‘ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ’: ಬಿಎಸ್‌ಪಿ ಸಂಸದ ದಾನಿಶ್ ಅಲಿ ಭೇಟಿ ಮಾಡಿದ ರಾಹುಲ್

Date:

ಲೋಕಸಭೆಯಲ್ಲಿ ಬಿಜೆಪಿ ಸಂಸದನಿಂದ ಭಯೋತ್ಪಾದಕ ಎಂದು ನಿಂದನೆಗೊಳಗಾದ ಉತ್ತರ ಪ್ರದೇಶದ ಅಮ್ರೊಹ ಕ್ಷೇತ್ರದ ಬಿಎಸ್‌ಪಿ ಸಂಸದ ದಾನಿಶ್ ಅಲಿ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭೇಟಿ ಮಾಡಿದರು.

ಅಲಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ” ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆಯುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಾನಿಶ್ ಅಲಿ, “ರಾಹುಲ್ ಗಾಂಧಿ ನನ್ನ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಇಲ್ಲಿಗೆ ಬಂದಿದ್ದಾರೆ. ಅವರು ವಿವಾದಾತ್ಮಕ ಹೇಳಿಕೆಯನ್ನು ಹೃದಯಕ್ಕೆ ತೆಗೆದುಕೊಳ್ಳಬೇಡಿ. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ ಎಂದು ಹೇಳಿದರು. ನಾನು ಒಬ್ಬಂಟಿಯಾಗಿಲ್ಲ ಎಂದು ನನಗೆ ಸಮಾಧಾನವಾಯಿತು”ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿ. ಅಮೃತಕಾಲದ ವೇಳೆ ಬೀದಿಗಿಳಿದಿರುವ ದ್ವೇಷದ ಅಂಗಡಿಗಳು ಇದೀಗ ನೂತನ ಸಂಸತ್ತಿನಲ್ಲಿ ಸ್ಥಾಪನೆಯಾಗುತ್ತಿರುವುದು ವಿಷಾದನೀಯ. ಆದರೂ ಲೋಕಸಭೆಯೇ ನಮ್ಮ ರಕ್ಷಕ” ಎಂದು ಬಿಎಸ್‌ಪಿ ಸಂಸದ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಎಬ್ಬಿಸಿದ ‘ಭಯೋತ್ಪಾದಕ’ ಹೇಳಿಕೆ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಸಂಸದ ಇಮ್ರಾನ್ ಪ್ರತಾಪಘರ್ಹಿ ಕೂಡ ರಾಹುಲ್ ಗಾಂಧಿ ಜೊತೆಗಿದ್ದರು.

ಸದನದ ಘನತೆಗೆ ಕಳಂಕ

ರಾಹುಲ್ ಗಾಂಧಿ ಅವರ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿರುವ ಕಾಂಗ್ರೆಸ್, “ಬಿಜೆಪಿ ಸಂಸದ ರಮೇಶ್ ಬಿಧುರಿಯ ಈ ನಾಚಿಕೆಗೇಡಿನ ಮತ್ತು ಕ್ಷುಲ್ಲಕ ಕ್ರಮವು ಸದನದ ಘನತೆಗೆ ಕಳಂಕ ತಂದಿದೆ. ಪ್ರಜಾಪ್ರಭುತ್ವದ ದೇವಾಲಯದಲ್ಲಿ ಇಂತಹ ದ್ವೇಷದ ಮನಸ್ಥಿತಿಯನ್ನು ಪಕ್ಷವು ಬಲವಾಗಿ ವಿರೋಧಿಸುತ್ತದೆ” ತಿಳಿಸಲಾಗಿದೆ.

ವಿವಾದದ ಬೆನ್ನಲ್ಲೇ ಬಿಜೆಪಿ ಶುಕ್ರವಾರ ಬಿಧುರಿ ಅವರ ಹೇಳಿಕೆಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಏತನ್ಮಧ್ಯೆ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಬಿಧುರಿ ವಿರುದ್ಧ ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...