ಮುಂಗಾರು ಅಧಿವೇಶನ | ತಮ್ಮ ಗುರಿ ಸಾಧಿಸಿಕೊಂಡ ಪ್ರತಿಪಕ್ಷಗಳು, ಚರ್ಚೆಯಾಗದ ಗಂಭೀರ ಸಮಸ್ಯೆಗಳು

Date:

ಎರಡು ವಾರಗಳ ಮುಂಗಾರು ಅಧಿವೇಶನ ಮುಗಿದಿದೆ. ಜನರ ಸಮಸ್ಯೆಗಳನ್ನು ಚರ್ಚಿಸಿ, ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಬೇಕಿದ್ದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ಮುಳುಗಿ ತಮ್ಮ ಜವಾಬ್ದಾರಿಯನ್ನೇ ಮರೆತಿದ್ದರು

 

16ನೇ ವಿಧಾನಸಭೆಯ 4ನೇ ಅಧಿವೇಶನ ಜು.15ರಿಂದ 25ರವರೆಗೆ ಕೇವಲ ಎಂಟು ದಿನಗಳ ಕಾಲ ನಡೆದಿದ್ದು, ಬಹುತೇಕ ಸಮಯ ಪ್ರತಿಪಕ್ಷಗಳ ಗದ್ದಲದಲ್ಲೇ ಮುಗಿದು ಹೋಗಿದೆ.

ಅಧಿವೇಶನದ ಮಹತ್ವವನ್ನೇ ತಿಳಿಯದ ಜನಪ್ರತಿನಿಧಿಗಳಿಂದ ಇನ್ನೇನು ನಿರೀಕ್ಷೆ ಮಾಡಲು ಆಗುತ್ತದೆ ಎನ್ನುವುದಕ್ಕೆ ಈ ಮುಂಗಾರು ಅಧಿವೇಶನ ಸಾಕ್ಷಿಯಾಗಿದೆ. ಜನರ ಸಮಸ್ಯೆಗಳ ಕುರಿತು, ರಾಜ್ಯದ ಅಭಿವೃದ್ಧಿ ಸಂಗತಿಗಳ ಬಗ್ಗೆ ಗಂಭೀರವಾಗಿರುವಂತಹ ಯಾವುದೇ ಚರ್ಚೆ ಸುಮಾರು 37 ಗಂಟೆ ಅವಧಿಯ ಕಾರ್ಯಕಲಾಪದಲ್ಲಿ ಕಂಡುಬರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನಸಭಾ ಸದಸ್ಯರ ಬೇಜವಾಬ್ದಾರಿಯುತ ವರ್ತನೆಗೆ ಯಾವುದೇ ಪಕ್ಷಭೇದವಿಲ್ಲ. ಎಂಟು ದಿನದ ಕಲಾಪದಲ್ಲಿ ಚೆನ್ನಾಗಿ ಉಂಡು, ತಿಂದು, ಸುಖಕರ ನಿದ್ದೆ ಮಾಡಿ ಜನಪ್ರತಿನಿಧಿಗಳು ತಮ್ಮ ಗೂಡು ಸೇರಿದ್ದಾರೆ. ಪ್ರತಿಪಕ್ಷಗಳ ಸದಸ್ಯರಂತು ತಮ್ಮ ಜವಾಬ್ದಾರಿಗಳ ಅರಿವಿಲ್ಲದೇ ಸುಮ್ಮನೇ ಗದ್ದಲದಲ್ಲೇ ಕಾಲಹರಣ ಮಾಡಿ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ.

ಆದರೆ, ಮುಂಗಾರಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳೇನು? ಬಿತ್ತನೆ ಬೀಜ, ಗೊಬ್ಬರ ಸಿಗುತ್ತಿದೆಯೇ? ಭೀಕರ ಮಳೆಯಿಂದಾಗಿ ತತ್ತರಿಸಿದ ಜಿಲ್ಲೆಗಳಿಗೆ ತಕ್ಷಣ ನೆರವಿಗೆ ಏನೇನು ಮಾಡಬೇಕು? ರೈತರ ನೆರವಿಗೆ ಸಂಘಟಿತವಾಗಿ ಏನು ಮಾಡಬೇಕು ಎಂಬ ಬಗ್ಗೆ ಯಾರೊಬ್ಬರೂ ಚಿಂತಿಸಿಲ್ಲ. ಈ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚಿಸದ ಜನನಾಯಕರು ಕ್ಷೇತ್ರದ ರೈತರಿಗೆ ಏನು ಉತ್ತರಿಸುವರು?

ಜನಪ್ರತಿನಿಧಿಗಳು ಮಾತೆತ್ತಿದರೆ ಅಭಿವೃದ್ಧಿಯ ಮಂತ್ರವನ್ನು ಜಪಿಸುತ್ತಾರೆ. ಆದರೆ ಅದಕ್ಕೆ ಪೂರಕವಾಗುವ ಯೋಜನೆ ಜಾರಿಯಾಗಬೇಕಾದರೆ, ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಮೊದಲು ಅದರ ಮಂಡನೆಯಾಗಬೇಕು. ನಂತರ ಅದನ್ನು ಅನುಷ್ಠಾನಕ್ಕೆ ತರಲು ಇರುವ ಸಾಂವಿಧಾನಿಕ ಮಾನ್ಯತೆಗೆ, ಅದರ ಸಾಧಕ ಬಾಧಕಗಳ ಕುರಿತು ಮಾಡಬೇಕಾದ ಅರ್ಥಪೂರ್ಣ ಚರ್ಚೆಗೆ ಅನುವು ಮಾಡಿಕೊಡಬೇಕು ಎನ್ನುವ ನಡಾವಳಿಗೆ ಬದ್ಧತೆಯನ್ನೇ ತೋರುವುದಿಲ್ಲ. ಗಲಾಟೆ ಎಬ್ಬಿಸಿ, ಕಾಲಹರಣ ಮಾಡುವುದೇ ಇತ್ತೀಚೆಗೆ ರಾಜಕೀಯ ತಂತ್ರಗಾರಿಕೆಗೆ ಆಗಿಹೋಗಿದೆ.

ಬಿಜೆಪಿ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ಮತ್ತು ವಾಲ್ಮೀಕಿ ಹಗರಣ ಸುತ್ತವೇ ಪ್ರತಿಪಕ್ಷಗಳ ಸದಸ್ಯರು ದಾಳಿ ಮಾಡಿ ಸರ್ಕಾರವನ್ನು ಮುಜುಗರಕ್ಕೆ ಈಡು ಮಾಡುವ ಪ್ರಯತ್ನ ಕಲಾಪದುದ್ದಕ್ಕೂ ಮಾಡಿದರು. ಸಾಧಿಸಿದ್ದೇನು ಎಂದು ನೋಡಿದಾಗ ಅಲ್ಲೂ ಕೂಡ ಶೂನ್ಯ. ಕಲಾಪ ಹಾಳು ಮಾಡುವುದರಲ್ಲೇ ಆದರೆ, ʼಉದ್ದೇಶಿತ ಗುರಿʼ ಮುಟ್ಟುವಲ್ಲಿ ಪ್ರತಿಪಕ್ಷಗಳು ಮೇಲುಗೈ ಸಾಧಿಸಿವೆ.

ಆಡಳಿತ ಪಕ್ಷ ಕೂಡ ಅಧಿವೇಶನವನ್ನು ಅಷ್ಟು ಗಂಭೀರವಾಗಿ ಪರಿಗಣಿಸಲೇ ಇಲ್ಲ. ತಮಗೆ ಹೇಗೆ ಅನುಕೂಲ ಆಗುತ್ತದೆಯೋ ಹಾಗೇ ಸದನವನ್ನು ನಡೆಸಿ ಕೈ ತೊಳೆದುಕೊಂಡರು. ಗ್ಯಾರಂಟಿಗಳ ಜಪದಿಂದ ಕಾಂಗ್ರೆಸ್‌ ಹೊರಗೆ ಬಂದಂತೆ ಕಾಣುತ್ತಿಲ್ಲ. ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ನೀಲನಕ್ಷೆ ಕಲಾಪದಲ್ಲಿ ಕಾಣಲಿಲ್ಲ. ಕೆಲವು ಶಾಸಕರಂತೂ ತಮ್ಮ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನವನ್ನೇ ಮಾಡಲಿಲ್ಲ. ಲೆಕ್ಕಕ್ಕುಂಟು ಆಟಕ್ಕಿಲ್ಲ ಎನ್ನುವ ತರ ಕಲಾಪಕ್ಕೆ ಹಾಜರಾಗಿ ಎದ್ದು ಹೋದರು.

ವಿಧೇಯಕ ಮಂಡನೆ, ನಿರ್ಣಯಕ್ಕೆ ಅಧಿವೇಶನ ಸಿಮೀತ

2024-25ನೆ ಸಾಲಿನ ಪೂರಕ ಅಂದಾಜುಗಳ ಮೊದಲನೆ ಕಂತನ್ನು ಮಂಡಿಸಿ, ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್ 2023ಕ್ಕೆ ಕೊನೆಗೊಂಡ ವರ್ಷದ ರಾಜ್ಯ ಸರಕಾರದ ಹಣಕಾಸಿನ ವ್ಯವಹಾರಗಳ ಮೇಲೆ ನೀಡಿರುವ ಲೆಕ್ಕಪರಿಶೋಧನಾ ವರದಿ ಮಂಡಿಸಲಾಗಿದೆ.

ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಕಾಯ್ದೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನಾ ವರದಿ ಹಾಗೂ ಮಾರ್ಚ್ 2022ಕ್ಕೆ ಕೊನೆಗೊಂಡ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಸರಣಾ ಲೆಕ್ಕಪರಿಶೋಧನಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ.

ವಿಧಾನಸಭೆಯ ಸರಕಾರಿ ಭರವಸೆಗಳ ಸಮಿತಿ 2023-24ನೆ ಸಾಲಿನ ಎರಡನೆ ವರದಿ, ವಿಧಾನ ಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 39ನೆ ವರದಿ, ವಿಧಾನಸಭೆಯ ಅಂದಾಜುಗಳ ಸಮಿತಿಯ ಮೊದಲನೇ ವರದಿ, ವಿಧಾನಸಭೆಯ ಸದಸ್ಯರ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ ಮೂರನೇ ವರದಿ, ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಮೂರನೇ ವರದಿ ಹಾಗೂ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಮೊದಲನೆ ವರದಿಯನ್ನು ಮಂಡಿಸಲಾಗಿದೆ.

ಸಿ ಟಿ ರವಿ

ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 212(1)ಕ್ಕೆ ತಿದ್ದುಪಡಿ ಮಾಡುವ ಸಂಬಂಧ ನಿಯಮಾವಳಿ ಸಮಿತಿಯ ಮಧ್ಯಂತರ ವರದಿಯನ್ನು ಜು.24ರಂದು ಸದನದಲ್ಲಿ ಮಂಡಿಸಿ, ತಿದ್ದುಪಡಿಯನ್ನು ಅಂಗೀಕರಿಸಲಾಗಿದೆ.

2024-25ನೆ ಸಾಲಿನ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಲು ಜು.25ರಂದು ಸದನವು ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ. ಒಟ್ಟು 23 ಅಧಿಸೂಚನೆಗಳು, 146 ವಾರ್ಷಿಕ ವರದಿಗಳು, 160 ಲೆಕ್ಕ ಪರಿಶೋಧನಾ ವರದಿಗಳು, 5 ಅನುಪಾಲನಾ ವರದಿಗಳು, 4 ಅನುಸರಣಾ ವರದಿ ಹಾಗೂ ಒಂದು ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ.

13 ವಿಧೇಯಕ ಮಂಡನೆ

ಧನವಿನಿಯೋಗ ವಿಧೇಯಕವು ಸೇರಿದಂತೆ ಒಟ್ಟು 13 ವಿಧೇಯಕಗಳನ್ನು ಮಂಡಿಸಲಾಗಿದ್ದು, 12 ವಿಧೇಯಕಗಳನ್ನು ಅಂಗೀಕರಿಸಲಾಗಿದೆ. ಉಳಿದಂತೆ 2024ನೆ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಪರಿಶೀಲನೆಗಾಗಿ ಒಪ್ಪಿಸಲು ತೀರ್ಮಾನಿಸಲಾಗಿದೆ.

2024ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಪುನರ್ ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ. ನಿಯಮ 60ರಡಿಯಲ್ಲಿ ನೀಡಿದ 9 ಸೂಚನೆಗಳ ಪೈಕಿ ಎಂಟನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಒಂದು ಸೂಚನೆಯನ್ನು ತಿರಸ್ಕರಿಸಲಾಗಿದೆ. ಎರಡು ಸೂಚನೆಗಳನ್ನು ಚರ್ಚಿಸಲಾಗಿದೆ.

ನಿಯಮ 69ರಡಿಯಲ್ಲಿ ಒಟ್ಟು 14 ಸೂಚನೆಗಳನ್ನು ಸ್ವೀಕರಿಸಲಾಗಿದೆ. ಈ ಅವಧಿಯಲ್ಲಿ ಒಟ್ಟು 16 ಅರ್ಜಿಗಳನ್ನು ಸದನಕ್ಕೆ ಒಪ್ಪಿಸಲಾಗಿದೆ. ಒಟ್ಟು 2370 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 135 ಪ್ರಶ್ನೆಗಳ ಪೈಕಿ 117 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಲಿಖಿತ ಮೂಲಕ ಉತ್ತರಿಸುವ 1902 ಪ್ರಶ್ನೆಗಳ ಪೈಕಿ 1438 ಪ್ರಶ್ನೆಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. 323 ಗಮನ ಸೆಳೆಯುವ ಸೂಚನೆಗಳ ಪೈಕಿ 170 ಸೂಚನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ 3 ಸೂಚನೆಗಳನ್ನು ಚರ್ಚಿಸಲಾಗಿದೆ.

ಬಿಜೆಪಿ..

ನಾಲ್ಕು ನಿರ್ಣಯಗಳ ಅಂಗೀಕಾರ

ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭೆ ಸ್ಥಾನಗಳ ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಸಂಖ್ಯೆಯನ್ನು 1971 ಜನಗಣತಿಯನ್ನಾಧರಿಸಿ ನಿರ್ಧರಿಸಬೇಕು. ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುವುದರಿಂದ ಈ ಪ್ರಸ್ತಾವವನ್ನು ಅನುಷ್ಠಾನಗೊಳಿಸಬಾರದೆಂಬ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ.

ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಹಾಗೂ ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ, 2006ರಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮತ್ತು ಸಮರ್ಪಕವಾಗಿ ಮಾರ್ಪಡಿಸುವ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ.

ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಮುಂದುವರಿಸಿದ ಬಿಜೆಪಿ – ಜೆಡಿಎಸ್ ಸದಸ್ಯರು ಗುರುವಾರವೂ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.‌ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮುಡಾ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಆಗ್ರಹಿಸಿದರು. ಇತ್ತ ಸ್ಪೀಕರ್ ನಿಯಮ ಮೀರಿ ಮುಡಾ ಚರ್ಚೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಮನವಿ ನಿರಾಕರಿಸಿದರು. ಅಲ್ಲಿಗೆ ಪ್ರತಿಪಕ್ಷಗಳ ಮುಡಾ ಗದ್ದಲವನ್ನು ಮತ್ತಷ್ಟು ಜೋರು ಮಾಡಿ ಸದನದಿಂದ ಹೊರ ನಡೆದರು. ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಮಳೆಗಾಲದ ಅಧಿವೇಶನವನ್ನು ಒಂದು ದಿನ ಮೊದಲೇ ಮೊಟಕುಗೊಳಿಸಿ, ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಶಿಕ್ಷಣ ಕ್ಷೇತ್ರದ ಗೊಂದಲಗಳು, ಮಳೆ ಹಾನಿ, ಗ್ರಾಮೀಣ ಭಾಗದ ಸಮಸ್ಯೆಗಳು ಸದನದೊಳಗೆ ಧ್ವನಿಸಲೇ ಇಲ್ಲ.

ಒಟ್ಟಿನಲ್ಲಿ ಜನಪ್ರತಿನಿಧಿಗಳು ಅಧಿವೇಶನವನ್ನು ಗಂಭೀರವಾಗಿ ತೆಗೆದುಕೊಳ್ಳುವ ದಿನಗಳು ಎಂದು ಬರುತ್ತವೋ ತಿಳಿಯದು. ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಪ್ರತಿಷ್ಠೆಯನ್ನು ಪಣಕ್ಕೆ ಒಡ್ಡದೆ, ತಮ್ಮನ್ನು ಸದಾ ಗಮನಿಸುವವರು ಇರುತ್ತಾರೆ ಎಂಬುದನ್ನು ತಿಳಿದು, ಜನರ ಜ್ವಲಂತ ಸಮಸ್ಯೆಗಳ ಕುರಿತು ಪಕ್ಷಾತೀತವಾಗಿ ಅರ್ಥಪೂರ್ಣ ಚರ್ಚೆಗೆ ತೊಡಗಿದಾಗ ಮಾತ್ರ ಕ್ಷೇತ್ರಗಳ ಅಭಿವೃದ್ಧಿ ಸಾಧ್ಯ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...