ಮುಡಾ ಪ್ರಕರಣ | ತನಿಖೆ ನಡೆಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ತಾನು ನಿರ್ಧರಿಸುವವರೆಗೆ ಲೋಕಾಯುಕ್ತ ತನಿಖೆಗೆ ನಿರ್ಬಂಧಿಸಿದ ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಅರ್ಜಿ ವಿಚಾರಣೆ ನಡೆಸಿ, ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನವರಿ 15ಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಹಾಜರಾಗಿದ್ದ ಸಿದ್ದರಾಮಯ್ಯ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಕೀಲರು, “ಎರಡು ದಿನಗಳ ಹಿಂದೆಯಷ್ಟೇ ನೋಟಿಸ್​ ಜಾರಿಯಾಗಿದೆ. ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಅರ್ಜಿಯ ವಿಚಾರಣೆ ಮುಂದೂಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಪತ್ನಿ ಪರ ಹಾಜರಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್​, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಪೀಠ, ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರತಿವಾದಿಯನ್ನಾಗಿಸಲು ಸೂಚನೆ ನೀಡಿತು.

ವಿಚಾರಣೆ ವೇಳೆ ರವಿವರ್ಮ ಕುಮಾರ್​, “ನಮ್ಮ ಕಕ್ಷಿದಾರರಿಗೆ ಈವರೆಗೂ ನೋಟಿಸ್​ ಜಾರಿ ಮಾಡಿಲ್ಲ. ಆದರೂ, ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬಾರದೆಂದು ಆದೇಶಿಸಲಾಗಿದೆ. ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೇಳಿಯೇ ಇಲ್ಲ. ಆದರೂ ಈ ಆದೇಶ ನೀಡಲಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ನಮ್ಮ ವಾದ ಆಲಿಸದೆಯೇ ಸ್ವಯಂಪ್ರೇರಿತವಾಗಿ ಈ ಆದೇಶ ನೀಡುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಇದಕ್ಕೆ ನ್ಯಾಯಪೀಠ, “ಅರ್ಜಿ ಸಲ್ಲಿಕೆಯಾಗಿ 35 ದಿನಗಳಾಗಿವೆ. ಆದರೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿರಲಿಲ್ಲ. ಹೀಗಾಗಿ ಹ್ಯಾಂಡ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಪ್ರತಿವಾದಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಯಾವುದೇ ಮಧ್ಯಂತರ ತಡೆ ನೀಡಿಲ್ಲ. ಸೆಷನ್ಸ್ ಕೋರ್ಟ್​ಗೆ ಡಿ.24ಕ್ಕೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕಿದೆ. ಅಂತಿಮ ವರದಿ ಸಲ್ಲಿಸಿದರೆ ಅರ್ಜಿ ವಿಚಾರಣೆಗೆ ತೊಂದರೆಯಾಗುತ್ತದೆ. ಹೀಗಾಗಿ ಅಂತಿಮ ವರದಿ ಸಲ್ಲಿಸಲು ನೀಡಿರುವ ಗಡುವು ವಿಸ್ತರಿಸಲಾಗುತ್ತಿದೆ” ಎಂದು ನ್ಯಾಯಪೀಠ ತಿಳಿಸಿತು.

ಇದೇ ವೇಳೆ, “ಈ ಹಿಂದೆ ಜನವರಿ 28ರವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಸಲ್ಲಿಕೆಗೆ ಕಾಲಾವಕಾಶ ನೀಡುತ್ತಿದ್ದೇನೆ” ಎಂದು ತಿಳಿಸಿ ವಿಚಾರಣೆ ಮುಂದೂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...