ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ; ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು

Date:

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ (ಏ.5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಅವರು, ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್‌ ನಿರೀಕ್ಷೆಯಲ್ಲಿದ್ದರು. ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಮಂಡ್ಯ ಟಿಕೆಟ್‌ ಜೆಡಿಎಸ್‌ ಪಾಲಾಗಿದ್ದು, ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ.

ಮಂಡ್ಯ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ತಮ್ಮ ಬೆಂಬಲಿಗ ಸಭೆ ನಡೆಸಿದ ಸುಮಲತಾ ಅವರು ಪ್ರಧಾನಿ ಮೋದಿ ಮಾತಿಗೆ ಗೌರವಕೊಟ್ಟು ಬಿಜೆಪಿ ಸೇರುವುದಾಗಿ ಘೋಷಿಸಿದ್ದರು. ಆ ಪ್ರಕಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ” ಎಂದು ಸುಮಲತಾ ಅಂಬರೀಶ್​ ಅವರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...