ಮುಡಾ ಪ್ರಕರಣ | ತನಿಖೆ ಎದುರಿಸಲು ಸಿದ್ಧ, ಹೆದರಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಇಂದು (ಸೆ.25) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ. ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರಿಗೆ ಲೋಕಾಯುಕ್ತಕ್ಕೆ ಶಿಫಾರಸ್ಸು

“ನಿನ್ನೆಯೂ ಕೂಡ ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸ್ಸು ಮಾಡಿರಬೇಕು ಎಂದು ಭಾವಿಸಿದ್ದೇನೆ” ಎಂದರು.

ಪಿ ಎನ್ ದೇಸಾಯಿ ಆಯೋಗದ ತನಿಖೆ ಮುಂದುವರೆಯಲಿದೆ

“ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು. ಮೂಡಾ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗ ಅದರ ತನಿಖೆ ಮುಂದುವರೆಯುತ್ತದೆ. ಪೂರ್ಣ ಪ್ರತಿಕ್ರಿಯೆ ನೀಡಲು ನಾನು ಪೂರ್ಣ ಆದೇಶ ಓದಿದ ಮೇಲೆ ನಾಳೆ ಬೆಳಿಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...