ಮೈಸೂರು | 1,700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿಎಂ ಸಿದ್ದರಾಮಯ್ಯ

Date:

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.

170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ 49 ಕೋಟಿ ರೂ ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3,4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನೂ ನೆರವೇರಿಸಿ ಮಾತನಾಡಿದರು.

“ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದ ಮುಖ್ಯಮಂತ್ರಿಗಳು, ನೀವು ವಿದ್ಯಾರ್ಥಿನಿಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ತಾನೇ” ಎಂದು ಪ್ರಶ್ನಿಸಿದರು. ವಿದ್ಯಾರ್ಥಿನಿಯರು ಹೌದೂ ಎಂದು ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

“ಇಲ್ಲಿಯವರೆಗೂ 325 ಕೋಟಿ ಫ್ರೀ ಟಿಕೆಟ್ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾಭಿಮಾನಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯ. ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿ, ಶಿಕ್ಷಣ ಕಲಿತೂ ಜಾತಿವಾದಿಗಳಾದರೆ ಏನು ಪ್ರಯೋಜನ” ಎಂದು ಕೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...