ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Date:

ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ ಎಂ ಪಾರ್ವತಿ ಸೇರಿ ಆರು ಮಂದಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ ಎಂ ಮಲ್ಲಿಕಾರ್ಜುನಸ್ವಾಮಿ ಮುಡಾದ ಮಾಜಿ‌ ಅಧ್ಯಕ್ಷರಾದ ಬಸವನಗೌಡ, ಹೆಚ್ ವಿ ರಾಜೀವ್ ಹಾಗೂ ಆಯುಕ್ತರಾಗಿದ್ದ ಡಿ.ಬಿ. ನಟೇಶ್ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ ಹಾಗೂ ಭ್ರಷ್ಟಾಚಾರ ಆರೋಪದಡಿ ಎನ್ ಆರ್‌ ರಮೇಶ್ ದೂರು ದಾಖಲಿಸಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “1997-98ರಲ್ಲಿ ಜೆ ಹೆಚ್​ ಪಟೇಲ್​ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸ್ವಾಧೀನಪಡಿಸಿಕೊಂಡ ದೇವನೂರು ಮೂರನೇ ಬಡಾವಣೆಯನ್ನು ಮುಡಾ ಕೈ ಬಿಡುವಂತೆ ಅಧಿಸೂಚನೆ ಹೊರಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅಲ್ಲದೆ 20೦4-05ರಲ್ಲಿ ಧರ್ಮಸಿಂಗ್ ಅವರ ಸರ್ಕಾರದಲ್ಲೂ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಇದೇ ಭೂಮಿಯನ್ನು ಮೃತ ಲಿಂಗ ಎಂಬ ಹೆಸರಿನ ವ್ಯಕ್ತಿಯ ಹೆಸರಿನಲ್ಲಿ ಭೂ ಪರಿವರ್ತನೆ ಮಾಡಿಸಿದ್ದರು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರಿನಲ್ಲಿ ಏನಿದೆ?

ರಾಜಕೀಯ ಪ್ರಭಾವದಿಂದ ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾಗಿ ಬದಲಿ ನಿವೇಶನ ಪಡೆದು ಈ ಮೂಲಕ 40 ಕೋಟಿಗಿಂತ ಹೆಚ್ಚು ಹಣ ಸರ್ಕಾರದ ನಷ್ಟಕ್ಕೆ ಕಾರಣರಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಿಎಂ ಪತ್ನಿ ಹೆಸರಿನಲ್ಲಿರುವ 3.16 ಎಕರೆ ಸ್ವಾಧೀನಪಡಿಸಿಕೊಂಡು ಬಳಿಕ 1998ರಲ್ಲಿ ಭೂಸ್ವಾಧೀನದಿಂದ ಕೈ ಬಿಟ್ಟಿತ್ತು. 2005ರಲ್ಲಿ ವ್ಯವಸಾಯ ಭೂಮಿಯಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿತ್ತು. ಸಿದ್ದರಾಮಯ್ಯ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಹೆಸರಿನಲ್ಲಿದ್ದ ಭೂಮಿಯನ್ನ ಸಹೋದರಿ ಪಾರ್ವತಿಗೆ ಭೂ ದಾನ ಮಾಡಿದ್ದರು ಎಂದು ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ ಬಿ ಎಂ ಪಾರ್ವತಿಯವರಿಗೆ ವಾಸ್ತವವಾಗಿ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಗಳಿಗೆ ಬದಲಾಗಿ, ಅದಕ್ಕಿಂತಲೂ ಹತ್ತಾರು ವರ್ಷಗಳ ಹಿಂದೆಯೇ ಮುಡಾ ಅಭಿವೃದ್ಧಿಪಡಿಸಿರುವ “ವಿಜಯನಗರ 3 ಮತ್ತು 4ನೇ ಹಂತದ ಬಡಾವಣೆ”ಗಳಲ್ಲಿನ ಅತ್ಯಂತ ಆಯಕಟ್ಟಿನ ಸ್ಥಳಗಳಲ್ಲಿರುವ ದುಬಾರಿ ನಿವೇಶನಗಳನ್ನು “ಬದಲಿ ನಿವೇಶನ”ದ ಹೆಸರಿನಲ್ಲಿ ಹಂಚಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ರಾಜ್ಯದ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ಧರಾಮಯ್ಯನವರ ರಾಜಕೀಯ ಪ್ರಭಾವಗಳಿಗೆ ಒಳಗಾಗಿ ಮುಡಾದ ಅಧ್ಯಕ್ಷರಾಗಿದ್ದ ಎಚ್‌ ವಿ ರಾಜೀವ್ ಮತ್ತು ಆಯುಕ್ತರಾಗಿದ್ದ ಡಿ ಬಿ ನಟೇಶ್ ಅವರು ಈ ಕಾನೂನುಬಾಹಿರ ಕೃತ್ಯವನ್ನು ಎಸಗಿದ್ದಾರೆ‌‌ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...