ಬಿಬಿಎಂಪಿ ಮಾಜಿ ಸದಸ್ಯೆ ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಯತ್ನಿಸಿದ್ದ ಮುನಿರತ್ನ

Date:

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಿನಕಳೆಂದು ಮತ್ತೊಂದು ಮಗದೊಂದು ಆರೋಪಗಳು ಕೇಳಿಬರುತ್ತಿವೆ. ಜಾತಿ ನಿಂದನೆ, ಹನಿಟ್ರ್ಯಾಪ್‌, ಎಚ್‌ಐವಿ ಸೋಂಕಿತ ರಕ್ತ ಚುಚ್ಚಲು ಸಂಚು ಸೇರಿದಂತೆ ನಾನಾ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ (ಕಾರ್ಪೋರೇಟರ್‌) ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಯತ್ನಿಸಿದ್ದರು ಎಂದು ಸಂತ್ರಸ್ತೆಯ ಪತಿ ಆರೋಪಿಸಿದ್ದಾರೆ. ಎಸ್‌ಐಟಿ ಮುಂದೆ ದಾಖಲೆ ಸಲ್ಲಿಸಲು ಸಜ್ಜಾಗಿದ್ದಾರೆ.

ತಮ್ಮನ್ನು ಕೊಲೆ ಮಾಡಲು ಮುನಿರತ್ನ ಸಂಚು ಹೂಡಿದ್ದರು. ಕೊಲೆಗೆ ಸುಪಾರಿ ಕೊಟ್ಟಿದ್ದರು ಎಂದು ಆರೋಪಿಸಿ ಶನಿವಾರ ನಂದಿನಿ ಲೇಔಟ್ ಪೊಲೀಸ್‌ ಠಾಣೆಯಲ್ಲಿ ಲಗ್ಗೆರೆಯ ಮಾಜಿ ಕಾರ್ಪೋರೇಟರ್‌ ಮಂಜುಳಾ ಮತ್ತು ಅವರ ಪತಿ ನಾರಾಯಣಸ್ವಾಮಿ ದೂರು ದಾಖಲಿಸಿದ್ದರು. ಇದೀಗ, ಹನಿಟ್ರ್ಯಾಪ್‌ ಮಾಡಲು ತಮ್ಮ ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಮುನಿರತ್ನ ಯತ್ನಿಸಿದ್ದರು ಎಂದು ಮತ್ತೊಂದು ಆರೋಪ ಮಾಡಿದ್ದಾರೆ.

ನಾರಾಯಣಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿದ್ದು, “ನಮ್ಮ ವಿರುದ್ಧ ಮುನಿರತ್ನ ಷಡ್ಯಂತ್ರ ನಡೆಸಿದ್ದಾರೆ. ಅವರ ಷಡ್ಯಂತ್ರಗಳ ವಿಡಿಯೋ ಮತ್ತು ಆಡಿಯೋ ದಾಖಲೆಗಳು ನಮ್ಮ ಬಳಿಯಿವೆ. ನನ್ನ ಪತ್ನಿಯ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಲು ಮುನಿರತ್ನ ಯತ್ನಿಸಿದ್ದರು. ನಮ್ಮ ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಪ್ರಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮನೆ ಕೆಲಸದವರಿಗೆ ಕೋಟಿ ರೂಪಾಯಿ ಆಫರ್ ಕೊಟ್ಟು ಬೆಡ್ ರೂಂನಲ್ಲಿ ಕ್ಯಾಮರಾ ಇಡಲು ಯತ್ನಿಸಿದ್ದರು. ರಮೇಶ್ ಜಾರಕಿಹೊಳಿ ವಿಡಿಯೋ ಹೊರಬಂದ ಸಮಯದಲ್ಲೇ ನಮ್ಮ ಖಾಸಗಿ ವಿಡಿಯೋಗಳನ್ನು ಚಿತ್ರಸಿಲು ಯತ್ನಿಸಿದ್ದರು. ಇದೇ ರೀತಿ ಹಲವರ ವಿಡಿಯೋ ಮಾಡಿಕೊಂಡು ದೊಡ್ಡ ದೊಡ್ಡವರನ್ನೇ ಮುನಿರತ್ನ ಬ್ಲಾಕ್‌ಮೇಲ್‌ ಮಾಡಿದ್ದಾರೆ. ನಮ್ಮ ವಿರುದ್ಧದ ಪಿತೂರಿಯ ಎಲ್ಲ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸುತ್ತೇವೆ” ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...