ನನ್ನ ಸೋಲಿಗೆ ಡಾ. ಕೆ ಸುಧಾಕರ್‌ ಕಾರಣ: ಎಂಟಿಬಿ ನಾಗರಾಜ್‌ ಆರೋಪ

Date:

  • ನಾನು ಹಣ, ಅಧಿಕಾರದ ಆಸೆಗಾಗಿ ಭಾರತೀಯ ಜನತಾ ಪಕ್ಷಕ್ಕೆ ಬಂದವನಲ್ಲ
  • ಬಿ.ಎಸ್ ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಸೋಲು ಅನುಭವಿಸಿರುವ ಬಿಜೆಪಿಯ ಮಾಜಿ ಸಚಿವ ಎಂಟಿಬಿ ನಾಗರಾಜ್‌, ತನ್ನ ಸೋಲಿಗೆ ತಮ್ಮದೇ ಪಕ್ಷದ ಮಾಜಿ ಸಚಿವ ಡಾ. ಕೆ ಸುಧಾಕರ್‌ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸೋತ ಬಿಜೆಪಿ ಅಭ್ಯರ್ಥಿಗಳ ಆತ್ಮಾವಲೋಕನ ಸಭೆಯಲ್ಲಿ ತಮ್ಮ ಸೋಲಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, “ಕಾಂಗ್ರೆಸ್​ನಲ್ಲಿ ಇದ್ದಾಗ ಮೂರು ಬಾರಿ ಗೆದ್ದಿದ್ದೆ. ಆದರೆ, ಬಿಜೆಪಿಗೆ ಬಂದು ಎರಡು ಬಾರಿ ಸೋತಿದ್ದೇನೆ. ಬಿ ಎಸ್ ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ ಎರಡು ಬಾರಿ ಸ್ಪರ್ಧಿಸಿ ಎರಡು ಬಾರಿಯೂ ಸೋತಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ. ಕೆ ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಡಾ. ಕೆ ಸುಧಾಕರ್​ ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ. ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ. ಕೆ ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್​ನಿಂದಾಗಿಯೇ ನಾನು ಸೋತಿದ್ದು” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್ಚು ಆಯಸ್ಸಿಲ್ಲ: ಬಿಜೆಪಿ ಕಿಡಿ

“ನಾನು ಹಣ, ಅಧಿಕಾರದ ಆಸೆಗಾಗಿ ಭಾರತೀಯ ಜನತಾ ಪಕ್ಷಕ್ಕೆ ಬಂದವನಲ್ಲ. 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಕೌಂಟರ್​ ಅಟ್ಯಾಕ್ ಮಾಡಲಿಲ್ಲ. ಬದಲಾಗಿ ನಾವು ಕೇವಲ ಸಿದ್ದರಾಮಯ್ಯಗೆ ಮಾತ್ರ ಬೈದೆವು. ಹಾಗೇ ಚುನಾವಣೆ ವೇಳೆ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು ಪ್ರಮುಖ ಕಾರಣ. ಕಾಂಗ್ರೆಸ್​ನ 10 ಕೆ.ಜಿ ಅಕ್ಕಿ ಗ್ಯಾರಂಟಿಯೂ ನಮ್ಮ ಸೋಲಿಗೆ ಕಾರಣವಾಯ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...