ಮುಡಾ | ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ಆರೋಪ

Date:

ಮುಡಾ ಕುರಿತು ಇ.ಡಿ ಅವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು (ಜ.20) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಇ.ಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇ.ಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ” ಎಂದು ದೂರಿದರು.

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,”ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಪ್ಪಿತಸ್ಥರ ವಿರುದ್ಧ ಕ್ರಮ

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು. ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ವರದಿಯಾಗಿದೆ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...