ಮೋದಿ ‘ಬರ್ತ್‌ಡೇ’: ಒಂದೇ ದಿನ 75 ಲಕ್ಷ ಗಿಡ ನೆಡಲು ಒಡಿಶಾ ಸರ್ಕಾರ ನಿರ್ಧಾರ

Date:

ಇದೇ ವರ್ಷದ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ವಯಸ್ಸು 75 ವರ್ಷ ಪೂರ್ಣಗೊಳ್ಳಲಿದೆ. ಮೋದಿ ಅವರು 75ನೇ ಹುಟ್ಟಿದ ದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಅವರ ಜನ್ಮ ದಿನಾಚರಣೆಯ ಅಂಗವಾಗಿ, ಸೆಪ್ಟೆಂಬರ್‌ 17ರಂದು ಒಡಿಶಾದಲ್ಲಿ 75 ಲಕ್ಷ ಗಿಡಗಳನ್ನು ನೆಡುವುದಾಗಿ ಒಡಿಶಾ ಮುಖ್ಯಮಂತ್ರಿ ಮೋಹನ್‌ ಚರಣ್‌ ಮಾಝಿ ತಿಳಿಸಿದ್ದಾರೆ.

ಒಡಿಶಾ ಸರ್ಕಾರವು ಮೋದಿ ಜನ್ಮ ದಿನಾಚರಣೆಗಾಗಿ ʼಏಕ್‌ ಪೇಡ್‌ ಮಾ ಕೆ ನೇಮ್‌ʼ ಅಭಿಯಾನ ಆರಂಭಿಸುತ್ತಿದ್ದು, 75 ಲಕ್ಷ ಗಿಡಗಳನ್ನು ನೆಡುವ ಮೂಲಕ ಮೋದಿ ಹುಟ್ಟಿದ ದಿನವನ್ನು ಆಚರಿಸಲಿದೆ ಎಂದು ಮಾಝಿ ವಿವರಿಸಿದ್ದಾರೆ.

“ಕಳೆದ ೧೧ ವರ್ಷಗಳಿಂದ ಪ್ರಧಾನಿ ಮೋದಿ ದೇಶಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು. ಒಡಿಶಾದ ಮೇಲೆ ಅವರಿಗಿರುವ ಬದ್ಧತೆ ಮತ್ತು ಪ್ರೀತಿಯಲ್ಲಿ ಕೊರತೆಯಿಲ್ಲ. ಅವರು ಕಳೆದ ಬಾರಿ ತಮ್ಮ ಹುಟ್ಟುಹಬ್ಬದ ವೇಳೆ ಒಡಿಶಾಗ ಭೇಟಿ ನೀಡಿದಾಗ ರಾಜ್ಯ ಮಹಿಳಾ ಸಬಲೀಕರಣಕ್ಕಾಗಿ ʼಸುಭದ್ರಾ ಯೋಜನೆʼಯನ್ನು ಜಾರಿ ಗೊಳಿಸಿದ್ದರು” ಎಂದು ಮಾಝಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿಯವರಿಗೆ ಒಡಿಶಾದ ಜನತೆಯ ಮೇಲಿರುವ ಪ್ರೀತಿ ಮತ್ತು ಬದ್ಧತೆಯ ಗೌರವಾರ್ಥವಾಗಿ, ಜನರ ಉಡುಗೋರೆಯಾಗಿ ರಾಜ್ಯದಲ್ಲಿ ಸೆಪ್ಟೆಂಬರ್‌ 17ರಂದು ಒಂದೇ ದಿನದಲ್ಲಿ 75 ಲಕ್ಷ ಗಿಡಗಳನ್ನು ನೆಡುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

ʼಏಕ್‌ ಪೇಡ್‌ ಮಾ ಕೆ ನಾಮ್ 2.0ʼ ಯೋಜನೆಯ ಎರಡನೇ ಆವೃತಿಯು ಜೂನ್‌ 5 ರಂದು ಜಾರಿಗೊಂಡು ಸೆಪ್ಟೆಂಬರ್‌ 30ರವರೆಗೆ ಮುಂದುವರಿಯುತ್ತಿದೆ. ʼʼರಾಜ್ಯವು ಕಳೆದ ಬಾರಿ 6.72 ಕೋಟಿ ಗಿಡಗಳನ್ನು ನೆಡುವ ಮೂಲಕ ತನ್ನ ಗುರಿಯನ್ನು ಸಾಧಿಸಿದೆ. ದೇಶದಲ್ಲಿ ಹೆಚ್ಚು ಗಿಡಗಳನ್ನು ನೆಟ್ಟ ರಾಜ್ಯಗಳಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿದೆ. ಈ ಬಾರಿ 7.5 ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಿದ್ದು, ಮೋದಿ ಜನ್ಮದಿನದಂದು ಒಂದೇ ದಿನದಲ್ಲಿ 75 ಲಕ್ಷ ಗಿಡಗಳನ್ನು ನೆಡಲಿದೆ” ಎಂದು ಅವರು ತಿಳಿಸಿದ್ದಾರೆ.

ʼʼಈ ದಾಖಲೆಯ ಯಶಸ್ಸಿಗೆ ಅರಣ್ಯ ಮತ್ತು ಕೃಷಿ ಇಲಾಖೆ, ಸರ್ಕಾರಿ ಕಚೇರಿಗಳು, ಸರ್ಕಾರೇತರ ಸಂಸ್ಥೆಗಳು, ಯುವ ಸಂಘಟನೆಗಳ ಪಾತ್ರ ಬಹು ಮುಖ್ಯವಾಗಿದೆ. ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳನ್ನು ಉಳಿಸುವ ಪ್ರತಿಶತ ಹೊಣೆಗಾರಿಕೆಯೂ ಇದೆ. ಅವುಗಳ ರಕ್ಷಣೆಯ ಮತ್ತು ಪೋಷಣೆಯ  ಜವಬ್ಧಾರಿಯನ್ನು ಕೂಡಾ ಪ್ರತಿಯೊಬ್ಬ ನಾಗರಿಕ ಹಾಗೂ ಸರ್ಕಾರಿ ಉದ್ಯೋಗಿಗಳು  ತೆಗೆದುಕೊಳ್ಳಬೇಕುʼʼ ಎಂದಿದ್ದಾರೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...