2014ರಿಂದಲೂ ರಜೆ ತೆಗೆದುಕೊಳ್ಳದ ಮೋದಿ; ಪ್ರಧಾನಿ ಕಚೇರಿಯ ಉತ್ತರಕ್ಕೆ ನೆಟ್ಟಿಗರು ಹೇಳುತ್ತಿರುವುದೇನು?

Date:

  • ಆರ್‌ಟಿಐ ಮೂಲಕ ಪ್ರಶ್ನೆ ಕೇಳಿದ್ದ ಪುಣೆ ಮೂಲದ ಪ್ರಫುಲ್ ಪಿ ಸರ್ದಾ
  • ನೆಟ್‌ಫ್ಲಿಕ್ಸ್‌ಗಾಗಿ ಶೂಟಿಂಗ್ ಮಾಡುತ್ತಿದ್ದದ್ದು ಸರ್ಕಾರಿ ಕೆಲಸವೇ ಎಂದು ಕೇಳಿದ ನೆಟ್ಟಿಗರು

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಎಷ್ಟು ದಿನ ರಜೆ ತೆಗೆದುಕೊಂಡಿದ್ದಾರೆ ಎಂದು ಪ್ರಶ್ನಿಸಿ ಆರ್​ಟಿಐ ಮೂಲಕ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಪ್ರಧಾನಿ ಕಚೇರಿ, 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಯಾವುದೇ ರಜೆ ತೆಗೆದುಕೊಂಡಿಲ್ಲ ಎಂದು ಉತ್ತರಿಸಿದೆ.

ಪುಣೆ ಮೂಲದ ಪ್ರಫುಲ್ ಪಿ ಸರ್ದಾ ಎಂಬವರು, ಆರ್​ಟಿಐ ಮೂಲಕ ಕೇಳಿದ್ದ ಪ್ರಶ್ನೆಗಳಿಗೆ ಪ್ರಧಾನಿ ಕಾರ್ಯಾಲಯ ಉತ್ತರಿಸಿದ್ದು, “ಪ್ರಧಾನಿ ಮೋದಿಯವರು 2014 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಯಾವುದೇ ರಜೆ ತೆಗೆದುಕೊಂಡಿಲ್ಲ. ಅಲ್ಲದೇ, ಕಳೆದ 9 ವರ್ಷಗಳಲ್ಲಿ ದೇಶ -ವಿದೇಶಗಳಲ್ಲಿ 3000ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ” ಎಂದು ಮಾಹಿತಿ ನೀಡಿದೆ.

ಕಳೆದ ಜುಲೈ 31, 2023ರಂದು ಈ ಉತ್ತರವನ್ನು ನೀಡಿದ್ದು, ಇದಕ್ಕೂ ಮುನ್ನ 2016ರಲ್ಲೂ ಪ್ರಧಾನಿ ಮೋದಿಗೆ ಸಂಬಂಧಿಸಿದಂತೆ ಆರ್​ಟಿಐ ಮೂಲಕ ಪ್ರಧಾನಿ ಕಚೇರಿಯಿಂದ ಉತ್ತರ ಕೇಳಲಾಗಿತ್ತು. ಆಗಲೂ ಇದುವರೆಗೂ ರಜೆ ತೆಗೆದುಕೊಂಡಿಲ್ಲ ಎಂಬ ಉತ್ತರವೇ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆರ್​ಟಿಐ ಪ್ರಶ್ನೆ ಹಾಗೂ ಅದರ ಉತ್ತರದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲವು ಬಿಜೆಪಿ ನಾಯಕರು ಇದನ್ನು ಟ್ವೀಟ್​ ಮಾಡಿ ‘ನಮ್ಮ ಪ್ರಧಾನಿ, ನಮ್ಮ ಹೆಮ್ಮೆ’ ಎಂದು ಬರೆದುಕೊಂಡಿದ್ದಾರೆ.

ಆದರೆ ಈ ನಡುವೆ ಪ್ರಧಾನಿ ಕಚೇರಿ ನೀಡಿರುವ ಮಾಹಿತಿಯನ್ನು ಪ್ರಶ್ನಿಸಿರುವ ಹಲವು ನೆಟ್ಟಿಗರು, ಇದರಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ ಎಷ್ಟು ಎಂದು ತಿಳಿಸಿದೆಯೇ ಎಂದು ಅಣಕವಾಡಿದ್ದಾರೆ.

ಅಲ್ಲದೇ, 2019ರಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾದ ‘ಮ್ಯಾನ್ Vs ವೈಲ್ಡ್’ ವೆಬ್ ಸೀರೀಸ್‌ಗಾಗಿ ಬೀಯರ್ ಗ್ರಿಲ್ಸ್‌ ಜೊತೆಗೆ ಶೂಟಿಂಗ್ ನಡೆಸಿದ್ದಾರಲ್ಲವೇ. ಅದೇನು ಸರ್ಕಾರಿ ಕೆಲಸವೇ? ಎಂದು ಹಲವರು ವಿಡಿಯೋ ಹಂಚಿಕೊಂಡು ಪ್ರಶ್ನಿಸಿದ್ದಾರೆ.

ಸುಳ್ಳಿಗೂ ಒಂದು ಮಿತಿಬೇಡವೇ? ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದೆಲ್ಲವೂ ಸರ್ಕಾರಿ ಕೆಲಸವೇ? ಇವೆಲ್ಲವೂ ರಜೆಯ ವ್ಯಾಪ್ತಿಗೆ ಬರುವುದಿಲ್ಲವೇ? ಎಂದು ಹಲವರು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...