ಇಂಡಿ ಒಕ್ಕೂಟದ ಇತಿಹಾಸ ಕೇವಲ ಹಗರಣ: ಪ್ರಧಾನಿ ಮೋದಿ

Date:

“ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ ಮಾತನಾಡಿದರು.

“ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವು ಮಾಡಿರುವ ಕಾರ್ಯಗಳ ಪ್ರಮಾಣಪತ್ರದ ಜೊತೆಯಲ್ಲಿ ನಿಮ್ಮ ಆಶೀವಾರ್ದ ಪಡೆಯಲು ಬಂದಿದ್ದೇನೆ. ನಿಮ್ಮನ್ನೇ ನನ್ನ ಪರಿವಾರ ಎಂದು ನಾನು ಭಾವಿಸಿದ್ದೇನೆ. ನಿಮಗಾಗಿ ಹಗಲು ರಾತ್ರಿ ನಾನು ದುಡಿಯುತ್ತೇನೆ. ನಿಮ್ಮ ಕನಸೇ ಮೋದಿಯ ಸಂಕಲ್ಪ. ದಿನದ 24 ಗಂಟೆಯೂ, ವಾರದ ಏಳು ದಿನವೂ, 2047ರವರೆಗೆ ನಿಮಗಾಗಿ ಕೆಲಸ ಮಾಡುವ ಸಂಕಲ್ಪ ಹೊಂದಿದ್ದೇನೆ. ನಾನು ಯೋಜನೆಯನ್ನು ಮಾತ್ರ ಮಾಡುವುದಲ್ಲ ಅದರ ಗ್ಯಾರಂಟಿಯನ್ನು ನೀಡುತ್ತೇನೆ” ಎಂದು ಪ್ರಧಾನಿ ಚಿಕ್ಕಬಳ್ಳಾಪುರ ಪ್ರಚಾರದಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ- ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

“ನಮೋ ಡ್ರೋನ್ ಮೂಲಕ ಹೆಣ್ಣು ಮಕ್ಕಳಿಗೆ ಡ್ರೋನ್‌ನ ತರಬೇತಿ ನೀಡಲಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರದ ಹೊಲಗಳಲ್ಲಿ ನಮ್ಮ ಹೆಣ್ಣುಮಕ್ಕಳು ಡ್ರೋನ್ ಮೂಲಕ ವ್ಯವಸಾಯಕ್ಕೆ ಸಹಾಯ ಮಾಡುವ ದಿನ ದೂರವಿಲ್ಲ” ಎಂದರು.

ಇನ್ನು ಬೆಂಗಳೂರಿನಲ್ಲಿ ಮಾತನಾಡಿದ ಪ್ರಧಾನಿ, “ನೀವು ಎನ್‌ಡಿಎ ಮತ್ತು ಇಂಡಿ ಒಕ್ಕೂಟ ಎರಡರ ಪ್ರಚಾರ ಅಭಿಯಾನವನ್ನು ನೋಡುತ್ತಿರುವಿರಿ. ಕಾಂಗ್ರೆಸ್‌ ಮತ್ತು ಇಂಡಿ ಒಕ್ಕೂಟದ ವಿಷಯ ಮೋದಿ, ಮೋದಿ ಪರಿವಾರ, ಮೋದಿ ಮೇಲೆ ಹಾಕಲಾಗುತ್ತಿರುವ ಸುಳ್ಳು ಆರೋಪಗಳಾಗಿದೆ. ಆದರೆ ನನ್ನ ಚಿತ್ತ 21ನೇ ಶತಮಾನದ ಭಾರತದ ವಿಕಾಸವಾಗಿದೆ. ಭಾರತದ ನಾಗರಿಕರ ಸುವಿಧ ಮತ್ತು ಸಮೃದ್ಧಿಯಾಗಿದೆ” ಎಂದು ಹೇಳಿದರು.

“ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಉತ್ತಮ ನಗರವನ್ನಾಗಿಸುವ ಕನಸು ಕಂಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಕೆಲವೇ ಸಮಯದಲ್ಲಿಯೇ ಇಲ್ಲಿನ ಸ್ಥಿತಿಯನ್ನು ಬಿಗಡಾಯಿಸಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...