ನ.24ರಂದು ಪರಿಸರವಾದಿ ಸೋನಮ್ ವಾಂಗ್‌ಚುಕ್ ಬಂಧನ ಪ್ರಶ್ನಿಸಿದ ಅರ್ಜಿ ವಿಚಾರಣೆ

Date:

ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಪ್ರಶ್ನಿಸಿ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಸುಪ್ರೀಂ ಕೋರ್ಟ್ ನಡೆಸಲಿದೆ. ಈ ಬಂಧನ ಕಾನೂನುಬಾಹಿರ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್‌ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಆಂಗ್ಮೋ ಸಲ್ಲಿಸಿದ ತಿದ್ದುಪಡಿ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಅಕ್ಟೋಬರ್ 29 ರಂದು ಕೇಂದ್ರ ಮತ್ತು ಲಡಾಖ್ ಆಡಳಿತದಿಂದ ಪ್ರತಿಕ್ರಿಯೆ ಕೋರಿತ್ತು.

ಇದನ್ನು ಓದಿದ್ದೀರಾ? ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಸೇರಿದಂತೆ ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ಲಡಾಖ್‌ನಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಸೆಪ್ಟೆಂಬರ್‌ನಲ್ಲಿ ಲೇಹ್‌ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ಹಿಂಸಾಚಾರಕ್ಕೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ಅವರ ಪ್ರಚೋದನಾಕಾರಿ ಭಾಷಣವೇ ಕಾರಣ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಹಾಗೆಯೇ ಸೋನಮ್ ಅವರನ್ನು ಗರಿಷ್ಠ 12 ತಿಂಗಳವರೆಗೆ ಬಂಧನಕ್ಕೆ ಅನುಮತಿ ನೀಡುವ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ಹಾಗೆಯೇ ರಾಜಸ್ಥಾನದ ಜೋಧ್‌ಪುರದ ಜೈಲಿಗೆ ವರ್ಗಾಯಿಸಲಾಗಿದೆ. ಈ ಬಂಧನ ಪ್ರಶ್ನಿಸಿ ಸೋನಮ್ ಪತ್ನಿ ಸಲ್ಲಿಸಿದ ಅರ್ಜಿ ವಿಚಾರಣೆ ಸದ್ಯ ನಡೆಯುತ್ತಿದೆ.

ಇನ್ನು ಲಡಾಖ್‌ನ ಸಂಘಟನೆಗಳು ಸೋನಮ್ ಸೇರಿದಂತೆ ಬಂಧಿತ ಎಲ್ಲರನ್ನೂ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದೆ. ಹಾಗೆಯೇ ಕೇಂದ್ರದ ಸೂಚನೆಯಂತೆ ಹೊಸದಾಗಿ ಲಡಾಖ್‌ ಜನರ ಬೇಡಿಕೆಗಳ ಕರಡು ಪಟ್ಟಿಯನ್ನು ಲಡಾಖ್ ನಾಯಕರು ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...