ನ್ಯಾಯಾಧೀಶರ ನೇಮಕಾತಿ ನಿಯಂತ್ರಣಕ್ಕೆ ಪಡೆಯುವುದೇ ಸರ್ಕಾರದ ಉದ್ದೇಶ: ಕಪಿಲ್ ಸಿಬಲ್ ಆರೋಪ

Date:

ಭ್ರಷ್ಟಾಚಾರದ ಆರೋಪದ ಮೇಲೆ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ನಿಲುವಳಿ ಹೊರಡಿಸುವ ಮೂಲಕ ನ್ಯಾಯಾಧೀಶರ ನೇಮಕಾತಿಗಳನ್ನು ನಿಯಂತ್ರಣಕ್ಕೆ ಪಡೆಯುವ ಉದ್ದೇಶವನ್ನು ಸರ್ಕಾರ ಹೊಂದಿದೆ. ನ್ಯಾಯಾಧೀಶರ ನೇಮಕಾತಿ ಸಂಬಂಧ ಈ ಹಿಂದಿನ ವ್ಯವಸ್ಥೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ(ಎನ್‌ಜೆಎಸಿ) ತರುವ ಮೂಲಕ ನ್ಯಾಯಾಧೀಶರ ನೇಮಕಾತಿ ನಿಯಂತ್ರಿಸಲು ಮುಂದಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಮಂಗಳವಾರ ಆರೋಪಿಸಿದ್ದಾರೆ.

ಇನ್ನು ಜಸ್ಟೀಸ್ ವರ್ಮಾ ಮತ್ತು ಜಸ್ಟೀಸ್ ಶೇಖರ್ ಯಾದವ್ ವಿಚಾರದಲ್ಲಿ ಸರ್ಕಾರವು ತಾರತಮ್ಯ ನಿಲುವನ್ನು ಹೊಂದಿದೆ ಎಂದೂ ಸಿಬಲ್ ದೂರಿದ್ದಾರೆ. ಬಹಿರಂಗವಾಗಿ ಕೋಮುವಾದದ ಹೇಳಿಕೆಗಳನ್ನು ನೀಡುವ ಜಸ್ಟೀಸ್ ಶೇಖರ್ ವಿರುದ್ಧ ವಿಪಕ್ಷಗಳು ಇತ್ತೀಚೆಗೆ ವಾಗ್ದಂಡನೆ ನಿಲುವಳಿ ಸಲ್ಲಿಸಲು ಆಗ್ರಹಿಸಿದೆ. ನ್ಯಾಯಮೂರ್ತಿ ವರ್ಮಾ ವಿರುದ್ಧ ವಾಗ್ದಂಡನೆ ನಿಲುವಳಿ ಪ್ರಸ್ತಾಪನೆ ಸಲ್ಲಿಸಲು ಸರ್ಕಾರ ಮುಂದಾಗಿದೆ.

ಇದನ್ನು ಓದಿದ್ದೀರಾ? ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ನಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿದ್ದ ವರ್ಮಾ ಅವರ ನಿವಾಸದಲ್ಲಿ ನಡೆದ ಅಗ್ನಿ ಅವಘಡದ ವೇಳೆ ಹಲವು ಸುಟ್ಟ ನಗದು ಚೀಲಗಳು ಪತ್ತೆಯಾಗಿದ್ದವು. ಜಸ್ಟೀಸ್ ಶೇಖರ್ ಯಾದವ್ ಅವರು ಹಲವು ಬಾರಿ ಸಾರ್ವಜನಿಕವಾಗಿ ಕೋಮುವಾದದ ಹೇಳಿಕೆಗಳನ್ನು ನೀಡಿದ್ದಾರೆ. ಇಬ್ಬರು ನ್ಯಾಯಾಧೀಶರ ವಿಚಾರದಲ್ಲಿ ಕೇಂದ್ರ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ನಡೆಯುತ್ತಿದೆ.

ಜಸ್ಟೀಸ್ ವರ್ಮಾ ಅವರನ್ನು ನ್ಯಾಯಾಧೀಶರ ಸ್ಥಾನದಿಂದ ತೆಗೆದುಹಾಕಲು ಕೇಂದ್ರ ಸರ್ಕಾರವು ವಾಗ್ದಂಡನೆ ನಿಲುವಳಿ ಸಲ್ಲಿಸಲು ಮುಂದಾಗಿರುವಾಗ ಕೋಮುವಾದದ ಹೇಳಿಕೆ ನೀಡುವ ಜಸ್ಟೀಸ್ ಶೇಖರ್ ಯಾದವ್ ವಿರುದ್ಧ ವಾಗ್ದಂಡನೆ ನಿಲುವಳಿ ಸಲ್ಲಿಸುವುದಿಲ್ಲ ಏಕೆ ಎಂಬುದು ವಿಪಕ್ಷಗಳ ಪ್ರಶ್ನೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಸಿಬಲ್, ”ಕೊಲಿಜಿಯಂ ವ್ಯವಸ್ಥೆಯನ್ನು ಕೊನೆಗೊಳಿಸುವುದು ಮತ್ತು ನ್ಯಾಯಾಧೀಶರ ನೇಮಕಾತಿಯನ್ನು ನಿಯಂತ್ರಿಸುವುದು ಸರ್ಕಾರದ ಉದ್ದೇಶ” ಎಂದು ಆರೋಪಿಸಿದ್ದಾರೆ.

ನ್ಯಾಯಮೂರ್ತಿ ವರ್ಮಾ ಬಗ್ಗೆ ಮಾತನಾಡಿದ ಸಿಬಲ್, “ನಾನು ಈ ಹಿಂದೆ ವಾದಿಸಿದ ಅತ್ಯುತ್ತಮ ನ್ಯಾಯಾಧೀಶರಲ್ಲಿ ಒಬ್ಬರು ವರ್ಮಾ ಎಂದು ನಾನು ಅತ್ಯಂತ ಜವಾಬ್ದಾರಿಯಿಂದ ಹೇಳಬಲ್ಲೆ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನಲ್ಲಿರುವ ಯಾವುದೇ ವಕೀಲರನ್ನು ನೀವು ಕೇಳಿ, ಈ ನ್ಯಾಯಾಧೀಶರ ತಪ್ಪಿಲ್ಲ ಎಂದು ತಿಳಿಯುತ್ತದೆ. ಅವರ ಬಗ್ಗೆ ಅಲಹಾಬಾದ್‌ನಲ್ಲಿರುವ ಯಾವುದೇ ವಕೀಲರನ್ನು ನೀವು ಕೇಳಬಹುದು” ಎಂದಿದ್ದಾರೆ.

ಇದನ್ನು ಓದಿದ್ದೀರಾ? ನ್ಯಾ.ಯಶವಂತ್ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ ಪ್ರಕರಣ; ರಾಜೀನಾಮೆಗೆ ಸುಪ್ರೀಂ ಸೂಚನೆ

“ನೀವು(ಸರ್ಕಾರ) ಯಾವುದೇ ಪುರಾವೆಗಳಿಲ್ಲದ ನ್ಯಾಯಾಧೀಶರನ್ನು(ವರ್ಮಾ) ಗುರಿಯಾಗಿಸಿಕೊಂಡಿದ್ದೀರಿ. ಹಾಗೆಯೇ ಸಾರ್ವಜನಿಕವಾಗಿ ಪುರಾವೆ ಇರುವ ನ್ಯಾಯಾಧೀಶರನ್ನು(ಯಾದವ್) ರಕ್ಷಿಸುತ್ತಿದ್ದೀರಿ” ಎಂದು ಸಿಬಲ್ ದೂರಿದ್ದಾರೆ.

“ನ್ಯಾಯಮೂರ್ತಿ ವರ್ಮಾ ಪ್ರಕರಣದಲ್ಲಿ ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನದಂದು ನಿಲುವಳಿ ಮಂಡಿಸಲು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬಯಸಿದ್ದಾರೆ. ಯಾಕಾಗಿ? ನೀವು ಶೇಖರ್ ಯಾದವ್ ಅವರನ್ನು ಏಕೆ ರಕ್ಷಿಸುತ್ತಿದ್ದೀರಿ” ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ನ್ಯಾಯಾಧೀಶರನ್ನು ನೇಮಿಸುವ ಅಧಿಕಾರವನ್ನು ಕೊಲಿಜಿಯಂನಿಂದ ಕಿತ್ತುಕೊಂಡು ಅದನ್ನು ಎನ್‌ಜೆಎಸಿಗೆ ನೀಡುವುದು ಸರ್ಕಾರದ ಈ ಆಟದ ಹಿಂದಿರುವ ಯೋಜನೆ. ಆದರೆ ಅದನ್ನು ವಿರೋಧ ಪಕ್ಷಗಳು ಏಕೆ ಅರಿತುಕೊಳ್ಳುತ್ತಿಲ್ಲ. ಸರ್ಕಾರದ ಈ ಆಟದ ಹಿಂದಿರುವ ಉದ್ದೇಶವನ್ನು ವಿಪಕ್ಷಗಳು ಅರ್ಥ ಮಾಡಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

“ಯಾವುದೇ ತನಿಖೆ ಮತ್ತು ಕಾರ್ಯವಿಧಾನವಿಲ್ಲದೆ ಹೈಕೋರ್ಟ್ ನ್ಯಾಯಾಧೀಶ ವರ್ಮಾ ವಿರುದ್ಧ ನಿರ್ಧಾರ ತೆಗೆದುಕೊಂಡಿದೆ. ನ್ಯಾಯಾಧೀಶರ ವಿಚಾರಣೆಯೂ ನಡೆದಿಲ್ಲ. ಇದು ಸಂಪೂರ್ಣವಾಗಿ ಆಘಾತಕಾರಿ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...