ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸೆಂಥಿಲ್ ಮಾನನಷ್ಟ ಮೊಕದ್ದಮೆ; ವಿಚಾರಣೆಗೆ ಕೋರ್ಟ್ ಸಮ್ಮತಿ

Date:

ಗಂಗಾವತಿ ಶಾಸಕ, ಗಣಿ ಉದ್ಯಮಿ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮ್ಮತಿಸಿದೆ. ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಹೇಳಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು. ಅವರ ಈ ಆರೋಪವು ಅಧಾರರಹಿತವಾಗಿದೆ. ಇಂತಹ ಹೇಳಿಕೆ ನೀಡಿ, ನನ್ನ ಮಾನಹಾನಿ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೇಕೆಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸೆಂಥಿಲ್ ಮೊಕದ್ದಮೆ ದಾಖಲಿಸಿದ್ದಾರೆ.

ದೂರಿನಲ್ಲಿ; “ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ನನ್ನ ಹೆಸರನ್ನು ಉಲ್ಲೇಖಿಸಿ ಆಧಾರಹಿತ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ನಾನು ಈ ಹಿಂದೆ, ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಶಾಸಕರಾಗಿದ್ದರು. ಆಗ ರೆಡ್ಡಿ ಎಸಗಿದ್ದ ಅಕ್ರಮಗಳ ತನಿಖೆಯಲ್ಲಿ ಸಿಇಸಿ ಮತ್ತು ಸಿಬಿಐಗೆ ಅಗತ್ಯ ನೆರವು ನೀಡಿದ್ದೆ. ಇದರಿಂದ, ನನ್ನ ವಿರುದ್ಧ ಜನಾರ್ದನ ರೆಡ್ಡಿ ದ್ವೇಷ ಸಾಧಿಸುತ್ತಿದ್ದರು. ಅದೇ ದ್ವೇಷದಿಂದ, ನನ್ನನ್ನು ‘ಹಿಂಉ ವಿರೋಧಿ’, ‘ಧರ್ಮಸ್ಥಳ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್’ ಎಂದೆಲ್ಲ ಆಧಾರರಹಿತ ಆರೋಪ ಮಾಡಿದ್ದಾರೆ. ಅವರ ಹೇಳಿಕೆಗಳನ್ನು ಮಾಧ್ಯಮಗಳು ವರದಿ ಮಾಡಿವೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

ಸೆಂಥಿಲ್ ಅವರ ಖಾಸಗಿ ದೂರನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದ ಕೋರ್ಟ್‌, ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ನಿಗದಿ ಮಾಡಿದೆ. ಅಂದು, ದೂರುದಾರರ ನ್ಯಾಯಾಲಯದಲ್ಲಿ ಹಾಜರಾಗಿ, ಸ್ವಯಂ ಹೇಳಿಕೆ ದಾಖಲಿಸಲು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...