ಹೆಚ್ಚು ಮಕ್ಕಳಿರುವವರು ಎಂದಿದ್ದು ಮುಸ್ಲಿಮರಿಗಲ್ಲ – ಬಡವರಿಗೆ: ಪ್ರಧಾನಿ ಮೋದಿ

Date:

ನಾನು ಮುಸ್ಲಿಮರನ್ನು ಉಲ್ಲೇಖಿಸಿ ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂಬ ಪದಗಳನ್ನು ಹೇಳಿಲ್ಲ. ನಾನು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ. ಪ್ರತಿ ಬಡ ಕುಟುಂಬಗಳ ಬಗ್ಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ, ರಾಜಸ್ಥಾನದ ಬನ್ಸ್‌ವಾರದಲ್ಲಿ ಮಾತನಾಡಿದ್ದ ಮೋದಿ, “ಕಾಂಗ್ರೆಸ್‌ ʼನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ದೇಶದ ಸಂಪತ್ತನ್ನು ಹಂಚುತ್ತದೆ” ಎಂದು ಹೇಳಿದ್ದರು. ಅವರ ಹೇಳಿಕೆ, ದ್ವೇಷದಿಂದ ಕೂಡಿದ್ದು, ಕೋಮು ದ್ವೇಷವನ್ನು ಪ್ರಚೋದಿಸುತ್ತದೆ ಎಂದು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ, ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. “ಮುಸ್ಲಿಮರ ಮೇಲಿನ ಪ್ರೀತಿಯನ್ನು ನಾನು ಮಾರಾಟ ಮಾಡುವುದಿಲ್ಲ. ನಾನು ವೋಟ್ ಬ್ಯಾಂಕ್‌ಗಾಗಿ ಕೆಲಸ ಮಾಡುವುದಿಲ್ಲ. ನಾನು ʼಸಬ್ಕಾ ಸಾಥ್, ಸಬ್ಕಾ ವಿಕಾಸ್ʼಅನ್ನು ನಂಬುತ್ತೇನೆ” ಎಂದು ನ್ಯೂಸ್‌೧೮ಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಆಘಾತವಾಗಿದೆ. ಹೆಚ್ಚು ಮಕ್ಕಳಿರುವವರ ಬಗ್ಗೆ ಮಾತನಾಡುವಾಗ, ನಾನು ಮುಸ್ಲಿಮರ ಬಗ್ಗೆ ಹೇಳುತ್ತಿದ್ದೇನೆಂದು ಯಾರು ಹೇಳಿದರು? ಬಡ ಕುಟುಂಬಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಬಡತನ ಇರುವಲ್ಲಿ, ಹೆಚ್ಚು ಮಕ್ಕಳಿರುತ್ತಾರೆ. ಅವರು ತಮ್ಮ ಸಾಮಾಜಿಕ ಪರಿಸ್ಥಿತಿಯನ್ನು ಲೆಕ್ಕಿಸದೆ ಮಕ್ಕಳನ್ನು ಹೊಂದುತ್ತಾರೆ. ಸರ್ಕಾರ ತಮ್ಮ ಮಕ್ಕಳ ಕಾಳಜಿವಹಿಸಬೇಕೆಂದು ಬಯಸುತ್ತಾರೆ” ಎಂದು ಹೇಳಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್‌ನಲ್ಲಿ ನಡೆದ ಗೋಧ್ರಾ ನಂತರದ ಗಲಭೆಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “2002ರ ಗೋಧ್ರಾ ಗಲಭೆ ನಂತರ ತಮ್ಮ ವಿರೋಧಿಗಳು ಮುಸ್ಲಿಮರ ಮನಸ್ಸಿನಲ್ಲಿ ತಮ್ಮ ಪ್ರಾಮುಖ್ಯತೆಗೆ ಕಳಂಕ ತಂದಿದ್ದಾರೆ” ಎಂದು ಹೇಳಿದರು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, “ದೇಶದ ಜನತೆ ನನಗೆ ಮತ ಹಾಕುತ್ತಾರೆ. ನಾನು ಹಿಂದು-ಮುಸ್ಲಿಮರು ಎಂದು ವಿಭಜಿಸುವ ದಿನ, ನಾನು ಸಾರ್ವಜನಿಕ ಜೀವನದಲ್ಲಿರುವ ಅರ್ಹತೆ ಕಳೆದುಕೊಳ್ಳುತ್ತೇನೆ. ನಾನು ಹಿಂದು-ಮುಸ್ಲಿಂ ಎಂದು ವರ್ಗೀಕರಿಸುವುದಿಲ್ಲ. ಇದು ನನ್ನ ಪ್ರತಿಜ್ಞೆ” ಎಂದರು.

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಧಾನಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ವಾರಣಾಸಿಯಲ್ಲಿ ಏಳನೇ ಹಂತದ ಮತದಾನ ಜೂನ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...