ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಎಲ್ಲ ಶಾಸಕರಿಗೂ ಆಸೆ ಇದೆ: ಮುರುಗೇಶ್ ನಿರಾಣಿ

Date:

ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದೆ. ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಅಥವಾ ಮುಂದುವರೆಸದೇ ಇರುವ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು.

ಸುದ್ದಿಗಾರರ ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ನಿಮಗೂ ಆಸೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ನಾವು ಈ ಹಿಂದೆ 100ಕ್ಕೂ ಹೆಚ್ಚು ಶಾಸಕರಿದ್ದೆವು. ಈಗ 60ಕ್ಕೂ ಹೆಚ್ಚು ಮಂದಿ ಇದ್ದೇವೆ. ಎಲ್ಲರಿಗೂ ಆ ಹುದ್ದೆಯ ಬಗ್ಗೆ ಆಸೆ ಇರುತ್ತದೆ. ಅದರಲ್ಲಿ ತಪ್ಪಿಲ್ಲ. ಆದರೆ ನಮ್ಮ ಆಸೆಗಿಂತ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಅಮಿತ್‌ ಶಾ ಮತ್ತು ನರೇಂದ್ರ ಮೋದಿ ಅವರ ನಿರ್ಧಾರವೇ ಅಂತಿಮ ಎಂದರು.

ನಮ್ಮ ಪಕ್ಷದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜಿಲ್ಲಾ ಆಧ್ಯಕ್ಷರಿಂದ ರಾಷ್ಟ್ರೀಯ ಅಧ್ಯಕ್ಷರವರೆಗೂ ಚುನಾವಣೆ ನಡೆಯುತ್ತದೆ. ಈಗ ಸಂಘಟನಾ ಪರ್ವ ನಡೆಯುತ್ತಿದ್ದು, ಎಲ್ಲವೂ ಬದಲಾಗಲಿದೆ. ವಿಜಯೇಂದ್ರ ಅವರನ್ನು ಮಧ್ಯಂತರದಲ್ಲಿ ರಾಜ್ಯ ಘಟಕದ ಅಧ್ಯಕ್ಷನಾಗಿ ಆಯ್ಕೆ ಮಾಡಲಾಗಿತ್ತು. ಅವರ ಕಾರ್ಯಕ್ಷಮತೆಯನ್ನು ನೋಡಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದಲ್ಲಿನ ಅಸಮಾಧಾನ ಎದ್ದು ಕಾಣುತ್ತಿದೆ. ಆದರೆ ಈ ಎಲ್ಲವನ್ನೂ ಗಮನಿಸಿರುವ ವರಿಷ್ಠರು ಕೆಲವರೊಂದಿಗೆ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ. ಕೆಲವರನ್ನು ಕರೆಸಿಕೊಂಡು ಮಾಹಿತಿ ಪಡೆದಿದ್ದಾರೆ. ಇನ್ನು 8–10 ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...