ಅನ್ನಭಾಗ್ಯ: ರಾಜ್ಯದಲ್ಲೇ ಬೇಡಿಕೆ ಪೂರೈಕೆಯಷ್ಟು ಅಕ್ಕಿ ಇದ್ದರೆ ಇಲ್ಲೇ ಖರೀದಿ: ಸಿಎಂ ಸಿದ್ದರಾಮಯ್ಯ

Date:

  • ಅಕ್ಕಿ ಕೊಡುವುದಾಗಿ ಹೇಳಿರುವ ಪಂಜಾಬ್ ಸರ್ಕಾರದ ಜೊತೆ ಮಾತನಾಡುತ್ತೇವೆ
  • ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ

ಅನ್ನಭಾಗ್ಯ ಯೋಜನೆಗೆ ಪೂರೈಸುವಷ್ಟು ಅಕ್ಕಿ ರಾಜ್ಯದಲ್ಲೇ ದೊರೆಯುವಂತಿದ್ದರೆ ಇಲ್ಲೇ ಅಕ್ಕಿ ಖರೀದಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಸದ್ಯ ಸ್ವಲ್ಪವೂ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ಅದರ ಬದಲಿಗೆ ರಾಗಿ, ಜೋಳ ಕೊಡಿ ಅಂತ ಕೆಲವರು ಸಲಹೆ ಕೊಡುತ್ತಿದ್ದಾರೆ. ಆದರೆ ಅವುಗಳ ದಾಸ್ತಾನು ಕೂಡ ಇಲ್ಲ” ಎಂದರು.

“ಜುಲೈ 1ರಿಂದ ಅಕ್ಕಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದಲ್ಲಿ ಅಕ್ಕಿ ಇದ್ದರೆ ಟೆಂಡರ್ ಮೂಲಕ ಖರೀದಿ ಮಾಡ್ತೇವೆ. ಇದರಿಂದ ರೈತರಿಗೆ ಸಹಾಯ ಆಗುತ್ತದೆ” ಎಂದು ಸಿದ್ದರಾಮಯ್ಯ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನ್ನಭಾಗ್ಯ ಯೋಜನೆಯಲ್ಲಿ ವಾರ್ಷಿಕ 1092 ಕೋಟಿ ರೂ. ಅಕ್ಕಿಗೆ ಬೇಕಾಗುತ್ತೆ” ಎಂದ ಸಿಎಂ, “ಅಕ್ಕಿ ಕೊಡುವುದಾಗಿ ಹೇಳಿರುವ ಪಂಜಾಬ್‌ನ ಆಪ್ ಸರ್ಕಾರದ ಜತೆ ನಮ್ಮ ಮುಖ್ಯ ಕಾರ್ಯದರ್ಶಿ ಮಾತಾಡಿದ್ದಾರೆ. ನಮ್ಮ ಬೆಲೆಗೆ ಪಂಜಾಬ್ ಸರ್ಕಾರ ಅಕ್ಕಿ ಕೊಡುವುದಾದರೆ ಅಲ್ಲಿಂದಲೂ ಖರೀದಿ ಮಾಡುತ್ತೇವೆ” ಎಂದು ಹೇಳಿದರು.

“ನಾವು ಉಚಿತವಾಗಿ ತಲಾ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಇದು ನಮ್ಮ ವಾಗ್ದಾನ. ಆದರೆ ಆಂಧ್ರಪ್ರದೇಶ, ಪಂಜಾಬ್, ತೆಲಂಗಾಣದಲ್ಲಿ ಅಕ್ಕಿ ಸಿಗುತ್ತಿಲ್ಲ. ಎಲ್ಲಿ ಭತ್ತ ಬೆಳೆಯುತ್ತಿದ್ದಾರೋ ಅಲ್ಲೇ ಅಕ್ಕಿ ಸಿಗುತ್ತಿಲ್ಲ. ಹೀಗಾಗಿ ಅಕ್ಕಿ ಹೊಂದಾಣಿಕೆ ಮಾಡುತ್ತಿದ್ದೇವೆ” ಎಂದರು.

ಇದೇ ವೇಳೆ ಕೇಂದ್ರ ಸರ್ಕಾರದ ಅಕ್ಕಿ ರಾಜಕಾರಣದ ವಿಚಾರದಲ್ಲಿ ಕಿಡಿ ಕಾರಿದ ಸಿಎಂ, “ಜೂ.12ರಂದು ಎಫ್‌ಸಿಐ ಅಕ್ಕಿ ಕೊಡುವುದಾಗಿ ಹೇಳಿತ್ತು. ಆಮೇಲೆ ಅಕ್ಕಿ ಪೂರೈಸಲ್ಲ ಎಂದು ಪತ್ರ ಬರೆದಿದೆ” ಎಂದು ಸಿಎಂ ಮಾಹಿತಿ ನೀಡಿದರು.

“ಎಫ್‌ಸಿಐ ನಡೆದುಕೊಳ್ಳುತ್ತಿರುವುದನ್ನು ನೋಡಿದರೆ ಇದನ್ನು ರಾಜಕೀಯ ಎಂದಲ್ಲದೆ ಮತ್ತೇನೆಂದು ಹೇಳಬೇಕು? ಕೇಂದ್ರ ಸರ್ಕಾರವೇನು ಪುಕ್ಕಟ್ಟೆಯಾಗಿ ಅಕ್ಕಿ ಕೊಡುವುದಿಲ್ಲ. ಕೇಂದ್ರದಿಂದ ಅಕ್ಕಿ ಪೂರೈಕೆ ಮಾಡದಿರುವುದು ದೊಡ್ಡ ಷಡ್ಯಂತ್ರ. ಬಡವರು ಕಾಂಗ್ರೆಸ್ ಪರ ಇರುತ್ತಾರೆ ಅಂತ ಈ ರೀತಿ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? :ಅಸಲಿ ಹಿಂದುತ್ವಕ್ಕೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

“ಬಿಜೆಪಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ? ಇವರು ಬಡವರ ವಿರೋಧಿ. ದುಡ್ಡು ಕೊಡುತ್ತೇವೆ ಅಂದರೂ ಕೊಡಲ್ಲ ಅಂತಿದ್ದಾರೆ. ಖಾಸಗಿಯವರಿಗೆ ಬೇಕಾದರೆ ಕೊಡುತ್ತಾರೆ, ನಮಗಿಲ್ಲ ಎನ್ನುತ್ತಾರೆ. ಇದು ದ್ವೇಷದ ರಾಜಕೀಯ. ಬಿಜೆಪಿ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಅಕ್ಕಿ ಏನು ಕೇಂದ್ರ ಸರ್ಕಾರ ಬೆಳೆಯುತ್ತಾ? ಜಾಗ ಇಟ್ಟುಕೊಂಡು ಭತ್ತ, ಅಕ್ಕಿ ಬೆಳೆಯುತ್ತಿದ್ದಾರಾ?” ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಇನ್ನು ಸಿಎಂ ಅವಧಿ ವಿಚಾರದ ಬಗ್ಗೆ ಸಚಿವರಾದ ಮಹದೇವಪ್ಪ ಮತ್ತು ಎಂ.ಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಸರ್ಕಾರ ರಚನೆಯಾಗಿದೆ, ಸರಾಗವಾಗಿ ಸರ್ಕಾರ ನಡೆಯುತ್ತಿದೆ. ಅಧಿಕಾರ ಹಂಚಿಕೆ ವಿಚಾರವಾಗಿ ಯಾರು ನಿಮಗೆ ಮಾಹಿತಿ ನೀಡಿದರೋ ಅವರನ್ನೇ ಹೋಗಿ ಕೇಳಿ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...