ಜನರ ಕಷ್ಟಕ್ಕಾಗದ ಮೋದಿ ಈಗ ಬಂದು ಕೈಬೀಸಿ ಹೋಗುತ್ತಿದ್ದಾರೆ : ಎಚ್ ಡಿ ಕುಮಾರಸ್ವಾಮಿ

Date:

  • ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‌ ಡಿ ಕೆ
  • ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿಯ ಕೊಡುಗೆ ಏನೆಂದ ಕುಮಾರಸ್ವಾಮಿ

ರಾಜ್ಯದ ಜನರು ನೆರೆ, ಬರದಂತಹ ಕಷ್ಟಗಳಲ್ಲಿ ಇದ್ದಾಗ ಬಾರದ ಪ್ರಧಾನಿ ಮೋದಿ ಚುನಾವಣಾ ಹೊತ್ತಿನಲ್ಲಿ ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಚುನಾವಣೆ ಬಂದಿದೆ ಹಾಗಾಗಿ ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದ ಜನರ ಕಷ್ಟದ ಸಮಯದಲ್ಲಿ ಮೋದಿ ಬರಬೇಕಿತ್ತು” ಎಂದು ಹರಿಹಾಯ್ದಿದ್ದಾರೆ.

“ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿಯ ಕೊಡುಗೆ ಏನು? ಕೃಷ್ಣಾ ನ್ಯಾಯಧೀಕರಣದ ತೀರ್ಪು ಬಂದು ಹತ್ತು ವರ್ಷ ಆಗಿದೆ. ಈ ಭಾಗಕ್ಕೆ ಮುಖ್ಯವಾಗಿ ನೀರಾವರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಏನು ಮಾಡಿವೆ? ಜೆಡಿಎಸ್, ಕಾಂಗ್ರೆಸ್ ರೈತರಿಗೆ ಅನ್ಯಾಯ ಮಾಡಿವೆ ಅಂತಾರೆ ಮೋದಿ ಅವರು, ಹಾಗಾದರೆ, ಅವರು ರೈತರಿಗೆ ಎನ್ ಮಾಡಿದ್ದಾರೆ ಎಂದು ಹೇಳಬೇಕಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟು ದಿನಗಳ ಕಾಲ ಸುಮ್ಮನಿದ್ದ ಮೋದಿ ಈಗ ನೀರು ಕೊಡುತ್ತೇವೆ ಎನ್ನುತ್ತಿದ್ದಾರೆ. ಯಾವ ಗ್ರಾಮದಲ್ಲಿ ಜಲ್ ಜೀವನ್ ಮಿಷನ್ ಯಶಸ್ವಿಯಾಗಿದೆ? ಹಣ ಕೆಲವರ ಕಿಸಿಗೆ ಹರಿದಿದೆಯೇ ಹೊರತು ನೀರು ಹರಿದಿಲ್ಲ” ಎಂದಿದ್ದಾರೆ.

ಭಜರಂಗದಳದ ನಿಷೇದದ ಕುರಿತ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾತನಾಡಿ, “ನಿಷೇಧ ಮಾಡಿದರೆ ಸಮಸ್ಯೆಗೆ ಪರಿಹಾರ ಸಿಗುತ್ತಾ? ಎರಡೂ ಪಕ್ಷಗಳು ಈ ಬಗ್ಗೆ ಯೋಚನೆ ಮಾಡಬೇಕು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆರ್‌ಎಸ್‌ಎಸ್‌ನ ಯುವಕರ ಭಾಗ ಭಜರಂಗದಳ, ತಾಕತ್ತಿದ್ದರೆ ನಿಷೇಧಿಸಿ: ಶೋಭಾ ಕರಂದ್ಲಾಜೆ

“ಭಜರಂಗದಳದಲ್ಲಿ ಅಮಾಯಕರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅವರ ಮನಸ್ಸು ಕೆಡಿಸಿ ಹಾಳು ಮಾಡಲಾಗುತ್ತಿದೆ. ಅವರ ತಲೆಯಲ್ಲಿ ಏನೇನೋ ತುಂಬಿ ಅವರನ್ನ ಹಾಳು ಮಾಡ್ತಿದ್ದಾರೆ. ಅಮಾಯಕರನ್ನು ಚಿತಾವಣೆ ಮಾಡೋರನ್ನು ಮೊದಲು ಮಟ್ಟಹಾಕಬೇಕು. ಅದು ಬಿಟ್ಟು ಬ್ಯಾನ್ ಮಾಡ್ತಿನಿ ಅಂದ್ರೆ ಉಪಯೋಗ ಏನು?” ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ನಮ್ಮನ್ನು ಟೀಕೆ ಮಾಡ್ತಿದ್ದಾರೆ. ನಮಗೆ ಸಿದ್ಧಾಂತ ಇಲ್ಲ ಎನ್ನುತ್ತಿದ್ದಾರೆ. ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೆ ಸಿದ್ಧಾಂತ ಸರಿಹೋಗುತ್ತಾ? ಕಾಂಗ್ರೆಸ್‌ ಜತೆ ಹೋದರೆ ಸರಿ ಇರಲ್ಲಾ?” ಎಂದು ಪ್ರಧಾನಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...