ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Date:

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರಿಗೆ ತಲೆನೋವು ಹೆಚ್ಚಾಗಿದೆ.

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಆಗಸ್ಟ್ 17ರಂದು ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನು ಓದಿದ್ದೀರಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಇಂದು ಹೈಕೋರ್ಟ್ ತೀರ್ಪು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮೊದಲ ಬಾರಿಗೆ ಆಗಸ್ಟ್ 19ರಂದು ಕೈಗೆತ್ತಿಕೊಂಡಿದ್ದು ತೀರ್ಪು ಪ್ರಕಟವಾಗುವವರೆಗೂ ವಿಚಾರಣೆ ಮುಂದೂಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಮಧ್ಯಂತರ ಆದೇಶ ನೀಡಿತ್ತು.

ಇದೀಗ ಮಧ್ಯಂತರ ಆದೇಶವನ್ನು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜೊತೆಗೆ “ರಾಜ್ಯಪಾಲರು ತನಿಖೆಗೆ ನೀಡಿರುವ ಮಂಜೂರಾತಿಯಲ್ಲಿ ಯಾವುದೇ ದೋಷವಿಲ್ಲ, ವಿವೇಚನಾಯುತವಾಗಿದೆ. ತನಿಖಾಧಿಕಾರಿಯಿಂದ ಮುಂಚಿತವಾಗಿ ತನಿಖೆ ನಡೆಸಿ ವರದಿ ಪಡೆಯಬೇಕಾದ ಅಗತ್ಯವಿಲ್ಲ” ಎಂದು ಹೇಳಿದೆ.

ಮಧ್ಯಂತರ ಆದೇಶವನ್ನು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿರುವುದರಿಂದಾಗಿ ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್‌, ಟಿ ಜೆ ಅಬ್ರಹಾಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದಿಸಿದ್ದರು. ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...