ಮುಡಾ ಅಕ್ರಮ | ನಾನು ಸಿಎಂ ಇದ್ದಾಗಲೇ ಪತ್ನಿ ಅರ್ಜಿ ಸಲ್ಲಿಕೆ, ಆಗಲೂ ನಾನು ಯಾವುದೇ ಕ್ರಮ ಕೈಗೊಂಡಿಲ್ಲ: ಸಿದ್ದರಾಮಯ್ಯ

Date:

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್‌ಗೆ ಈಗಾಗಲೇ ಉತ್ತರ ನೀಡಲಾಗಿದೆ. ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ” ಎಂದರು.

“2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ” ಎಂದು ಕಿಡಿಕಾರಿದರು.

“ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ” ಎಂದರು.

ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ

“ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ” ಎಂದು ತಿಳಿಸಿದರು.

ಸತ್ಯಕ್ಕೇ ಅಂತಿಮ ಜಯ

“ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು” ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...