ಮುಡಾ ಅಕ್ರಮ | ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಇ.ಡಿ ಸಮನ್ಸ್

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ.

ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ ದಾಖಲೆಗಳೊಂದಿಗೆ ಬೆಂಗಳೂರಿನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಬರುವಂತೆ ಅಧಿಕಾರಿಗಳಿಗೆ ನೀಡಿರುವ ಸಮನ್ಸ್‌ನಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ವಿಚಾರಣೆ ಪೂರ್ಣಗೊಳಿಸಿದ್ದ ಇ.ಡಿ ಅಧಿಕಾರಿಗಳು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಇದೀಗ ಅದರ ಆಧಾರದಲ್ಲಿ ಅಧಿಕಾರಿಗಳನ್ನು ವಿಚಾರಣೆಗೆ ಬರುವಂತೆ ಸೂಚಿಸಿರುವುದರೊಂದಿಗೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...