ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಹೆಚ್‌ಡಿಕೆ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

Date:

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ವಕೀಲ ದೇವರಾಜೇಗೌಡ ವಿರುದ್ಧ ವಿಶೇಷ ತನಿಖಾ ತಂಡಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್‌ ಅವರು ಮಾಧ್ಯಮಗಳ ಬಂದ ವರದಿಯನ್ನು ಆಧರಿಸಿ ಗುರುವಾರ ದೂರು ನೀಡಿದ್ದಾರೆ.

“ಕುಮಾರಸ್ವಾಮಿಯವರ ಇಲ್ಲಸಲ್ಲದ ಹೇಳಿಕೆಯಿಂದ ಸಂತ್ರಸ್ತ ಮಹಿಳೆಯರು ತನಿಖಾ ತಂಡದ ಮುಂದೆ ಬಂದು ದೂರು ನೀಡಲು ಹಾಗೂ ನಿರ್ಭಿತಿಯಿಂದ ಮಾಹಿತಿ ನೀಡಲು ಭಯಪಡುತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಸಂತ್ರಸ್ತರಿರುವ ಸ್ಥಳ ಹಾಗೂ ಈ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಪ್ರಜ್ವಲ್‍ ರೇವಣ್ಣನ ಕಾರು ಚಾಲಕ ಕಾರ್ತಿಕ್ ಇರುವ ಮಾಹಿತಿಯನ್ನು ಅವರೇ ಬಹಿರಂಗ ಪಡಿಸಿದ್ದಾರೆ. ಹಾಗಾದರೆ ಪ್ರಕರಣದ ರೂವಾರಿ ಹಾಗೂ ಪ್ರಮುಖ ಆರೋಪಿ ಪ್ರಜ್ವಲ್ ತಲೆಮರೆಸಿಕೊಂಡಿರುವ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾಹಿತಿ ಇರಬೇಕು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವರಾಜೇಗೌಡ ಹಾಗೂ ಕುಮಾರಸ್ವಾಮಿ ಅವರು ಎಸ್‌ಐಟಿ ವಿರುದ್ಧ ಹೇಳಿಕೆ ನೀಡುವ ಮೂಲಕ ತನಿಖೆಯ ದಾರಿಯನ್ನು ತಪ್ಪಿಸಿ ಪರೋಕ್ಷವಾಗಿ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ.

ಕುಮಾರಸ್ವಾಮಿ ಅವರಿಗೆ ಪ್ರಜ್ವಲ್ ರೇವಣ್ಣ ಅತ್ಯಾಚಾರದ ಬಗ್ಗೆ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂತ್ರಸ್ತೆಯರು ಕೆ ಕೆ. ಗೆಸ್ಟ್ ಹೌಸ್ ನಲ್ಲಿ ಇದ್ದಾರೆಂದು ಹೇಳಿಕೆ ಕೊಡುವ ಮೂಲಕ ಸಂತ್ರಸ್ತೆ ಬಗ್ಗೆ ಮಾಹಿತಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಬಳಿಕ ವಕೀಲ ದೇವರಾಜೇಗೌಡ ಸರದಿ: ಮಹಿಳೆಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ಕಿರುಕುಳ ಆರೋಪ

ದೇವರಾಜೇಗೌಡ ಮತ್ತು ಕುಮಾರಸ್ವಾಮಿ ಅವರು ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿಕೊಂಡಿರುವ ಆರೋಪಿ ವಿರುದ್ಧ ದೂರು ನೀಡದೇ ವಿಡಿಯೋ ಹಂಚಿರುವ ವ್ಯಕ್ತಿಗಳನ್ನು ಮಾತ್ರ ಗುರುತಿಸಿ ಕ್ರಮ ಕೈಗೊಳ್ಳಲು ಆಗ್ರಹಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...