ಪ್ರಜ್ವಲ್ ಅಸಿಂಧು | ಹೈಕೋರ್ಟ್‌ ತೀರ್ಪು ನೋಡಿದ ಬಳಿಕ ಪ್ರತಿಕ್ರಿಯೆ : ಎಚ್.ಡಿ. ದೇವೇಗೌಡ

Date:

  • ಸುಪ್ರೀಂ ಕೋರ್ಟ್‌ನಲ್ಲಿ ತಡೆಯಾಜ್ಞೆ ಪ್ರಯತ್ನ ಮಾಡುತ್ತೇವೆ ಎಂದ ಮಾಜಿ ಪ್ರಧಾನಿ
  • ಎಚ್‌.ಡಿ. ಕುಮಾರಸ್ವಾಮಿ ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ

ಚುನಾವಣಾ ಅಕ್ರಮಕ್ಕೆ ಸಂಬಂಧಿಸಿ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವ ಅನರ್ಹಗೊಳಿಸಿರುವ ಹೈಕೋರ್ಟ್‌ ತೀರ್ಪಿಗೆ ಸಂಬಂಧಿಸಿ ಮಾತನಾಡಿರುವ ಜೆಡಿಎಸ್ ವರಿಷ್ಠ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ, “ನ್ಯಾಯಾಲಯದ ತೀರ್ಪು ನೋಡಿದ ಬಳಿಕವಷ್ಟೇ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಹಾಸನದ ಹೊಳೆನರಸೀಪುರದಲ್ಲಿ ದೇವೇಗೌಡರ ಕುಟುಂಬದ ಮನೆ ದೇವರಾಗಿರುವ ದೇವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಹೈಕೋರ್ಟ್‌ ತೀರ್ಪಿನ ಪ್ರತಿ ನನ್ನ ಕೈಗೆ ಇನ್ನೂ ದೊರೆತಿಲ್ಲ. ಸಂಸದ ಸ್ಥಾನ ಅಸಿಂಧು ಎಂದು ತೀರ್ಪು ನೀಡಿದ್ದಾರೆ. ಅದರ ಬಗ್ಗೆ ಈಗ ಪ್ರತಿಕ್ರಿಯಿಸಲು ಹೋಗುವುದಿಲ್ಲ. ಪೂರ್ತಿ ಆದೇಶ ಓದದೇ ಮಾಜಿ ಪ್ರಧಾನಿಯಾಗಿ ಪ್ರತಿಕ್ರಿಯೆ ನೀಡುವುದು ಯೋಗ್ಯವೂ ಅಲ್ಲ, ಸಮಂಜಸ ಕೂಡ ಅಲ್ಲ. ಸಂಪೂರ್ಣ ತೀರ್ಪಿನ ಪ್ರತಿ ಓದಿದ ಬಳಿಕವಷ್ಟೇ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ’ ‘ ಎಂದು ಮೊಮ್ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಬಗ್ಗೆ ಬಂದಿರುವ ಆದೇಶದ ಬಗ್ಗೆ ಹೇಳಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 09 02 at 3.42.48 PM

‘ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸ್ವಾಭಾವಿಕವಾಗಿ ಇದ್ದೇ ಇದೆ. ಸುಪ್ರೀಂ ಕೋರ್ಟ್‌ನಲ್ಲಿ ತಡೆಯಾಜ್ಞೆ ಪ್ರಯತ್ನ ಮಾಡುತ್ತಾರೆ. ಅಲ್ಲಿ ಏನಾಗುತ್ತೆ ಅಂತ ನಾನು ಹೇಳಬಾರದು. ನಾನು ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.

ಇದನ್ನು ಓದಿ : ‘ಭಾರತ’ವೆಂದರೆ ಹಿಂದೂರಾಷ್ಟ್ರ, ‘ಇಂಡಿಯಾ’ ಎಂದು ಕರೆಯಬೇಡಿ : ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್

“ನಾನು ಸದ್ಯ ದೇವಾಲಯಕ್ಕೆ ಪೂಜೆ ಮಾಡಲೆಂದು ಕುಟುಂಬದೊಂದಿಗೆ ಬಂದಿದ್ದೇನೆ. ಪೂಜೆಯಲ್ಲಿ ಪ್ರಜ್ವಲ್ ಭಾಗವಹಿಸಿದ ನಂತರ ಬೆಂಗಳೂರಿಗೆ ತೆರಳಿದ್ದಾರೆ” ಎಂದು ಮಾಜಿ ಪ್ರಧಾನಿ ಮಾಹಿತಿ ನೀಡಿದರು.

“ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿಯವರು ಭಾನುವಾರ ಮಧ್ಯಾಹ್ನದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ನಾಲೈದು ದಿನ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದೇನೆ. ಈ ಬಾರಿ ಆರೋಗ್ಯ ಸ್ವಲ್ಪ ತೊಂದರೆ ಆಗಿದ್ದು, ವೈರಲ್ ಇಂಫೆಕ್ಷನ್‌ನಿಂದ ಈ ರೀತಿ ಆಗಿದೆ” ಎಂದು ಕುಮಾರಸ್ವಾಮಿಯವರ ಆರೋಗ್ಯದ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...