‌ಸಿಎಂ ವಿರುದ್ಧ ಬಿಜೆಪಿ ಕುತಂತ್ರ, ಕಾನೂನು ಪ್ರಕಾರವೇ ಎದುರಿಸುತ್ತೇವೆ: ಡಿ ಕೆ ಶಿವಕುಮಾರ್‌

Date:

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸಿದೆ. ಮುಡಾ ಪ್ರಕರಣದಲ್ಲಿ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯಲು ಬಿಜೆಪಿ ಕುತಂತ್ರ ನಡೆಸಿದೆ. ನಾವು ಇದನ್ನು ಕಾನೂನು ಪ್ರಕಾರವೇ ಎದುರಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿಳಿಸಿದರು.

ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ, “ಹೈಕೋರ್ಟ್‌ ತೀರ್ಪಿನಲ್ಲಿ ಏನಿದೆ ಎಂಬುದನ್ನು ನೋಡಿ ಮಾತನಾಡುವೆ. ತನಿಖಿಗೆ ಹೈಕೋರ್ಟ್‌ ಒಪ್ಪಿದೆ. ಆದರೆ ಸಿದ್ದರಾಮಯ್ಯ ಅವರು ತಪ್ಪೇ ಮಾಡಿದ್ದಾರೆ ಎಂದು ಹೈಕೋರ್ಟ್‌ ಹೇಳಿಲ್ಲ. ತನಿಖೆ ನಡೆದು ನಮ್ಮ ಮುಖ್ಯಮಂತ್ರಿಗಳಿಗೆ ಕ್ಲೀಟ್‌ ಚೀಟ್‌ ಸಿಗಲಿದೆ” ಎಂದರು.

“ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯವರು ಷಡ್ಯಂತ್ರ ನಡೆಸಿದ್ದಾರೆ. ಜನಪರವಾಗಿ ಸಿದ್ದರಾಮಯ್ಯ ಅವರು ಕೊಟ್ಟ ಕಾರ್ಯಕ್ರಮಗಳನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನಮಗೆ ಈಗಲೂ ಭರವಸೆ ಇದೆ; ನಮ್ಮ ಸಿದ್ದರಾಮಯ್ಯ ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಅವರ ಜೊತೆ ನಾವಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...