ಮುಡಾ ಪ್ರಕರಣ | ಸಿಎಂ ಪತ್ನಿ ಬರೆದ ಪತ್ರ ಮುಡಾ ಆಯುಕ್ತರಿಗೆ ಸಲ್ಲಿಸಿದ ಯತೀಂದ್ರ ಸಿದ್ದರಾಮಯ್ಯ

Date:

ಮುಡಾದಿಂದ ನೀಡಲಾದ 14 ಬದಲಿ ನಿವೇಶನಗಳನ್ನು ವಾಪಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ ಎಂ ಪಾರ್ವತಿ ಬರೆದ ಪತ್ರವನ್ನು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಮಂಗಳವಾರ ಸಲ್ಲಿಸಿದ್ದಾರೆ‌.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಡಾ ಆಯುಕ್ತ ರಘುನಂದನ್, “ಪಾರ್ವತಿ ಅವರ ಪರವಾಗಿ ಡಾ. ಯತೀಂದ್ರ ಪತ್ರವನ್ನು ನೀಡಿದ್ದಾರೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸುತ್ತೇವೆ” ಎಂದಿದ್ದಾರೆ.

“ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಕೆಲವು ದಾಖಲೆಗಳನ್ನು ಕೇಳಿದ್ದು, ತನಿಖೆಗೆ ಸಹಕಾರ ನೀಡುತ್ತಿದ್ದೇವೆ. ಇ.ಡಿ‌. ಯಿಂದ ಈವರೆಗೆ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರದಲ್ಲಿ ಏನಿದೆ?

“ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬ್ತು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನಮಗೆ ದೊರಕಿರುವ 14 ಸೈಟ್‌ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ” ಎಂದು ಸುದೀರ್ಘ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...