‘ಶಿಕ್ಷಣ ಮಾಫಿಯಾ ಎದುರು ಸಂಪೂರ್ಣ ಅಸಹಾಯಕರಾಗಿದ್ದಾರೆ ಮೋದಿ’

Date:

ಆರೋಗ್ಯ ಸಚಿವಾಲಯವು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ-ಸ್ನಾತಕೋತ್ತರವನ್ನು (NEET-PG) ಮುಂದೂಡಿದೆ. ನೀಟ್ ಮುಂದೂಡಿಕೆ, ಅಕ್ರಮಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, “ಪ್ರಶ್ನೆಪತ್ರಿಕೆ ಸೋರಿಕೆ ದಂಧೆ ಮತ್ತು ಶಿಕ್ಷಣ ಮಾಫಿಯಾದ ಮುಂದೆ ಪ್ರಧಾನಿ ಮೋದಿ ಸಂಪೂರ್ಣವಾಗಿ ಅಸಹಾಯಕರಾಗಿದ್ದಾರೆ” ಎಂದಿದ್ದಾರೆ.

ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ನಡೆದಿರುವ ಆರೋಪಗಳಿಂದಾಗಿ ನೀಟ್‌ ಪರೀಕ್ಷೆಯು ರಾಜಕೀಯ ಮತ್ತು ಶೈಕ್ಷಣಿಕ ವಲಯದಲ್ಲಿ ಭಾರೀ ವಿವಾದ ಸೃಷ್ಠಿಸಿತ್ತು. ಇದೇ ಸಮಯದಲ್ಲಿ, ನೀಟ್‌ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌, “ಈಗ NEET PGಅನ್ನು ಸಹ ಮುಂದೂಡಲಾಗಿದೆ! ನರೇಂದ್ರ ಮೋದಿಯವರ ಆಡಳಿತದಲ್ಲಿ ಶಿಕ್ಷಣ ವ್ಯವಸ್ಥೆ ಹಾನಿಗೊಂಡಿರುವುದಕ್ಕೆ ಇದು ಮತ್ತೊಂದು ದುರದೃಷ್ಟಕರ ಉದಾಹರಣೆಯಾಗಿದೆ. ಬಿಜೆಪಿ ಆಡಳಿತದಲ್ಲಿ, ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನಕ್ಕಾಗಿ ‘ಅಧ್ಯಯನ’ ಮಾಡುವ ವಾತಾವರಣವಿಲ್ಲ. ಬದಲಾಗಿ, ತಮ್ಮ ಭವಿಷ್ಯವನ್ನು ಉಳಿಸಿಕೊಳ್ಳಲು ಸರ್ಕಾರದೊಂದಿಗೆ ‘ಹೋರಾಟ’ ಮಾಡುವ ಪರಿಸ್ಥಿತಿ ಎದುರಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಸ್ಪಷ್ಟವಾಗಿದೆ – ಪ್ರತಿ ಬಾರಿಯೂ ಮೌನವಾಗಿದ್ದುಕೊಂಡು, ಚಮತ್ಕಾರವನ್ನು ಎದುರು ನೋಡುತ್ತಿದ್ದ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ದಂಧೆ ಮತ್ತು ಶಿಕ್ಷಣ ಮಾಫಿಯಾದ ಮುಂದೆ ಸಂಪೂರ್ಣವಾಗಿ ಅಸಹಾಯಕರಾಗಿದ್ದಾರೆ. ನರೇಂದ್ರ ಮೋದಿಯವರ ಅಸಮರ್ಥ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಅಪಾಯವಾಗಿದೆ – ಈ ಅಪಾಯದಿಂದ ನಾವು ದೇಶದ ಭವಿಷ್ಯವನ್ನು ಉಳಿಸಬೇಕು” ಎಂದು ಹೇಳಿದ್ದಾರೆ.

ಆರೋಗ್ಯ ಸಚಿವಾಲಯವು ಪ್ರಕಟಣೆ ಬಿಡುಗಡೆ ಮಾಡಿದ್ದು, ಪ್ರತಿ ವರ್ಷ ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ NEET-PG ಪರೀಕ್ಷಾ ಪ್ರಕ್ರಿಯೆಗಳ ದೃಢತೆಯನ್ನು ಸಂಪೂರ್ಣ ಮೌಲ್ಯಮಾಪನದೊಂದಿಗೆ ಕೈಗೊಳ್ಳಲು ನಿರ್ಧರಿಸಿದೆ. ಹೀಗಾಗಿ, ಪರೀಕ್ಷೆಯನ್ನು ಮುಂದೂಡಲಾಗಿದ್ದು, ಹೊಸ ದಿನಾಂಕವನ್ನು ಆದಷ್ಟು ಬೇಗ ತಿಳಿಸಲಾಗುವುದು ಎಂದು ಹೇಳಿದೆ.

ಸರಿಸುಮಾರು 2 ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಈ ನಿರ್ಧಾರವನ್ನು ನೀಟ್ ಪಿಜಿ ಆಕಾಂಕ್ಷಿಗಳು ತೀವ್ರವಾಗಿ ಟೀಕಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮೋದಿ ಸರ್ಕಾರವನ್ನು ಟೀಕಿಸಿದ್ದು, “ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕಾದರೆ ಮೋದಿ ಸರ್ಕಾರ ಹೊಣೆಹೊತ್ತುಕೊಳ್ಳಬೇಕು. ಇದೀಗ NEET-PG ಪರೀಕ್ಷೆಯನ್ನು ಮುಂದೂಡಲಾಗಿದೆ. ಕಳೆದ 10 ದಿನಗಳಲ್ಲಿ 4 ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ/ಮುಂದೂಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಭ್ರಷ್ಟಾಚಾರ, ಅಕ್ರಮಗಳು ಮತ್ತು ಶಿಕ್ಷಣ ಮಾಫಿಯಾ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ನುಸುಳಿದೆ. ಅಸಂಖ್ಯಾತ ಯುವಜನರು ಶೈಕ್ಷಣಿಕ ಅವ್ಯವಹಾರದ ತೊಂದರೆಯಿಂದ ಬಳಲುತ್ತಿದ್ದು, ಅವರ ಮೌನ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...