ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

Date:

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ ಅವರ 10 ವರ್ಷದ ಸಾಧನೆ. ಈ ಬಾರಿಯ ಚುನಾವಣೆಯಲ್ಲಿ ಜನತೆ ಬಾಯ್ ಬಾಯ್ ಖೂಬಾ, ಬಾಯ್ ಬಾಯ್ ಬಿಜೆಪಿ ಎಂದು ಮನೆ ದಾರಿ ತೋರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಶನಿವಾರ ಹುಮನಾಬಾದ್ ಮತ ಕ್ಷೇತ್ರದ ರಾಜೇಶ್ವರ, ದುಬುಲಗುಂಡಿ ಹಾಗೂ ಹಳ್ಳಿ ಖೇಡ್ (ಬಿ) ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಈಶ್ವರ ಖಂಡ್ರೆ ಪರ ನಡೆಸಿದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, “ಕ್ಷೇತ್ರದೆಲ್ಲೆಡೆ ಕಾಂಗ್ರೆಸ್ ಪರ ಅಲೆ ಜೋರಾಗಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ. ಬೀದರ್‌ನ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಚಲಾಯಿಸಿ” ಎಂದು ಮನವಿ ಮಾಡಿದರು.

“ಬಿಜೆಪಿ ಸರ್ಕಾರ 2022ರೊಳಗೆ ಸರ್ವರಿಗೂ ಮನೆ ನೀಡುವ ಸುಳ್ಳು ಭರವಸೆ ನೀಡಿತ್ತು. ಆದರೆ, ಕಾಂಗ್ರೆಸ್  ಕಾಲದಲ್ಲಿ ಮಂಜೂರು ಮಾಡಿದ್ದ ಬಡವರ ಮನೆಗಳ ಕಂತಿನ ಹಣವನ್ನು ಕೂಡ ಹಿಂದಿನ ಬಿಜೆಪಿ ಸರ್ಕಾರ ತಡೆ ಹಿಡಿದು, ಸೂರಿಲ್ಲದವರ ಕಣ್ಣೀರು ಹಾಕಿಸಿದರು” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ರಹೀಂ ಖಾನ್ ಮಾತನಾಡಿ, “ಸಂಸದರು ಜನರ ಸಂಕಷ್ಟಗಳಲ್ಲಿ ಭಾಗಿಯಾಗಿ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆದರೆ ಎರಡು ಅವಧಿಗೆ ಗೆದ್ದು ಕೇಂದ್ರದಲ್ಲಿ ಮಂತ್ರಿಯೂ ಆಗಿರುವ ಭಗವಂತ ಖೂಬಾ ಅವರು ಜನರಿಗೆ ಮುಖವೂ ತೋರಿಸಲಿಲ್ಲ. ಕೈಗಾರಿಕೆ ನಿರ್ಮಾಣ ಸೇರಿದಂತೆ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಿಲ್ಲ” ಎಂದರು.

“ನಾವು ಜೋಳಿಗೆ ಹಿಡಿದು ಬಂದಿದ್ದೇವೆ, ನಿಮ್ಮ ಪ್ರೀತಿ, ವಿಶ್ವಾಸ ಜೊತೆಗೆ ಮತ ಹಾಕಿ, ರಾಜ್ಯ ಸರ್ಕಾರದಿಂದ ಅನುಷ್ಠಾನಗೊಂಡ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಆಸರೆಯಾಗಿವೆ. ಕೇಂದ್ರದಲ್ಲಿಯೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಾದರೆ ಕುಟುಂಬದ ಸದಸ್ಯರಿಗೂ ಕಡ್ಡಾಯ ಮತ ಹಕ್ಕು ಚಲಾಯಿಸುವಂತೆ ತಿಳಿಸಬೇಕು” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಸಭೆಯಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್, ಎಂಎಲ್‌ಸಿ ಅರವಿಂದ ಕುಮಾರ್‌ ಅರಳಿ, ಮುಖಂಡರಾದ ನಸೀಮ್ ಉದ್ದೀನ್ ಪಟೇಲ್, ಭಾರತ್ ಬಾಯ್ ಶರೀಕರ್, ವೀರಣ್ಣ ಪಾಟೀಲ್, ಅಭಿಷೇಕ್ ಪಾಟೀಲ್, ಕೇಶಪ್ಪ ಬಿರಾದರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...