ಮೋದಿ ಉಪನಾಮ ಪ್ರಕರಣ: ರಾಹುಲ್‌ ಗಾಂಧಿ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಜಾರ್ಖಂಡ್ ಹೈಕೋರ್ಟ್

Date:

ಪ್ರಧಾನಿ ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಜಾರ್ಖಂಡ್ ಹೈಕೋರ್ಟ್ ಸೂಚನೆ ನೀಡಿದೆ.

2019 ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಅವರು ಮಾಡಿದ ಮೋದಿ ಉಪನಾಮದ ಟೀಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಜಾರ್ಖಂಡ್ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಅಲ್ಲದೆ ಮುಂದಿನ ವಿಚಾರಣೆ ಆಗಸ್ಟ್ 16 ರಂದು ನಡೆಯಲಿದೆ.

ರಾಹುಲ್ ಗಾಂಧಿ ವಿರುದ್ಧ ಪ್ರದೀಪ್‌ ಮೋದಿ ಎಂಬ ಬಿಜೆಪಿ ಕಾರ್ಯಕರ್ತರೊಬ್ಬರು ರಾಂಚಿ ಸಿವಿಲ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 2019 ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಸಭೆಯೊಂದರಲ್ಲಿ ಭಾಷಣ ಮಾಡಿದ್ದ ರಾಹುಲ್‌ ಗಾಂಧಿ, “ಕೊಲೆಗಾರನು ಬಿಜೆಪಿಯಲ್ಲಿ ಮಾತ್ರ ಪಕ್ಷದ ಅಧ್ಯಕ್ಷನಾಗಬಹುದು, ಅದು ಕಾಂಗ್ರೆಸಿನಲ್ಲಿ ಸಾಧ್ಯವಿಲ್ಲ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೆಹಲಿ ವಿದ್ಯುತ್ ನಿಯಂತ್ರಕ ಮುಖ್ಯಸ್ಥರ ನೇಮಕ ವಿವಾದ: ಕೇಂದ್ರ, ಎಲ್‌ಜಿಗೆ ಸುಪ್ರೀಂ ನೋಟಿಸ್ 

ರಾಹುಲ್‌ ಗಾಂಧಿಯ ಈ ಹೇಳಿಕೆ ವಿರುದ್ಧ ಸಿವಿಲ್ ನ್ಯಾಯಾಲಯದಲ್ಲಿ ಎರಡು ಮಾನನಷ್ಟ ಮೊಕದ್ದಮೆಗಳನ್ನು ದಾಖಲಿಸಲಾಗಿತ್ತು. ಆದರೆ ಕೆಳ ನ್ಯಾಯಾಲಯವು ಅವರ ವಿರುದ್ಧ ವಾರಂಟ್ ಹೊರಡಿಸಿದ ನಂತರ ಅವುಗಳನ್ನು ಜಾರ್ಖಂಡ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈಗ ನ್ಯಾಯಾಲಯವು ‘ಬಲವಂತದ ಕ್ರಮ ಬೇಡ’ ಎಂಬ ಆದೇಶವನ್ನು ಹೊರಡಿಸುವ ಮೂಲಕ ರಾಹುಲ್ ಗಾಂಧಿಗೆ ರಿಲೀಫ್ ನೀಡಿದೆ.

ರಾಂಚಿಯ ಸಂಸದ – ಶಾಸಕ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ರಾಹುಲ್ ಗಾಂಧಿ ಅವರ ವಕೀಲರು ಜಾರ್ಖಂಡ್ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿಟ್ ಅರ್ಜಿ ಸಲ್ಲಿಸಿದ್ದರು. ಇದೇ ಅರ್ಜಿಯನ್ನು ಸಂಸದ-ಶಾಸಕ ನ್ಯಾಯಾಲಯ ತಿರಸ್ಕರಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...