ಕಾಂಗ್ರೆಸ್‌ ಪ್ರಣಾಳಿಕೆ ‘ಮುಸ್ಲಿಂ ಲೀಗ್‌’ ಗುರುತು ಹೊಂದಿದೆ ಎಂದ ಮೋದಿ; ಬಿಜೆಪಿ ಇತಿಹಾಸ ನೆನಪಿಸಿದ ಕಾಂಗ್ರೆಸ್‌

Date:

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಗುರುತುಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಅವರ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದ್ದು, “ಮೋದಿಗೆ ಅವರ ಇತಿಹಾಸ ಗೊತ್ತಿಲ್ಲ.  1940ರ ದಶಕದ ಆರಂಭದಲ್ಲಿ ಮುಸ್ಲಿಂ ಲೀಗ್‌ನೊಂದಿಗೆ ಬಂಗಾಳದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿದ್ದವರು ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರೇ ಹೊರತು, ಬೇರಾರು ಅಲ್ಲ” ಎಂದು ಹೇಳಿದೆ.

ಶನಿವಾರ, ಸಹರಾನ್‌ಪುರದಲ್ಲಿ ಚುನಾವಣಾ ಪ್ರಚಾರದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, “ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ. ಆದರೆ ಅದರಲ್ಲಿ ಎಡಪಂಥೀಯರ ಪ್ರಾಬಲ್ಯವಿದೆ” ಎಂದು ಹೇಳಿದ್ದರು.

ಪ್ರಧಾನಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ರಧಾನಿ ಅವರಿಗೆ ಅವರ ಇತಿಹಾಸ ತಿಳಿದಿಲ್ಲ. ವಾಸ್ತವವಾಗಿ, ಆಗ ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದ ಮುಖರ್ಜಿ ಅವರು ಬಂಗಾಳದಲ್ಲಿ ಮುಸ್ಲಿಂ ಲೀಗ್‌ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಅಲ್ಲಿ ಅವರೇ ಸಮ್ಮಿಶ್ರ ಸರ್ಕಾರ ರಚಿಸಿದ್ದರೇ ಹೊರತು, ಬೇರೆ ಯಾರಿಗೂ ಅಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೂ ಮಹಾಸಭಾ ಸಿಂಧ್ ಮತ್ತು ಈಶಾನ್ಯ ಪ್ರಾಂತ್ಯದಲ್ಲಿ ಮುಸ್ಲಿಂ ಲೀಗ್‌ ಜೊತೆ ಮೈತ್ರಿ ಮಾಡಿಕೊಂಡಿತ್ತು. ಒಡೆದು ಆಳುವ ರಾಜಕಾರಣ ಮಾಡುತ್ತಿರುವುದು ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ” ಎಂದು ತಿರುಗೇಟು ಕೊಟ್ಟಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಐದು ‘ನ್ಯಾಯ ಗ್ಯಾರಂಟಿ’ಯುಳ್ಳ 25 ಭರವಸೆಗಳ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆ ಬಿಡುಗಡೆಯಾದ ಒಂದು ದಿನದ ನಂತರ ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದರು.

ಶಿಷ್ಯವೇತನದ ಹಕ್ಕು, ಎಂಎಸ್‌ಪಿಗೆ ಕಾನೂನು ಖಾತರಿ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿ ವಿಸ್ತರಿಸಲು 50%ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿ, ರಾಷ್ಟ್ರವ್ಯಾಪಿ ಜಾತಿ ಗಣತಿ ಹಾಗೂ ಅಗ್ನಿಪಥ್ ಯೋಜನೆ ರದ್ದುಗೊಳಿಸುವುದು ಕಾಂಗ್ರೆಸ್‌ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...