ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಅರ್ಜಿ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

Date:

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಿದೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ಮುಡಾ ಪ್ರಕರಣ; ನ.6ರಂದು ಅರೆಬೆತ್ತಲೆ ಮೆರವಣಿಗೆಗೆ ದಸಂಸ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ಹಾಜರಾಗಿದ್ದು, ತನಿಖೆಯಲ್ಲಿ ಸಾರ್ವಜನಿಕ ನಂಬಿಕೆ ಬರಬೇಕು. ಅದಕ್ಕಾಗಿ ಸಿಬಿಐ ತನಿಖೆ ಅಗತ್ಯ ಎಂದು ಹೇಳಿದ್ದಾರೆ.

ನವೆಂಬರ್‌ 25ರವರೆಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೆಲ್ಲಾ ತನಿಖೆ ನಡೆಸಲಾಗಿದೆ ಎಂಬುದರ ವರದಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಜೊತೆಗೆ ಎಲ್ಲಾ ಪ್ರತಿವಾದಿಗಳು ನೋಟಿಸ್‌ ಜಾರಿ ಮಾಡಿ ನವೆಂಬರ್‌ 26ಕ್ಕೆ ವಿಚಾರಣೆ ಮುಂದೂಡಿದೆ.

ಹೈಕೋರ್ಟ್ ಪ್ರಕರಣದ ಪ್ರತಿವಾದಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಂ.ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ, ಲೋಕಾಯುಕ್ತ ಎಡಿಜಿಪಿ, ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಡಿಜಿ-ಐಜಿಪಿ, ವಿಜಯನಗರ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರದ ಪರ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ಸಿಬಿಐ ಪರ ಪಿ.ಪ್ರಸನ್ನ ಕುಮಾರ್ ನೋಟಿಸ್‌ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...