ಮುಸ್ಲಿಂ ಮೀಸಲಾತಿ ಕುರಿತ ಮೋದಿ ಹೇಳಿಕೆ ಅವರ ಸೋಲಿನ ಭೀತಿ, ಹತಾಶೆಯ ಪ್ರತೀಕ: ಸಿ ಎಂ ಸಿದ್ದರಾಮಯ್ಯ ತಿರುಗೇಟು

Date:

“ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ದೇಶದಲ್ಲಿ ಇಲ್ಲಿಯವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ. ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು. ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

“ಹಿಂದುಳಿದ ಜಾತಿ ಮತ್ತು ಎಸ್ ಸಿ / ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನದತ್ತವಾದ ಮೀಸಲಾತಿಯನ್ನು ಮನಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ” ಎಂದು ಕಿಡಿಕಾರಿದ್ದಾರೆ.

“ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಿದ್ದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಕೂಡಾ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ” ಎಂದು ಹೇಳಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ಮತವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ಸರ್ಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇಕಡಾ ನಾಲ್ಕರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶ ನೀಡಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಮಂತ್ರಿಯವರ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ” ಎಂದು ಲೇವಡಿ ಮಾಡಿದ್ದಾರೆ.

“ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹದಿನೈದರಿಂದ ಹದಿನೇಳಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮೂರರಿಂದ ಐದಕ್ಕೆ ಹೆಚ್ಚಿಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದಿರುವುದಾಗಿಯೂ ತಿಳಿಸಿತ್ತು. ಆದರೆ ಇಂತಹ ಯಾವ ಪತ್ರ ಕೂಡಾ ರಾಜ್ಯದ ಬಿಜೆಪಿ ಸರ್ಕಾರದಿಂದ ತಮಗೆ ಬಂದಿಲ್ಲ. ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾರ್ಚ್ 14ರಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರ್ಕಾರದ ಈ ನಿರ್ಧಾರ ಪ್ರಧಾನಿ ನರೇಂದ್ರಮೋದಿ ಅವರ ಗಮನಕ್ಕೆ ಬಂದಿರಲಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಪ್ರತಿಕ್ರಿಯೆ ಏನು?
“ಮುಸ್ಲಿಮ್ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ” ಎಂದು ಹೇಳಿದ್ದಾರೆ.

“ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ? ಇಲ್ಲವೇ ನರೇಂದ್ರ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತರಾ? ಎಂಬುದನ್ನು ಅವರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...