ಬಿಹಾರಕ್ಕೆ ಮೋದಿ ಭೇಟಿ; ‘ಮೋದಿ ವೈಫಲ್ಯ’ ಟ್ರೆಂಡಿಂಗ್‌

Date:

ಪ್ರಧಾನಿ ಮೋದಿ ಅವರು ಮೇ 29ರಂದು ಬಿಹಾರಕ್ಕೆ ಭೇಟಿ ನೀಡಿದ್ದರು. ಪಟ್ನಾದಲ್ಲಿ ರೋಡ್‌ ಶೋ ನಡೆಸಿದ ಅವರು 45,000 ಕೋಟಿ ರೂ. ಮೌಲ್ಯದ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅವರು ಬಿಹಾರಕ್ಕೆ ಭೇಟಿ ಕೊಟ್ಟ ಹಿನ್ನೆಲೆ, ಸಾಮಾಜಿಕ ಜಾಲತಾಣದಲ್ಲಿ ಬಿಹಾರಿಗರು ‘#ModiFailsBihar’ನೊಂದಿಗೆ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ಬಿಹಾರಕ್ಕೆ ಏನನ್ನೂ ಕೊಟ್ಟಿಲ್ಲ, ಬಿಹಾರ ಹಿಂದುಳಿಯಲು ಮೋದಿ ಆಡಳಿತ ಕಾರಣ. ಬಿಹಾರ ಜನರ ಒತ್ತಾಶೆಗಳನ್ನು ಪೂರೈಸುವಲ್ಲಿ ಮೋದಿ ವಿಫಲರಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ 11 ವರ್ಷಗಳು ಕಳೆದಿವೆ. ಈ 11 ವರ್ಷಗಳಲ್ಲಿ ಬಿಹಾರಕ್ಕೆ ಬರೀ ಖಾಲಿ ಭರವಸೆಗಳು ಮಾತ್ರವೇ ಸಿಕ್ಕಿವೆಯೇ ಹೊರತು, ಬೇರೇನು ಸಿಲ್ಲಕ್ಕಿ ಎಂದು ಬಿಹಾರದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಹಾರದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಬಿಹಾರಿಗರಿಗೆ ಉದ್ಯೋಗ ದೊರೆತಿಲ್ಲ. ಉದ್ಯೋಗ ಸೃಷ್ಟಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಉತ್ತಮ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು ಇಲ್ಲ. ಜವಳಿ, ಐಟಿ ಪಾರ್ಕ್‌ ಕೂಡ ಇಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಹಾರ ಮತ್ತು ಇತರ ಹಿಂದುಳಿದ ರಾಜ್ಯಗಳನ್ನು ಮೋದಿ ಕಡೆಗಣಿಸಿದ್ದಾರೆ. ಎಲ್ಲವನ್ನೂ ತಮ್ಮ ತವರು ರಾಜ್ಯ ಗುಜರಾತ್‌ಗೆ ಹೆಚ್ಚಾಗಿ ಕೊಡುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರ ರಾಜ್ಯವನ್ನು ಅಭಿವೃದ್ಧಿ ಮಾಡುತ್ತದೆಂದು ಭರವಸೆ ನೀಡಲಾಗಿತ್ತು. ಆದರೆ, ಯಾವ ಡಬಲ್ ಎಂಜಿನ್ ಸರ್ಕಾರವೂ ಏನೂ ಮಾಡಿಲ್ಲ. ರಾಜ್ಯ ಇನ್ನೂ ಹಿಂದುಳಿದಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...