದೀರಾ? ಸಾಮಾನ್ಯವಾಗಿ ನೀವು ಮುಚ್ಚಿನ ಕೋಣೆಯಲ್ಲಿ ಕೂತು ಅದಾನಿ ಅಂಬಾನಿ ಬಗ್ಗೆ ಮಾತನಾಡುತ್ತೀರಿ. ಮೊದಲ ಬಾರಿಗೆ ನೀವು ಸಾರ್ವಜನಿಕವಾಗಿ ಅದಾನಿ ಅಂಬಾನಿ ಎಂದಿದ್ದೀರಿ. ಟೆಂಪೋದಲ್ಲಿ ಹಣ ನೀಡುತ್ತಾರೆ ಎಂದು ನಿಮಗೆ ತಿಳಿದಿದೆಯಲ್ವ, ಇದು ನಿಮ್ಮ ವೈಯಕ್ತಿಕ ಅನುಭವವೇ” ಎಂದು ಪ್ರಧಾನಿ ಕಾಳೆದಿದ್ದಾರೆ.

“ಸಿಬಿಐ, ಇಡಿಯನ್ನು ಕಳುಹಿಸಿ. ಎಲ್ಲ ವಿಚಾರಣೆಯನ್ನು ಮಾಡಿಸಿ. ಹೆದರಬೇಡಿ ಮೋದಿ ಜಿ” ಎಂದು ವ್ಯಂಗ್ಯವಾಡಿದ ರಾಹುಲ್ ಗಾಂಧಿ ಅವರು, “ಪ್ರಧಾನಿ ಮೋದಿ ಅವರು ಇವರಿಗೆ (ಅದಾನಿ ಅಂಬಾನಿ) ಎಷ್ಟು ಹಣವನ್ನು ನೀಡಿದ್ದಾರೋ ಅಷ್ಟು ಹಣವನ್ನು ನಾವು ದೇಶದ ಬಡವರಿಗೆ ನೀಡುತ್ತೇವೆ” ಎಂದು ಪುನರುಚ್ಛರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...