ಟ್ರಂಪ್‌ ಮಾತು ಕೇಳಿ ಕದನ ವಿರಾಮಕ್ಕೆ ಒಪ್ಪಿದ್ದು ಸರಿಯಲ್ಲ: ತಮ್ಮದೇ ಸರ್ಕಾರದ ವಿರುದ್ಧ ಹೊರಟ್ಟಿ ಆಕ್ರೋಶ

Date:

ಪಾಕಿಸ್ತಾನಕ್ಕೆ ಒಂದು ಗತಿ ಕಾಣಿಸಲು ಇದೊಂದು ಒಳ್ಳೆಯ ಅವಕಾಶವಾಗಿತ್ತು. ಟ್ರಂಪ್ ಮಾತು ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಕದನ ವಿರಾಮಕ್ಕೆ ಒಪ್ಪಿದ್ದು ಸರಿಯಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಯಾರು? ಅಮೆರಿಕದ ವ್ಯವಹಾರಗಳಲ್ಲಿ ನಾವು ಮಧ್ಯಪ್ರವೇಶಿಸಿದರೆ ಅವರು ನಮ್ಮ ಮಾತು ಕೇಳುತ್ತಾರೆಯೇ. ನಾವೇಗೆ ಟ್ರಂಪ್‌ ಮಾಡಿಗೆ ಮಣೆ ಹಾಕಬೇಕು” ಎಂದು ಪ್ರಶ್ನಿಸಿದ್ದಾರೆ.

“ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕಿಸ್ತಾನ ತನ್ನ ದುರ್ವರ್ತನೆ ತೋರಿಸಿದೆ. ಕದನ ವಿರಾಮ ಘೊಷಿಸಿದ ಕೆಲವೆ ನಿಮಿಷಗಳಲ್ಲಿ ಮತ್ತೆ ಗಡಿ ಭಾಗದಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದ ವಿರುದ್ಧ ಯುದ್ದ ಮಾಡದೆ ನಿಲ್ಲಿಸಿ ತುಪ್ಪು ಮಾಡಿದ್ದೇವೆ ಎಂಬುದನ್ನು ಪಾಕ್‌ನ ದುರ್ವರ್ತನೆ ತೋರಿಸಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಕಿಸ್ತಾನವನ್ನು ಭಾರತದ ಹಿತ ಬಯಸುವ ರಾಷ್ಟ್ರವೆಂದು ಎಂದಿಗೂ ಭಾವಿಸಲು ಸಾಧ್ಯವಿಲ್ಲ. ಅದು ಎದುರಾಳಿ ರಾಷ್ಟ್ರವೆಂದೇ ಪರಿಗಣಿಸಬೇಕು. ಮೋದಿ ಅವರು ವಿದೇಶಿ ಪ್ರಭಾವಕ್ಕೆ ಮಣಿಯಬಾರದಿತ್ತು. ಬದಲಾಗಿ, ದೃಢ ನಿರ್ಧಾರ ತೆಗೆದುಕೊಳ್ಳಬೇಕಾಗಿತ್ತು. ಭಾರತವು ರಾಜಿಗೆ ಬಗ್ಗದೇ ಇರುವ ರೀತಿಯಲ್ಲಿ ನಿಲುವನ್ನು ತೆಗೆದುಕೊಳ್ಳಬೇಕು” ಎಂದು ಹೊರಟ್ಟಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...