ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ ವಹಿಸಿದ ರಾಜ್ಯ ಸರ್ಕಾರ: ಉಳಿಯಿತು 10,700 ಎಕರೆ ‘ದೇವರ ಸ್ವತ್ತು’

Date:

‘ವಕ್ಫ್ ಮಂಡಳಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್’ ನೀಡಿರುವುದಾಗಿ ಬಿಜೆಪಿ ಹಾಗೂ ಸಂಘಪರಿವಾರ ಗುಲ್ಲೆಬ್ಬಿಸಿ, ದೊಡ್ಡ ಸಂಘರ್ಷ ಉಂಟಾಗುವಂತೆ ಮಾಡಿತ್ತು. ಇದರ ಮಧ್ಯೆಯೇ ರಾಜ್ಯದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ(ಮುಜರಾಯಿ ಇಲಾಖೆ) ಈ ಸಾಧನೆ ಮಾಡಿದೆ.

ರಾಜ್ಯದಲ್ಲಿ ವಕ್ಫ್‌ ಆಸ್ತಿಯ ಪ್ರಕರಣ ರಾಜಕೀಯ ಚರ್ಚೆಯಾಗಿ ತಣ್ಣಗಾಗುತ್ತಾ ಬರುತ್ತಿರುವಾಗಲೇ ಹಿಂದೂ ದೇವಾಲಯಗಳ ಆಸ್ತಿಗಳ ರಕ್ಷಣೆಗೆ ಮಹತ್ವದ ಕ್ರಮ ವಹಿಸಿರುವ ರಾಜ್ಯದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ(ಮುಜರಾಯಿ ಇಲಾಖೆ), 10,700 ಎಕರೆ ‘ದೇವರ ಸ್ವತ್ತು’ ಉಳಿಸುವಲ್ಲಿ ಯಶಸ್ವಿಯಾಗಿದೆ.

ಧರ್ಮ ಧರ್ಮಗಳ‌ ನಡುವೆ ದ್ವೇಷದ ಬೆಂಕಿ ಹಚ್ಚಿ, ಹಿಂದೂ ಧರ್ಮವನ್ನು ರಕ್ಷಣೆ ಮಾಡುತ್ತೇವೆ ಎಂದು ಬೊಬ್ಬಿಡುವ ಬಿಜೆಪಿ ಮತ್ತು ಸಂಘಪರಿವಾರವು ದೇವಸ್ಥಾನಗಳ ಸೊತ್ತುಗಳ ಉಳಿವಿಗಾಗಿ ಯಾವುದೇ ಕಾರ್ಯ ಮಾಡದಿದ್ದರೂ, ಬರೀ ಬಾಯಿ ಮಾತಿನಲ್ಲಿ ಹಿಂದೂ ಧರ್ಮ, ದೇವಾಲಯಗಳ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಭಾಷಣ ಮಾಡುತ್ತಿರುವುದು ಎಲ್ಲರಿಗೂ ತಿಳಿದಿದೆ. ಆದರೆ, ಈ ನಡುವೆ ಯಾವುದೇ ಸದ್ದುಗದ್ದಲವಿಲ್ಲದೇ ತಮ್ಮ‌ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಮೂಲಕ ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿದ್ದ ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು, 10,700 ಎಕರೆ ‘ದೇವರ ಸ್ವತ್ತು’ ಉಳಿಸುವಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟು ಅರ್ಚಕ ಸಮುದಾಯದ ಸಂತಸಕ್ಕೆ ಕಾರಣರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅರ್ಚಕ ಸಮುದಾಯವು, ಮುಜರಾಯಿ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರ ಕಾರ್ಯವೈಖರಿಯನ್ನು ಮೆಚ್ಚಿಕೊಂಡಿದ್ದು, ಯಾವುದೇ ಸದ್ದುಗದ್ದಲವಿಲ್ಲದೆ ತಮ್ಮ‌ ಕಾರ್ಯಕ್ರಮ ಹಾಗೂ ಯೋಜನೆಗಳ ಮೂಲಕ ರಾಜ್ಯದ ಮುಜರಾಯಿ ದೇವಸ್ಥಾನದ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಜಮೀನು ಅನ್ಯರ ಪಾಲಾಗಿದ್ದನ್ನು ಮತ್ತೆ ಇಲಾಖೆಗೆ ಸೇರಿಸಿಕೊಂಡಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಹಾಗೂ ಇಲಾಖೆಯ ಕಾರ್ಯ ಆಸ್ತಿಕ ಸಮುದಾಯದಲ್ಲಿ ಸಂತೋಷದ ಹೊನಲನ್ನು‌ ಹರಿಸಿದೆ ಎಂದು ರಾಜ್ಯದ ಅರ್ಚಕ ಸಮುದಾಯ ತಿಳಿಸಿದೆ.

ರಾಜ್ಯದ ಮುಜರಾಯಿ ದೇವಸ್ಥಾನದ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಜಮೀನು ಅನ್ಯರ ಪಾಲಾಗಿತ್ತು. ಕೆಲ ಸಂಸ್ಥೆಗಳು, ಟ್ರಸ್ಟ್‌ಗಳು ಹಾಗೂ ಖಾಸಗಿ ವ್ಯಕ್ತಿಗಳು ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಇದನ್ನು ಹಿಂದಿನ ಬಿಜೆಪಿ ಸರಕಾರವು ತೆರವು ಮಾಡುವ ಕಡೆ ಯಾವುದೇ ಒಲವು ತೋರಿರಲಿಲ್ಲ.

WhatsApp Image 2024 12 24 at 12.46.15 PM

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮುಜರಾಯಿ ಇಲಾಖೆ ಖಾತೆಯನ್ನು ವಹಿಸಿಕೊಂಡ ರಾಮಲಿಂಗಾ ರೆಡ್ಡಿ ಅವರ ಬದ್ಧತೆಯಿಂದ ಈವರೆಗೆ ರಾಜ್ಯದ ವಿವಿಧ ದೇವಸ್ಥಾನಗಳ 10,700 ಎಕರೆ ಜಮೀನನ್ನು ರಕ್ಷಣೆ ಮಾಡಲಾಗಿದೆ. ಒಟ್ಟು 5022 ಆಸ್ತಿಗಳಿಗೆ ಕಂದಾಯ ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಸೃಷ್ಟಿಸಿ, ದೇವಸ್ಥಾನಗಳ ಅಧೀನಕ್ಕೆ ನೀಡಲಾಗಿದೆ ಎಂದು ಮುಜರಾಯಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒತ್ತುವರಿ ತೆರವುಗೊಳಿಸಿದ ಮುಜರಾಯಿ ಇಲಾಖೆ

ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ 34,564 ದೇವಸ್ಥಾನಗಳ ಪೈಕಿ ಬಹುತೇಕ ದೇವಸ್ಥಾನಗಳಿಗೆ ಸರ್ಕಾರ ಮತ್ತು ದಾನಿಗಳು ನೀಡಿದ ಆಸ್ತಿಯಿದೆ. ಆದರೆ, ಬಹುತೇಕ ದೇವಸ್ಥಾನಗಳ ಆಸ್ತಿ ಖಾಸಗಿ ಪಾಲಾಗಿತ್ತು. ಇದೀಗ ಸರ್ವೆ ನಡೆಸಿ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಆಸ್ತಿಗಳನ್ನು ಮರು ವಶಪಡಿಸಿಕೊಳ್ಳಲಾಗಿದೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 34,166 ಸಿ ದರ್ಜೆಯ ದೇವಸ್ಥಾನಗಳು, 193 ಬಿ ದರ್ಜೆಯ ದೇವಸ್ಥಾನ ಹಾಗೂ 205 ‘ಎ’ ದರ್ಜೆಯ ದೇವಸ್ಥಾನಗಳಿವೆ. ಈ ದೇವಸ್ಥಾನಗಳಿಗೆ ಸರ್ಕಾರದಿಂದ ಹಾಗೂ ದಾನಿಗಳಿಂದ ದಾನದ ರೂಪದಲ್ಲಿ ಬಂದ ಸಾವಿರಾರು ಎಕರೆ ಆಸ್ತಿಯಿದೆ. ಆದರೆ, ಈವರೆಗೆ ಆ ಆಸ್ತಿಗಳಿಗೆ ಸೂಕ್ತ ದಾಖಲೆಗಳಿರಲಿಲ್ಲ. ಇದೀಗ ಕಂದಾಯ ಇಲಾಖೆ ಎಲ್ಲ ಆಸ್ತಿಗಳಿಗೆ ದಾಖಲೆ ಒದಗಿಸುವ ಕೆಲಸ ಮಾಡಿದೆ.

WhatsApp Image 2024 12 24 at 1.28.29 PM
ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರೊಂದಿಗೆ ಆಯುಕ್ತರಾದ ಡಾ. ವೆಂಕಟೇಶ್ ಎಂ ವಿ

“ನಮ್ಮ ಸರ್ಕಾರ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಧಿಕಾರಕ್ಕೆ ಬಂದ ನಂತರ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನು ದೇವಸ್ಥಾನಗಳಿಗೆ ಮರಳಿ ಕೊಡಿಸಲಾಗಿದೆ. ದಾಖಲೆಗಳು ಇಲ್ಲದೇ ಇದ್ದ ಜಮೀನುಗಳಿಗೆ ಸೂಕ್ತ ದಾಖಲೆ ಸೃಷ್ಟಿಸಿಕೊಡುವಲ್ಲಿ ಕಂದಾಯ ಇಲಾಖೆ ಯಶಸ್ವಿಯಾಗಿದೆ” ಎಂದು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

“ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಂಡ ಪರಿಣಾಮ ವರ್ಷದಲ್ಲಿ 5022 ಆಸ್ತಿಗಳನ್ನು ಇಲಾಖೆಯ ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಸೂಕ್ತ ದಾಖಲೆ ಒದಗಿಸಿದ ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಇಲಾಖೆ ಅಧಿಕಾರಿಗಳಿಗೆ ಮುಜರಾಯಿ ಇಲಾಖೆ ವತಿಯಿಂದ ಧನ್ಯವಾದ ಸಲ್ಲಿಸುತ್ತೇನೆ” ಎಂದು ಸಚಿವರು ತಿಳಿಸಿದ್ದಾರೆ.

“ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಆ ಪಕ್ಷದಿಂದ ಮಾಡಲು ಆಗದ ಕೆಲಸವನ್ನು ನಾವು ಮಾಡಿದ್ದೇವೆ. ಧರ್ಮ ಬೇರೆ ರಾಜಕೀಯ ಬೇರೆ, ಧರ್ಮ ಭಾವನೆಗೆ ಸಂಬಂಧಿಸಿದ್ದು ಅದರೊಡನೆ ರಾಜಕೀಯ ಬೆರೆಸಿ, ಕಿಚ್ಚು ಹಚ್ಚಿಸುವ ಕೆಲಸವನ್ನು ಇನ್ನಾದರೂ ಬಿ.ಜೆ.ಪಿಯವರು ಬಿಡಬೇಕು” ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

“ಹಿಂದೂಗಳ ಪರ ಎನ್ನುವವ ಬಿಜೆಪಿಯವರು, ಹಿಂದೂ ದೇವಾಲಯಗಳನ್ನು ರಕ್ಷಿಸಲು, ದಾಖಲೆಗಳನ್ನು ಸರಿಪಡಿಸಲು ಇವರ ಅಧಿಕಾರವಧಿಯಲ್ಲಿ ಇವರಿಗೆ ಸಾಧ್ಯವಾಗಲಿಲ್ಲವೇಕೆ? ಕಾಂಗ್ರೆಸ್ ಸರ್ಕಾರವೇ ಬಂದು ಈ ಕ್ರಾಂತಿಕಾರಿ ಬದಲಾವಣೆ‌ ಮಾಡಲೆಂದು ಕಾಯುತ್ತಿದ್ದರೇ?” ಎಂದು ಪ್ರಶ್ನಿಸಿದ್ದಾರೆ.

ವಕ್ಫ್ ಬೋರ್ಡ್‌ ಬೆನ್ನಲ್ಲೇ ಕಾರ್ಯಪ್ರವೃತ್ತವಾಗಿದ್ದ ಮುಜರಾಯಿ ಇಲಾಖೆ

ವಕ್ಫ್ ಮಂಡಳಿ ನೀಡಿದ್ದ ನೋಟಿಸ್ ರಾಜಕೀಯವಾಗಿ ವಿವಾದದ ಸ್ವರೂಪಕ್ಕೆ ಪಡೆಯುತ್ತಿದ್ದಂತೆಯೇ ಕಾರ್ಯ ಪ್ರವೃತ್ತರಾಗಿದ್ದ ಮುಜರಾಯಿ ಇಲಾಖೆಯು, ತನ್ನ ಅಧಿಕಾರ ವ್ಯಾಪ್ತಿಯಲ್ಲಿರುವ ದೇವಾಲಯಗಳ ಆಸ್ತಿ ರಕ್ಷಣೆಗೆ ಮುಂದಾಗಿತ್ತು.

‘ವಕ್ಫ್ ಮಂಡಳಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್’ ನೀಡಿರುವುದಾಗಿ ಬಿಜೆಪಿ ಹಾಗೂ ಸಂಘಪರಿವಾರ ಗುಲ್ಲೆಬ್ಬಿಸಿ, ದೊಡ್ಡ ಸಂಘರ್ಷ ಉಂಟಾಗುವಂತೆ ಮಾಡಿತ್ತು. ಇದರ ಮಧ್ಯೆಯೇ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ, ಅಧಿಕಾರಿಗಳ ಸಭೆ ನಡೆಸಿದ್ದಲ್ಲದೇ, ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಸಾವಿರಾರು ಎಕರೆ ಜಮೀನು ಒತ್ತುವರಿಯಾಗಿದ್ದು, ಅವುಗಳ ತೆರವುಗೊಳಿಸಲು ಸ್ಪಷ್ಟ ನಿರ್ದೇಶನ ನೀಡಿದ್ದರು.

ಮುಜರಾಯಿ ಇಲಾಖೆಗೆ ಕಂದಾಯ ಇಲಾಖೆಯೂ ಸಾಥ್

ಇತ್ತೀಚೆಗೆ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನಿಸಲಾಗಿತ್ತು.

ಈ ಸಂಬಂಧ ಪ್ರತ್ಯೇಕ ಸಭೆ ನಡೆಸಿದ್ದ ಹಿಂದೂ ಧಾರ್ಮಿಕ ಧತ್ತಿ ಇಲಾಖೆ ಆಯುಕ್ತರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಲ್ಲದೇ, ಮುಜರಾಯಿ ದೇವಾಲಯಗಳ ಒತ್ತುವರಿಯಾದ ಆಸ್ತಿಗಳ ಸರ್ವೆ ಕಾರ್ಯ ನಡೆಸಲು ನಿರ್ದೇಶನ ನೀಡಿದ್ದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಆಸ್ತಿಗಳ ಸರ್ವೆ ನಡೆಸಿ, ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಸರ್ವೆ ನಡೆಸಲು ಕಂದಾಯ ಇಲಾಖೆ ಸರ್ವೆಯರ್​ಗಳ ನೆರವನ್ನೂ ಕೂಡ ಪಡೆಯಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ಮೂಲಕ ವಿನಂತಿಸಲಾಗಿತ್ತು.

krishna byre gowda 3 edited
ಕಂದಾಯ ಸಚಿವ ಕೃಷ್ಣಬೈರೇಗೌಡ

ದೇವಾಲಯಕ್ಕೆ ಸಂಬಂಧಿಸಿದ ಸ್ಥಿರಾಸ್ತಿ ಒತ್ತುವರಿ ಪ್ರಕರಣ ಕಂಡುಬಂದಲ್ಲಿ ಅದನ್ನು ತೆರವುಗೊಳಿಸಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆ ಹಿರಿಯ ಅಧಿಕಾರಿಗಳು ನಿರ್ದೆಶನ ನೀಡಿದ್ದರು.

ಇದನ್ನು ಓದಿದ್ದೀರಾ? ಯುವಜನತೆಯ ಜೀವಕ್ಕೆ ಕುತ್ತು ತರುತ್ತಿರುವ ಮೋಸದಾಟ: ಆನ್‌ಲೈನ್ ಗೇಮಿಂಗ್‌ ಬಗ್ಗೆ ಇರಲಿ ಎಚ್ಚರ

ಬಹುತೇಕ ಕಡೆ ದೇವಾಲಯಗಳ ಜಾಗವನ್ನು ಒತ್ತುವರಿ ಮಾಡಲಾಗಿದ್ದು, ಸುದೀರ್ಘ ವರ್ಷಗಳಿಂದ ಮನೆ, ಕಟ್ಟಡಗಳನ್ನು ನಿರ್ಮಿಸಿ ವಾಸವಾಗಿದ್ದಾರೆ. ಮೊದಲಿಗೆ ಆಸ್ತಿಗಳ ಪತ್ತೆ ಕಾರ್ಯ ನಡೆಸಿ, ಮುಜರಾಯಿ ದೇವಾಲಯಗಳ ಆಸ್ತಿಗೆ ಬೇಲಿ ಹಾಕಿ ರಕ್ಷಿಸುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದರು. ಬಳಿಕ ಒತ್ತುವರಿ ಭೂಮಿಯನ್ನು ತೆರವು ಮಾಡುವ ನಿಟ್ಟಿನಲ್ಲಿ ಕಾನೂನು ಹೋರಾಟ ನಡೆಸುವ ಸಂಬಂಧ ದಾಖಲೆಗಳನ್ನು ಕ್ರೋಡೀಕರಿಸುವಂತೆ ಸೂಚಿಸಿದ್ದರು. ಸದ್ಯ ಎಲ್ಲ ಮಾಹಿತಿ ಇದೀಗ ಮುಜರಾಯಿ ಅಧಿಕಾರಿಗಳಿಗೆ ಲಭ್ಯವಾಗಿದ್ದು, 10,700 ಎಕರೆ ‘ದೇವರ ಸ್ವತ್ತು’ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುಜರಾಯಿಗೊಂದು ನ್ಯಾಯ, ವಕ್ಫ್‌ಗೊಂದು ನ್ಯಾಯ ಸರಿಯೇ? ಬಿಜೆಪಿಯವರು ಈ ಬಗ್ಗೆ ಏನು ಹೇಳುವರು?

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...