ಮುಡಾ ಪ್ರಕರಣ | ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅಶೋಕ್‌, ವಿಜಯೇಂದ್ರ ಆಗ್ರಹ

Date:

ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ ನಿರ್ಧಾರವನ್ನು ಈ ಮೂಲಕ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರು ಅವರು, “ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನು, ರಾಜಭವನವನ್ನು ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್‌ ತೀರ್ಪು ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ” ಎಂದು ಟೀಕಿಸಿದ್ದಾರೆ.

“ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನು ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆ ಅವರ ಶಿಷ್ಯ ಎಂದು ಹೇಳಿಕೊಳ್ಳುತ್ತಾರೆ. ಈಗ ಹೈಕೋರ್ಟ್‌ ತೀರ್ಪು ನೀಡಿದೆ. ರಾಜೀನಾಮೆ ನೀಡಿದ ಬಳಿಕವೇ ಅವರು ಮುಂದಿನ ಹಂತದಲ್ಲಿ ಪ್ರಶ್ನೆ ಮಾಡಲಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರಾಜೀನಾಮಗೆ ಬಿ ವೈ ವಿಜಯೇಂದ್ರ ಒತ್ತಾಯ

ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇರುವುದು ಹೈಕೋರ್ಟ್‌ ತೀರ್ಪಿನಿಂದ ಗೊತ್ತಾಗುತ್ತದೆ. ರಾಜ್ಯಪಾಲರ ಅನುಮತಿಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಸಿಎಂ ಸಿದ್ದರಾಮಯ್ಯ ಹಸ್ತಕ್ಷೇಪ ಇರುವುದು ಈ ಮೂಲಕ ಗೊತ್ತಾಗಿದೆ. ನೈತಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...