ಪರ್ಯಾಯ ಆಯ್ಕೆ ಸಿಕ್ಕ ಮೇಲೆ ಮುಸ್ಲಿಮರು ಕಾಂಗ್ರೆಸ್ ಕೈಬಿಡುತ್ತಾರೆ: ಆರ್‌ ಅಶೋಕ್

Date:

ಕರ್ನಾಟಕದಲ್ಲಿ ಕಾಂಗ್ರೆಸ್‌ ನಾಯಕರು ಈಗಲಾದರೂ ಎಚ್ಚೆತ್ತುಕೊಂಡು ಮುಸ್ಲಿಂ ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ. ಇಲ್ಲವಾದರೆ ಜಮ್ಮು ಕಾಶ್ಮೀರದಲ್ಲಿ, ಹರಿಯಾಣದಲ್ಲಿ ಆದ ಗತಿಯೇ ಕರ್ನಾಟಕದಲ್ಲಿಯೂ ಬರುವುದು ನಿಶ್ಚಿತ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಅಹ್ಮದ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಲ್ಲಿ ಸದನದಲ್ಲಿ ಮಾತಾನಾಡುವಾಗ ಅತಿಯಾದ ಮುಸ್ಲಿಂ ಓಲೈಕೆ, ವ್ಯಾಮೋಹ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತೆ ಎಂದು ಭವಿಷ್ಯ ನುಡಿದಿದ್ದೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯ ಫಲಿತಾಂಶ ನನ್ನ ಮಾತನ್ನ ಸಾಬೀತು ಪಡಿಸಿದೆ” ಎಂದಿದ್ದಾರೆ.

“ಎಲ್ಲಿಯವರೆಗೂ ಪರ್ಯಾಯ ಆಯ್ಕೆ ಇರುವುದಿಲ್ಲವೋ ಅಲ್ಲಿಯವರೆಗೆ ಮಾತ್ರ ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂಬ ಕಟು ಸತ್ಯವನ್ನು ಕಾಂಗ್ರೆಸ್ ಪಕ್ಷ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು. ಮುಸ್ಲಿಂ ಬಾಹುಳ್ಯದ ಕಾಶ್ಮೀರ ಪ್ರಾಂತ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಗತ್ಯವೇ ಇಲ್ಲ ಎನ್ನುವ ಧಾಟಿಯಲ್ಲಿ ಇಂಡಿ ಮಿತ್ರ ಪಕ್ಷ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಓಮರ್ ಅಬ್ದುಲ್ಲಾ ಅವರು ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಬಾಹುಳ್ಯದ ಜಮ್ಮು ಪ್ರಾಂತ್ಯದ ಮೇಲೆ ಗಮನ ಹರಿಸಲು ಬಹಿರಂಗ ಸಲಹೆ ನೀಡಿದ್ದರು. ಆದರೆ ಅತ್ತ ಮುಸ್ಲಿಮರ ಮತಗಳೂ ಇಲ್ಲದೆ, ಇತ್ತ ಹಿಂದೂಗಳ ಮತಗಳೂ ಇಲ್ಲದೆ ಕಾಂಗ್ರೆಸ್ ಪಕ್ಷ ಜಮ್ಮು-ಕಾಶ್ಮೀರದಲ್ಲಿ ಸಂಪೂರ್ಣವಾಗಿ ಸೋತು ಸುಣ್ಣವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ

“2014ರ ವಿಧಾನಸಭಾ ಚುನಾವಣೆಯಲ್ಲಿ 18% ಮತ ಪ್ರಮಾಣದ ಮೂಲಕ 12 ಸ್ಥಾನ ಗೆದಿದ್ದ ಕಾಂಗ್ರೆಸ್ ಪಕ್ಷ, 2024ರಲ್ಲಿ 12% ಮತ ಪಡೆಯುವ ಮೂಲಕ ಕೇವಲ 6 ಸ್ಥಾನಗಳಿಗೆ ಸೀಮಿತವಾಗಿದೆ. ಹಿಂದೂ ಬಾಹುಳ್ಯದ ಜಮ್ಮುವಿನಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಿದ್ದ 29 ಸ್ಥಾನಗಳಲ್ಲಿ ಕೇವಲ 1 ಸ್ಥಾನ ಗೆಲ್ಲಲು ಸಾಧ್ಯವಾಗಿದೆ” ಎಂದು ವಿಶ್ಲೇಷಿಸಿದ್ದಾರೆ.

“ಮತ್ತೊಂದು ಕಡೆ 2014ರಲ್ಲಿ 25 ಸೀಟು ಪಡೆದಿದ್ದ ಬಿಜೆಪಿ 2024ರಲ್ಲಿ 29 ಸೀಟು ಪಡೆದಿದೆ. 25.64% ಮತ ಗಳಿಸುವ ಮೂಲಕ ಮತಗಳಿಕೆ ಪ್ರಮಾಣದಲ್ಲಿ ನಷ್ಯಾನಲ್ ಕಾನ್ಫರೆನ್ಸ್ ಪಕ್ಷವನ್ನೂ ಮೀರಿಸಿ ಬಿಜೆಪಿ ಮೊದಲ ಸ್ಥಾನ ಪಡೆದಿದೆ. ಪ್ರಜ್ಞಾವಂತ ಮತದಾರರು ಅಭಿವೃದ್ದಿ ರಾಜಕಾರಣಕ್ಕೆ ಮತ ನೀಡುತ್ತಾರೆ, ಓಲೈಕೆ ರಾಜಕಾರಣವನ್ನು ತಿರಸ್ಕರಿಸುತ್ತಾರೆ ಎನ್ನುವುದಕ್ಕೆ ಜಮ್ಮು ಕಾಶ್ಮೀರದ ಚುನಾವಣೆಯೇ ಸಾಕ್ಷಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...