ಬಿಜೆಪಿ ತೊರೆದ ಸಂಸದ ಬಿ ಎನ್ ಬಚ್ಚೇಗೌಡ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

Date:

ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿ ತೊರೆದಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

“ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.

ಕಳೆದ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಟಿಕೆಟ್‌ ದೊರಕುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿ ಎನ್ ಬಚ್ಚೇಗೌಡ ಅವರು ಚುನಾವಣಾ ನಿವೃತ್ತಿ ಘೋಷಿಸಿದ್ದರು. ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಿಂದ ದೂರ ಉಳಿದಿದ್ದರು.

82 ವರ್ಷದ ಬಿ ಎನ್ ಬಚ್ಚೇಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. ಇವರು 1978 ರಲ್ಲಿ ಜನತಾ ಪಕ್ಷದ ಮೂಲಕ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾದರು.

ಬಳಿಕ 1985, 1994, 1999 ಹಾಗೂ 2008 ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಶಾಸಕರಾಗಿ ಒಟ್ಟು 5 ಬಾರಿ ಆಯ್ಕೆಯಾದರು. 1989, 2004, 2013 ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರ ಸೋಲನ್ನು ಅನುಭವಿಸಿದ್ದರು. ನಂತರ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು.

ರಾಜೀನಾಮೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...