ಉಪಚುನಾವಣೆ | ಕುಟುಂಬದ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ: ಡಿಕೆ ಶಿವಕುಮಾರ್

Date:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಅದಕ್ಕೆ ಸಿದ್ಧ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲದಕ್ಕೂ ಅವರು ತೆರೆ ಎಳೆದಿದ್ದಾರೆ.

ಈ ಕುರಿತಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಡಿ ಕೆ ಶಿವಕುಮಾರ್, ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು’ ಎಂದು ವಿನಂತಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿನ್ನೆಯಷ್ಟೆ ಹೆಚ್ಚುವರಿ ಡಿಸಿಎಂ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ್ದ ಡಿ ಕೆ ಶಿವಕುಮಾರ್, ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

”ಮಾಧ್ಯಮಗಳು ಪ್ರಚಾರ ಮಾಡುತ್ತವೆಯೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ” ಎಂದು ಹೇಳಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, ”ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ” ಎಂದು ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...