ಮೋದಿ ರಾಜಕೀಯ ಇತಿಹಾಸ ‘ಹಿಂದು-ಮುಸ್ಲಿಂ ವಿವಾದ’ವನ್ನ ಆಧರಿಸಿದೆ: ದಿಗ್ವಿಜಯ ಸಿಂಗ್

Date:

ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸವು ಹಿಂದು-ಮುಸ್ಲಿಂ ವಿವಾದವನ್ನು ಆಧರಿಸಿದೆ. ಇದರಿಂದ ಯಾರಿಗೆ ಲಾಭವಾಗಿದೆ – ಯಾರಿಗೆ ತೊಂದರೆಯಾಗಿದೆ ಎಂಬುದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಮಧ್ಯಪ್ರದೇಶದ ರಾಜ್‌ಗಢ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಸಿಂಗ್, “ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಬಗ್ಗೆ ಅಸಮಾಧಾನವಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ನಿಜವಾದ ಸಮಸ್ಯೆಗಳ ಬದಲಿಗೆ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದೆ. ನೈಜ ಸಮಸ್ಯೆಗಳ ಆಧಾರದ ಮೇಲೆ ಎಲ್ಲಿ ಚುನಾವಣೆ ನಡೆಸಲಾಗುತ್ತಿದೆ. ಕಾಂಗ್ರೆಸ್‌ ವಿರುದ್ಧ ಬಿಜೆಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ” ಎಂದು ಕಿಡಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್ ಮಾದರಿ ಬಗ್ಗೆ ವ್ಯಂಗ್ಯವಾಡಿದ ಸಿಂಗ್, “ನೀವು ಗುಜರಾತ್‌ನ ಮಾನವ ಅಭಿವೃದ್ಧಿ ಸೂಚ್ಯಂಕವನ್ನು (ಎಚ್‌ಡಿಐ) ನೋಡಿದರೆ, ಅದು ದೇಶದ ಟಾಪ್ 10 ರಾಜ್ಯಗಳಲ್ಲಿ ಸ್ಥಾನವನ್ನೇ ಪಡೆದಿಲ್ಲ. ಹಾಗಿದ್ದರೆ, ಗುಜರಾತ್ ಮಾದರಿ ಎಂದರೆ ಏನು” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯ ಚುನಾವಣಾ ಯಶಸ್ಸಿನಲ್ಲಿ ಇವಿಎಂಗಳ ಪಾತ್ರವಿದೆ ಎಂಬುದನ್ನು ನಾನು ನಂಬುತ್ತೇನೆ. ಇವಿಎಂಗಳ ಕುರಿತು ಸುಪ್ರೀಂ ಕೋರ್ಟ್‌ ನೀಡಿದ ಇತ್ತೀಚಿನ ತೀರ್ಪಿನ ಬಗ್ಗೆ ಅಸಮಾಧಾನವಿದೆ. ಈ ಬಗ್ಗೆ ಚುನಾವಣೆ ಮುಗಿದ ಬಳಿಕ ಮಾತನಾಡುತ್ತೇನೆ” ಎಂದಿದ್ದಾರೆ.

ಕಳೆದ ಬಾರಿ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಸೋತಿದ್ದ ಸಿಂಗ್, ಈ ಬಾರಿ ಹಾಲಿ ಬಿಜೆಪಿ ಸಂಸದ ರೋಡ್ಮಲ್ ನಗರ್‌ ವಿರುದ್ಧ ಕಣಕ್ಕಿಳಿದಿದ್ದಾರೆ. ನಗರ್ ಅವರು 2014ರಿಂದ ರಾಜ್‌ಗಢವನ್ನು ಪ್ರತಿನಿಧಿಸುತ್ತಿದ್ದಾರೆ. ಇದೇ ಕ್ಷೇತ್ರದಲ್ಲಿ ಸಿಂಗ್ ಅವರು 1984 ಮತ್ತು 1991ರಲ್ಲಿ ಗೆದ್ದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...