ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ ಭರವಸೆ

Date:

  • ಸಿಎಂ ಭೇಟಿಯಾದ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಪ್ರತಿನಿಧಿಗಳು
  • ‘ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ’

ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನ ಪ್ರತಿನಿಧಿಗಳೊಂದಿಗೆ ಅವರು ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ನಿಯೋಗದ ಮುಖಂಡರು ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಮುಸ್ಲಿಮರು, ಆದಿವಾಸಿ, ಬುಡಕಟ್ಟು ಹಾಗೂ ಇನ್ನಿತರೆ ಅಲ್ಪಸಂಖ್ಯಾತ ಹಕ್ಕುಗಳಿಗೆ, ಕಾನೂನಿಗೆ ಧಕ್ಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ. ಅದರಂತೆ ಕಾನೂನು ಆಯೋಗವು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ತಮ್ಮ ಬೋರ್ಡ್‌ನ ವತಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿ ವಿರೋಧಿಸಿ ಒಂದು ಕೋಟಿಗೂ ಹೆಚ್ಚು ಸಹಿ ಸಂಗ್ರಹ ಮಾಡಿ ಕಾನೂನು ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರಕಟವಾದ ನಂತರ ಪರಿಶೀಲಿಸಿ ಪ್ರತಿಕ್ರಿಯಿಸಲಾಗುವುದು. ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ತಮ್ಮ ಸರ್ಕಾರ ಎಂದಿಗೂ ಅವಕಾಶ ನೀಡದು. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ’ ಎಂದು ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ನಿಯೋಗದ ಸದಸ್ಯರು ವಕ್ಫ್‌ ಆಸ್ತಿಗಳ ರಕ್ಷಣೆ ಮಾಡುವಂತೆಯೂ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

ಸಭೆಯಲ್ಲಿ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮಾಜಿ ಉಪಾಧ್ಯಕ್ಷ ಕೆ ರೆಹಮಾನ್‌ ಖಾನ್‌, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್‌ ಅಹ್ಮದ್‌ ಖಾನ್‌, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್‌, ಶಾಸಕ ರಿಜ್ವಾನ್‌ ಅರ್ಷದ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಝೀರ್‌ ಅಹ್ಮದ್‌, ಮೌಲಾನಾ ಸೈಯದ್‌ ಮುಸ್ತಫಾ ರಫಾಯಿ ನದ್ವಿ, ಮೌಲಾನಾ ಸೈಯದ್‌ ಮುಹಮ್ಮದ್‌ ತನ್ವೀರ್‌ ಹಶ್ಮಿ, ಮೌಲಾನಾ ಶಬೀರ್‌ ಅಹ್ಮದ್‌ ಹುಸೈನಿ ನದ್ವಿ, ಮುಫ್ತಿ ಇಫ್ತಿಕಾರ್‌ ಅಹ್ಮದ್‌ ಕಾಸ್ಮಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...