ಮುಡಾ ಪ್ರಕರಣ | ಸಿಬಿಐ ತನಿಖೆಗೆ ನಿರಾಕರಿಸಿದ ಹೈಕೋರ್ಟ್‌, ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ (ಕೇಂದ್ರ ತನಿಖಾ ದಳಕ್ಕೆ) ವಹಿಸಲು ಧಾರವಾಡದ ಹೈಕೋರ್ಟ್‌ ಪೀಠ ನೀರಾಕರಿಸಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಕರಣದಲ್ಲಿ ಬಿಗ್‌ ರಿಲೀಪ್‌ ಸಿಕ್ಕಂತಾಗಿದೆ.

ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶವನ್ನು ಕಾಯ್ದಿರಿಸಿತ್ತು. ಶುಕ್ರವಾರ ಈ ಕುರಿತು ಆದೇಶ ನೀಡಿದ್ದು, ಲೋಕಾಯುಕ್ತವೇ ತನಿಖೆ ಮುಂದುವರಿಸಲಿ ಎಂದು ಹೈಕೋರ್ಟ್‌ ಹೇಳುವ ಮೂಲಕ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಮಣೀಂದ್ರ್ ಸಿಂಗ್, ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಸಿದ್ದರಾಮಯ್ಯ ಪತ್ನಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ ಅರ್ಜಿದಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮುಡಾದಿಂದ ನಿವೇಶನಗಳನ್ನು ಅಕ್ರಮವಾಗಿ ಪಡೆದಿರುವ ಆರೋಪವಿದೆ. ಈಗಾಗಲೇ ಪ್ರಕರಣದ ತನಿಖೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಆದರೆ, ಸಿದ್ದರಾಮಯ್ಯ ರಾಜ್ಯದ ಹಾಲಿ ಮುಖ್ಯಮಂತ್ರಿ ಆಗಿದ್ದು, ರಾಜ್ಯ ಸರ್ಕಾರದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಸ್ನೇಹಮಯಿ ಕೃಷ್ಣ ಕೋರಿದ್ದರು.‌

ಸುಪ್ರೀಂಕೋರ್ಟ್‌ಗೆ ಅರ್ಜಿ: ವಕೀಲ ಲಕ್ಷ್ಮಣ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುತ್ತಿಕೊಂಡ ಮುಡಾ ಪ್ರಕರಣ ಸಿಬಿಐಗೆ ಸಲ್ಲಿಸಬೇಕು ಎಂಬ ಅರ್ಜಿಯನ್ನು ಹೈ ಕೋರ್ಟ್ ವಜಾಗೊಳಿಸಿದರೂ, ನಾವು ಸುಪ್ರೀಂಕೋರ್ಟ್‌ಗೆ ಹೋಗು‌ತ್ತೇವೆ ಎಂದು ಸ್ನೇಹಮಯಿ ಕೃಷ್ಣ ಪರ ತಂಡದ ವಕೀಲ ಲಕ್ಷ್ಮಣ್ ಸಿ. ಕುಲಕರ್ಣಿ ಹೇಳಿದರು.

ಧಾರವಾಡ ಹೈಕೋರ್ಟ್ ನಲ್ಲಿ ಶುಕ್ರವಾರ (ಫೆ.07) ಈ ಪ್ರಕರಣ ತೀರ್ಪು ಹೊರಬಿದ್ದ ನಂತರ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಪ್ರಕರಣವನ್ನು ನ್ಯಾಯಾಲಯವು ಸಿಬಿಐಗೆ ವಹಿಸುವ ಭರವಸೆ ಇತ್ತು. ಆದರೆ ಯಾವ ಆಧಾರದ ಮೇಲೆ ಅರ್ಜಿ ವಜಾ ಆಗಿದೆ ಎಂಬುದನ್ನು ತೀರ್ಪಿನ ಪ್ರತಿ ನಮ್ಮ ಕೈ ಸೇರಿದ ನಂತರ ಗೊತ್ತಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...