ನನ್ನ ಸರ್ಕಾರದ ಅವಧಿ ನಾಲ್ಕು ವರ್ಷವಿದೆ, ಮುಂದೆ ನಾನು ಚುನಾವಣೆ ನಿಲ್ಲಲ್ಲ: ಸಿದ್ದರಾಮಯ್ಯ

Date:

ನನ್ನ ಸರ್ಕಾರದ ಅವಧಿಯೇ ನಾಲ್ಕು ವರ್ಷವಿದೆ. ನನ್ನ 82 ನೇ ವಯಸ್ಸಿಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷವಾಗುತ್ತದೆ. ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಈ ಬಗ್ಗೆ ಯಾವುದೇ ರೀತಿಯ ಆತಂಕವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವರುಣಾ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಯಸುತ್ತಿರುವ ಬಗ್ಗೆ ಮಾಧ್ಯಮದವರು ಮೈಸೂರಿನಲ್ಲಿ ಪ್ರಶ್ನಿಸಿದಾಗ ಸಿಎಂ ಪ್ರತಿಕ್ರಿಯಿಸಿದರು.

“ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ

“ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿ ಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ” ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅಮಿತ್ ಶಾ ಅವರು ಬರಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ. ಮೇಕೆದಾಟು ಯೋಜನೆ, ಮಹದಾಯಿ ಯೋಜನೆಗೂ ಇದುವರೆಗೆ ಅನುಮತಿ ನೀಡಿದ್ದಾರೆಯೇ? ಚುನಾವಣಾ ಆಯೋಗ ನೀಡಿರುವ ನೋಟಿಸ್ ಗೆ ಉತ್ತರ ನೀಡಲಾಗಿದೆ. ಸಿಬಿಐ ನವರು ನೀಡಿರುವ ವರದಿಯ ಮೇಲೆ ಅವರು ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಸ್ಪಷ್ಟೀಕರಣವನ್ನು ಈಗಾಗಲೇ ನೀಡಿದ್ದೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಕಾಂಗ್ರೆಸ್ ಸರ್ಕಾರದ ಸಾಧನೆಗಳ ಮೇಲೆ ಚುನಾವಣೆ

ವರುಣಾ ಕ್ಷೇತ್ರದ ಮುಖ್ಯಮಂತ್ರಿಗಳ ನಿನ್ನೆಯ ಪ್ರಚಾರ ಭಾಷಣದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ರಾಜ್ಯದಲ್ಲಿ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಮುಂದುವರೆಯಬೇಕಾದರೆ ನಮ್ಮ ಸರ್ಕಾರವೇ ಅಸ್ತಿತ್ವದಲ್ಲಿರಬೇಕು. ಬಿಜೆಪಿಯವರು ಅಧಿಕಾರಕ್ಕೆ ಬಂದಲ್ಲಿ, ಜನಪರ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಜನರಿಗೆ ಮನವರಿಕೆ ಮಾಡಿಸಿದ್ದೇನೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರ ಮಾಡಿರುವ ಸಾಧನೆಗಳ ಆಧಾರದ ಮೇಲೆ ಮತ ಕೇಳುತ್ತಿದ್ದು, ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ” ಎಂಬ ಭರವಸೆಯಿದೆ ಎಂದರು.

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ

“ರಾಜ್ಯದಲ್ಲಿ ಬರದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಾಧ್ಯಮಗಳು ಊಹಾಪೋಹಗಳ ಮೇಲೆ ವರದಿ ಮಾಡಬಾರದು. ರಾಜ್ಯದ ಯಾವುದೇ ಭಾಗದಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಅಕ್ರಮ ಗಣಿಗಾರಿಕೆ: ಸಚಿವರ ವಿರುದ್ಧ ವರದಿ ಬಂದಿಲ್ಲ

ಶಾಸಕ ಜನಾರ್ಧನ ರೆಡ್ಡಿಯವರು ಸಚಿವರಾದ ಸಂತೋಷ್ ಲಾಡ್ ಹಾಗೂ ನಾಗೇಂದ್ರ ಅವರ ಮೇಲೆ ಅಕ್ರಮ ಗಣಿಗಾರಿಕೆ ಆರೋಪದ ಕುರಿತು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅಕ್ರಮ ಗಣಿಗಾರಿಕೆ ನಡೆಸಿರುವ ಬಗ್ಗೆ ಸಾಕ್ಷ್ಯಧಾರಗಳಿದ್ದರೆ ನ್ಯಾಯಾಯಲದ ಮೊರೆ ಹೋಗಬೇಕು. ಜನಾರ್ಧನ ರೆಡ್ಡಿಯವರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು ಎಂದು ವರದಿಯಲ್ಲಿ ಬಂದ ಕಾರಣದಿಂದಾಗಿ, ನಾನು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹೋರಾಟ ಮಾಡಿ, ಪಾದಯಾತ್ರೆ ಕೈಗೊಂಡಿದ್ದೆ. ಈ ರೀತಿಯ ಯಾವ ವರದಿಗಳು ಈ ಸಚಿವರ ಮೇಲೆ ಬಂದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಕಾಂಗ್ರೆಸ್ ಪರ ಜನರ ಒಲವು

ಮಂಡ್ಯದಲ್ಲಿ ಕುಮಾರಸ್ವಾಮಿಯವರು ಚುನಾವಣೆ ಎದುರಿಸುತ್ತಿರುವುದು ದೈವೇಚ್ಛೆ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿ, “ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮಗನನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿ ಸೋಲನ್ನು ಅನುಭವಿಸಿದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ್ದರಿಂದ ಅವರು ಹಾಸನದಲ್ಲಿ ಗೆಲುವನ್ನು ಸಾಧಿಸಿದರು. ಈ ಬಾರಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂದು ಕಾರ್ಯಪ್ರವೃತ್ತರಾಗಿದ್ದು, ಹಾಸನದ ಜನತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...