ಮೋದಿ ನಂಬಿ ಅತಂತ್ರವಾದ ಸಂಸದೆ ಸುಮಲತಾ; ಏ.3ರಂದು ನಿರ್ಧಾರ ಘೋಷಣೆ

Date:

ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸ್ವಾಭಿಮಾನದ ಹೆಸರಿನಲ್ಲಿ ಗೆದ್ದಿದ್ದ ಸಂಸದೆ ಸುಮಲತಾ ಅವರು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾರನ್ನು ನಂಬಿ ಬಿಜೆಪಿ ಸೇರಿ, ಅತಂತ್ರರಾಗಿದ್ದಾರೆ. ಸದ್ಯ, ಅಕ್ಷರಶಃ ಅವರ ಪರಿಸ್ಥಿತಿ ಬೀದಿ ಪಾಲಾದಂತಾಗಿದೆ. ಮಂಡ್ಯ ಬಿಡಲ್ಲ ಎನ್ನುತ್ತಿರುವ ಸುಮಲತಾ, ಬಿಜೆಪಿ ಟಿಕೆಟ್‌ ಕೊಡದೆ ಕೇಸರಿ ಶಾಲನ್ನು ಕೈಗಿಟ್ಟಿದೆ. ಟಿಕೆಟ್ ಸಿಗದೆ ಅತಂತ್ರವಾಗಿರುವ ಸುಮಲತಾ, ತಮ್ಮ ಮುಂದಿನ ನಿರ್ಧಾರವನ್ನು ಏಪ್ರಿಲ್ 3ರಂದು ಬೆಂಬಲಿಗರ ಸಭೆ ನಡೆಸಿದ ಬಳಿಕ ಘೋಷಿಸುವುದಾಗಿ ಹೇಳಿದ್ದಾರೆ.

ಸದ್ಯ, ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವು ಜೆಡಿಎಸ್ ಪಾಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರೇ ಚುನಾವಣಾ ಅಖಾಡಕ್ಕೆ ಇಳಿದಿದ್ದು, ತಾವೇ ಅಭ್ಯರ್ಥಿಯಾಗಿದ್ದಾರೆ. ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯೆಂದು ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿಯಲ್ಲಿರುವ ಮಾಜಿ ಸಚಿವ ಕೆ.ಸಿ ನಾರಾಯಣಗೌಡ, ಶಿವರಾಮೇಗೌಡ ಸೇರಿದಂತೆ ಹಲವರು ಕುಮಾರಸ್ವಾಮಿ ವಿರುದ್ಧ ಬಂಡಾಯದ ಬಾವುಟ ಬೀಸಿದ್ದಾರೆ. ಅವರೆಲ್ಲರ ಮನವೊಲಿಸಲು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ.

ಇನ್ನು, ಸುಮಲತಾ ಅವರ ಬೆಂಬಲ ಪಡೆಯುವುದಾಗಿ ಕುಮಾರಸ್ವಾಮಿ ವೇದಿಕೆಯಲ್ಲಿಯೇ ಹೇಳಿದ್ದಾರೆ. ವಿಜಯೇಂದ್ರ ಕೂಡ ಸುಮಲತಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ಯಾವುದಕ್ಕೂ ಸುಮಲತಾ ಬಗ್ಗುತ್ತಿಲ್ಲ. ಈ ನಡುವೆ, ಅವರ ಬೆಂಬಲಿಗರೂ ಕೂಡ ಅವರ ನಿವಾಸದ ಎದುರು ಜಮಾಯಿಸಿದ್ದು, ಬೆಂಬಲಿಗರನ್ನು ನೋಯಿಸುವುದಿಲ್ಲ. ಸಭೆ ನಡೆಸಿ ನಿರ್ಧಾರ ತಿಳಿಸುತ್ತೇನೆಂದು ಸುಮಲತಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ್ದ ಸುಮಲತಾ, ಬಿಜೆಪಿ ಸೇರುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಇರಾದೆಯನ್ನೂ ಹೊಂದಿದ್ದರು. ಮಂಡ್ಯದ ಮೊದಲ ಬಿಜೆಪಿ ಸಂಸದೆಯಾಗಬೇಕೆಂಬ ಆಸೆಯಿರುವುದಾಗಿಯೂ ಹೇಳಿಕೊಂಡಿದ್ದರು. ಬಿಜೆಪಿ ಟಿಕೆಟ್‌ಗಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾರನ್ನು ಆಗ್ಗಾಗ್ಗೆ ಭೇಟಿ ಮಾಡಿದ್ದರು. ಬಿಜೆಪಿ ನಾಯಕರು ಕೂಡ ಸುಮಲತಾಗೆ ಬಿಜೆಪಿ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದೆ ಎಂದೂ ಹೇಳಲಾಗಿತ್ತು.

ಆದರೆ, ಮಂಡ್ಯಕ್ಕಾಗಿ ಜೆಡಿಎಸ್‌ ಪಟ್ಟು ಹಿಡಿದ ಪರಿಣಾಮ, ಸುಮಲತಾ ಅವರ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಬಿಜೆಪಿ ನಾಯಕರನ್ನು ನಂಬಿ ಹೋಗಿದ್ದಕ್ಕೆ, ಸುಮಲತಾ ಅತಂತ್ರರಾಗಿ ನಿಂತಿದ್ದಾರೆ.

“ನನ್ನ ರಾಜಕೀಯ ಏನೇ ಇದ್ದರೂ ಮಂಡ್ಯದಲ್ಲಿಯೇ. ಮಂಡ್ಯವನ್ನು ಬಿಡುವುದಿಲ್ಲ. ಮಂಡ್ಯದೊಂದಿಗೆ ನನಗಿರುವುದು ಕೇವಲ ರಾಜಕೀಯ ಸಂಬಂಧವಲ್ಲ. ಅದು ಭಾವನೆ, ಪ್ರೀತಿ. ನಾನು ಮಂಡ್ಯದಲ್ಲಿದ್ದಾಗ ಅಂಬರೀಶ್ ನನ್ನ ಜೊತೆ ಇದ್ದಂತೆಯೇ ಭಾವನೆ. ನನಗೆ ಮಂಡ್ಯವೇ ಬೇಕು” ಎಂದು ಸುಮಲತಾ ಈಗಲೂ ಹೇಳುತ್ತಿದ್ದಾರೆ.

ಅಂದಹಾಗೆ, ಸಂಸದೆಯಾಗಿ ಸುಮಲತಾ ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ. ಈ ಬಾರಿ ಸುಮಲತಾ ಸ್ಪರ್ಧಿಸಿದರೂ ಸೋಲುತ್ತಾರೆ. ಅಷ್ಟೇ ಅಲ್ಲ, ಒಂದು ವೇಳೆ, ಸುಮಲತಾ ಸ್ಪರ್ಧಿಸದೆ, ಅವರು ಬೇರೆ ಯಾರಿಗೇ ಬೆಂಬಲ ಕೊಟ್ಟರೂ, ಅವರು ಬೆಂಬಲಿಸುವ ಅಭ್ಯರ್ಥಿಯೂ ಸೋಲುತ್ತಾರೆ ಎಂಬ ಮಾತುಗಳು ಮಂಡ್ಯ ನೆಲದಲ್ಲಿ ಕೇಳಿಬರುತ್ತಿವೆ.

ಈ ಸುದ್ದಿ ಓದಿದ್ದೀರಾ?: ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆಂದು ಎಲ್ಲೂ ಹೇಳಿಲ್ಲ; ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಹೇಳಿಕೆ

ಇದೆಲ್ಲದರ ನಡುವೆ, ಸುಮಲತಾ ಬೆನ್ನಿಗೆ ನಿಂತಿರುವುದಾಗಿ ಹೇಳಿಕೊಂಡಿರುವ ಕೆ.ಸಿ ನಾರಾಯಣಗೌಡ, ಸಚ್ಚದಾನಂದ ಸೇರಿದಂತೆ ಹಲವು ಬಿಜೆಪಿಗರು ಸುಮಲತಾರನ್ನು ಸ್ವತಂತ್ರ ಅಭ್ಯರ್ಥಿಯಾಗಿಯಾದರೂ ಕಣಕ್ಕಿಳಿಸಬೇಕೆಂಬ ತಂತ್ರ ಹೆಣೆಯುತ್ತಿದ್ದಾರೆ ಎಂಬ ವದಂತಿಗಳೂ ಹರಡುತ್ತಿವೆ.

ಸದ್ಯ, ಸುಮಲತಾ ಏನು ಮಾಡುತ್ತಾರೆ. ಅವರ ಮುಂದಿನ ನಡೆ ಏನಾಗಲಿದೆ ಎಂಬುದು ಅವರೇ ಹೇಳುವಂತೆ, ಏಪ್ರಿಲ್ 3ರಂದು ತಿಳಿಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...