ಮುಂಬೈ ಚುನಾವಣೆ | ಒಡೆದ ಎಂವಿಎ: ಹೊಸ ಮೈತ್ರಿಗಳ ಉದಯ; 32 ಸ್ಥಾನಗಳಲ್ಲಿ ಮಹಾಯುತಿ – ಠಾಕ್ರೆ ಕೂಟ ನೇರ ಸ್ಪರ್ಧೆ!

Date:

ಮುಂಬೈ ಮಹಾನಗರ ಪಾಲಿಕೆಗೆ (BMC) ಜನವರಿ 15ರಂದು ಚುನಾವಣೆ ನಡೆಯಲಿದೆ. ಪಾಲಿಕೆಯ ಒಟ್ಟು 227 ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಗೆದ್ದು, ಮುಂಬೈ ಆಡಳಿತವನ್ನು ಉಳಿಸಿಕೊಳ್ಳುವುದು ಮತ್ತು ಪಡೆದುಕೊಳ್ಳುವುದು ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ. ಈ ನಡುವೆ, ಕಾಂಗ್ರೆಸ್‌ ನೇತೃತ್ವದ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಒಡೆದಿರುವುದರಿಂದ, ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿದೆ.

ಮುಂಬೈ ಚುನಾವಣೆಗೆ ಹೊಸ ಮೈತ್ರಿಗಳು ಏರ್ಪಟ್ಟಿವೆ. ಎಂವಿಎ ಇಬ್ಬಾಗವಾಗಿದ್ದು, ಕಾಂಗ್ರೆಸ್‌, ಪ್ರಕಾಶ್‌ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ (ವಿಬಿಎ) ಹಾಗೂ ಮತ್ತು ರಾಷ್ಟ್ರೀಯ ಸಮಾಜ ಪಕ್ಷ (ಆರ್‌ಎಸ್‌ಪಿ) ಮೈತ್ರಿಕೂಟ ರಚಿಸಿವೆ. ಇನ್ನು, ಎಂವಿಎಯಿಂದ ಹೊರ ನಡೆದಿರುವ ಶಿವಸೇನಾ (ಉದ್ದವ್ ಬಣ) ಮತ್ತು ಎನ್‌ಸಿಪಿ (ಶರದ್ ಬಣ)ವು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್‌) ಜೊತೆ ಮೈತ್ರಿ ಮಾಡಿಕೊಂಡು, ಹೊಸ ಮೈತ್ರಿಕೂಟದಲ್ಲಿ ಸ್ಪರ್ಧೆಗಿಳಿದಿವೆ. ಇದೆಲ್ಲದರ ನಡುವೆ, ಮಹಾರಾಷ್ಟ್ರದ ಆಡಳಿತಾರೂಢ ಬಿಜೆಪಿ, ಶಿವಸೇನಾ (ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್ ಬಣ)ದ ಮಹಾಯುತಿಯು ಒಗ್ಗಟ್ಟಿನಿಂದ ಸ್ಪರ್ಧೆಗೆ ಇಳಿದಿದೆ.

ರಾಜ್ ಠಾಕ್ರೆ ಜೊತೆಗಿನ ಎಂವಿಎ ಮೈತ್ರಿಗೆ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಶಿವಸೇನೆ (ಉದ್ಧವ್ ಬಣ)ವು ಮರಾಠಿ ಭಾಷೆ ಮತ್ತು ಸಂಸ್ಕೃತಿಯನ್ನು ‘ಸಂರಕ್ಷಿಸಲು’ ಮೈತ್ರಿ ಅಗತ್ಯವೆಂದು ವಾದಿಸಿತ್ತು. ಈ ಕಾರಣದಿಂದಾಗ, ಎಂವಿಎ ವಿಭಜನೆಗೊಂಡಿದೆ. ಕಾಂಗ್ರೆಸ್‌ ಪ್ರತ್ಯೇಕಗೊಂಡಿದ್ದು, ಆರ್‌ಎಸ್‌ಪಿ ಮತ್ತು ವಿಬಿಎ ಜೊತೆಗಿನ ಮೈತ್ರಿಯಲ್ಲಿ ಸ್ಪರ್ಧಿಸಿದೆ. ಆದಾಗ್ಯೂ, ಈ ಎಂವಿಎ ಮೈತ್ರಿಯು ಮುಂಬೈ ಚುನಾವಣೆಯಲ್ಲಿ ಮಾತ್ರವೇ ವಿಭಜನೆಯಾಗಿದೆ. ರಾಜ್ಯ ಮಟ್ಟದಲ್ಲಿ ಅಸ್ತಿತ್ವದಲ್ಲಿದೆ ಎಂದು ಕಾಂಗ್ರೆಸ್‌ ಮತ್ತು ಶಿವಸೇನಾ ಪ್ರತಿಪಾದಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂವಿಎ ವಿಭಜನೆಯಿಂದಾಗಿ ಮುಂಬೈ ಪಾಲಿಕೆ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದಾಗ್ಯೂ, 32 ಸ್ಥಾನಗಳಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟದ ಯಾವುದೇ ಪಕ್ಷವು ಸ್ಪರ್ಧಿಸದ ಕಾರಣ, ಆ ಕ್ಷೇತ್ರಗಳಲ್ಲಿ ಮಹಾಯುತಿ ಮತ್ತು ಶಿವಸೇನಾ (ಉದ್ಧವ್ ಬಣ) ನೇತೃತ್ವದ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಇರಲಿದೆ. ಇಲ್ಲಿ, ತೃತೀಯ ರಂಗದ ಸ್ಪರ್ಧೆ ಇಲ್ಲವೆಂದು ವರದಿಯಾಗಿದೆ.

ಒಟ್ಟು 227 ಸ್ಥಾನಗಳ ಚುನಾವಣೆಯಲ್ಲಿ, ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ 165, ವಿಬಿಎ 62 ಹಾಗೂ ಆರ್‌ಎಸ್‌ಪಿ 10 ಸ್ಥಾನಗಳನ್ನು ಹಂಚಿಕೊಂಡಿದ್ದವು. ಆದರೆ, ವಿಬಿಎ ತನ್ನ ಪಾಲಿನ 62 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ. 21 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹೆಣಗಾಡುತ್ತಿದೆ. ವಿಬಿಎ 46 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಆರ್‌ಎಸ್‌ಪಿ ತನ್ನ ಪಾಲಿನ 10 ಸ್ಥಾನಗಳಲ್ಲಿ 6 ಸ್ಥಾನಗಳಿಗೆ ಮಾತ್ರವೇ ಅಭ್ಯರ್ಥಿಗಳನ್ನು ಘೋಷಿಸಿದೆ, ಕಾಂಗ್ರೆಸ್‌ ಕೂಡ ಈವರೆಗೆ 143 ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ಲೇಖನ ಓದಿದ್ದೀರಾ?: ಶರದ್ ಪವಾರ್ – ಅದಾನಿ ಸ್ನೇಹವೂ, ಪೊಲಿಟಿಕಲ್-ಕಾರ್ಪೊರೇಟ್ ಸಂಬಂಧವೂ!

ನಾಮಪತ್ರ ಸಲ್ಲಿಕೆಯ ಅವಧಿ ಡಿಸೆಂಬರ್ 30ಕ್ಕೆ ಮುಗಿದಿದ್ದು, ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟವು 195 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಳಿದ 32 ಸ್ಥಾನಗಳಲ್ಲಿನ ಸ್ಪರ್ಧೆಯಿಂದ ಹಿಂದೆ ಸರಿದಿವೆ.  ಈ ಕ್ಷೇತ್ರಗಳಲ್ಲಿ ಮೂರನೇ ರಂಗದ ಸ್ಪರ್ಧಿ ಇಲ್ಲದ ಕಾರಣ, ಮಹಾಯುತಿ ಮತ್ತು ಶಿವಸೇನಾ (ಉದ್ಧವ್ ಬಣ)ದ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಇರಲಿದೆ.

32 ಸ್ಥಾನಗಳಲ್ಲಿ ಕಾಂಗ್ರೆಸ್‌ ಮೈತ್ರಿಕೂಟದ ಸ್ಪರ್ಧೆ ಇಲ್ಲದ ಕಾರಣ, ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದಿಲ್ಲ. ಇದರಿಂದ ಠಾಕ್ರೆಗಳ ಮೈತ್ರಿಕೂಟಕ್ಕೆ ಅನುಕೂಲವಾಗಲಿದೆ ಎಂದು ಶಿವಸೇನೆ (ಉದ್ದವ್ ಬಣ)ದ ನಾಯಕರೊಬ್ಬರು ಹೇಳಿದ್ದಾರೆ.

“ವಿಬಿಎ ತನ್ನ ಪಾಲಿನ 16 ಸ್ಥಾನಗಳಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಕಾಂಗ್ರೆಸ್‌ಗೆ ಮೊದಲೇ ತಿಳಿದಿತ್ತು. ಆದಾಗ್ಯೂ, ಆ ಕ್ಷೇತ್ರಗಳಿಗೆ ಪರ್ಯಾಯ ಅಭ್ಯರ್ಥಿಗಳನ್ನು ಘೋಷಿಸದೆ ಕಾಂಗ್ರೆಸ್ ಸೂಕ್ತ ಕ್ರಮ ಕೈಗೊಂಡಿದೆ. ಇದು, ನಾಮಪತ್ರಗಳ ಪರಿಶೀಲನೆ ಮುಗಿದ ನಂತರ ಎಲ್ಲರಿಗೂ ಸ್ಪಷ್ಟವಾಗುತ್ತದೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...