ಮುಡಾ ಪ್ರಕರಣ | ಸಚಿವ ಜಮೀರ್‌ ಅಹಮದ್‌ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ

Date:

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಹೈಕೋರ್ಟ್‌ನ ತೀರ್ಪು ರಾಜಕೀಯ ಪ್ರೇರಿತ ತೀರ್ಪು ಎಂಬುದಾಗಿ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ ಎನ್ನಲಾದ ಆರೋಪ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಸೂಚನೆ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್‌ ಪ್ರಭುಶಂಕರ್‌ ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

“ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧ ಸಚಿವರು ಗಂಭೀರ ಆರೋಪ ಮಾಡಿದ್ದು, ಆ ಮೂಲಕ ನ್ಯಾಯಾಲಯದ ಬಗೆಗಿನ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದಂತಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಸಲ್ಲಿಸಿರುವ ಮನವಿಯ ಪ್ರತಿಯನ್ನು ಪತ್ರದೊಂದಿಗೆ ಲಗತ್ತಿಸಿದ್ದೇನೆ. ಈ ಸಂಬಂಧ ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ” ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋವಿಡ್‌ ದುರಂತದಲ್ಲೂ ʼಹೆಣದ ಮೇಲೆ ಹಣʼ ಎತ್ತಿದವರ ಅಮಾನವೀಯತೆ

ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಸಂಬಂಧ ವಿಚಾರಣೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್‌, ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿತ್ತು. ಬಳಿಕ ಜಮೀರ್‌ ಅಹಮದ್‌ ಖಾನ್‌ ಅವರು ನ್ಯಾಯಾಲಯದ ತೀರ್ಪನ್ನು ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದರು ಎಂದು ಟಿ ಜೆ ಅಬ್ರಹಾಂ ಆರೋಪಿಸಿ ರಾಜ್ಯಪಾಲರಿಗೆ ಕ್ರಮಕೈಗೊಳ್ಳಲು ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...