ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್‌ ಆದೇಶ

Date:

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್​ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್​ ಆದೇಶಿಸಿದೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ 14 ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣವು ಭಾರೀ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ತಮ್ಮ ಜಮೀನನ್ನು ಅನುಮತಿ ಪಡೆಯದೆಯೇ ಮುಡಾ ವಶಪಡಿಸಿಕೊಂಡು, ನಿವೇಶನ ನಿರ್ಮಿಸಿತ್ತು. ಅದಕ್ಕೆ ಪರಿಹಾರವಾಗಿ 14 ನಿವೇಶನಗಳನ್ನು ಬೇರೆಡೆ ನೀಡಿದೆ ಎಂದು ಸಿದ್ದರಾಮಯ್ಯ ಮತ್ತು ಪಾರ್ವತಿ ಹೇಳಿದ್ದರು. ಆದಾಗ್ಯೂ, ತಾವು ಪಡೆದಿದ್ದ ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು.

ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ಏಕಸದಸ್ಯ ಪೀಠ ವಜಾ ಗೊಳಿಸಿತ್ತು. ಲೋಕಾಯುಕ್ತ ತನಿಖೆಯು ಅಸಮರ್ಪಕವಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೀಠ ಹೇಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ಸಿ.ಎಂ ಜೋಶಿ ಅವರಿದ್ದ ಪೀಠವು, ಪ್ರಕರಣದಲ್ಲಿ ಪಾರ್ವತಿ ಅವರಿಗೆ ಈವರೆಗೆ ನೋಟಿಸ್‌ ನೀಡಲಾಗಿಲ್ಲ ಎಂಬುದನ್ನು ಗಮನಿಸಿದೆ. ಅವರಿಗೆ ನೋಟಿಸ್‌ ನೀಡುವಂತೆ ಆದೇಶಿಸಿದೆ. ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...